ಇಂದು 'ಇನ್ಫಿನಿಕ್ಸ್ ಹಾಟ್ 12' ಫೋನ್ ಫಸ್ಟ್ ಸೇಲ್!..ಅಗ್ಗದ ಬೆಲೆಗೆ ಲಭ್ಯ!
ಇನ್ಫಿನಿಕ್ಸ್ ಸ್ಮಾರ್ಟ್‌ಫೋನ್ ಕಂಪನಿಯ ದೇಶಿಯ ಮಾರುಕಟ್ಟೆಗೆ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ನೂತನ 'ಇನ್ಫಿನಿಕ್ಸ್ ಹಾಟ್ 12' (Infinix Hot 12) ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಆಗಷ್ಟ್ 23) ಮಧ್ಯಾಹ್ನ 12 ರಿಂದ ಇ ಕಾಮರ್ಸ್ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಮೊದಲ ಮಾರಾಟ ಪ್ರಾರಂಭಿಸಲಿದೆ. ಇನ್ನು ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನಿನ 6 GB + 64 GB ಸ್ಟೋರೇಜ್ ವೇರಿಯಂಟ್‌ನ ಬೆಲೆಯು ಬೆಲೆ 9,499 ರೂ.ಗಳು ಆಗಿದ್ದು, ಕೆಲವು ಆಕರ್ಷಕ ಕೊಡುಗೆ ಲಭ್ಯವಾಗಲಿವೆ.

ಹೌದು, ಇನ್ಫಿನಿಕ್ಸ್ ಹಾಟ್ 12 ಸ್ಮಾರ್ಟ್‌ಫೋನ್ ಫಸ್ಟ್ ಸೇಲ್ ಇಂದು ಫ್ಲಿಪ್‌ಕಾರ್ಟ್‌ನಲ್ಲಿ ನಡೆಯಲಿದೆ. ಈ ಫೋನ್ ಹಿಂಬದಿಯಲ್ಲಿ ಟ್ರಿಪಲ್ ಕ್ಯಾಮೆರಾ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಜೊತೆಗೆ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಇದು ಒಳಗೊಂಡಿದೆ.

ಹಾಗೆಯೇ ಈ ಸ್ಮಾರ್ಟ್‌ಫೋನ್ ಒಂದೇ ಒಂದು ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಅದು 4GB + 64GB ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇನ್ನುಳಿದಂತೆ ಇನ್ಫಿನಿಕ್ಸ್ ಹಾಟ್ 12 ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?
ಇನ್ಫಿನಿಕ್ಸ್ ಹಾಟ್ 12 ಸ್ಮಾರ್ಟ್‌ಫೋನ್ 6.82 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:5:9 ರಚನೆಯ ಅನುಪಾತವನ್ನು ಹೊಂದಿದ್ದು, ತಡೆರಹಿತ ಬ್ರೌಸಿಂಗ್ ಅನುಭವವನ್ನು ನೀಡಲಿದೆ. ಇದು 90.66% ನ ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 460 ನಿಟ್ಸ್ ಬ್ರೈಟ್‌ನೆಸ್ ಮತ್ತು 1500:1 ಕಾಂಟ್ರಾಸ್ಟ್ ಅನುಪಾತವನ್ನು ಒಳಗೊಂಡಿದ್ದು, ಉತ್ತಮವಾದ ವೀಡಿಯೊ ವೀಕ್ಷಣೆಯ ಅನುಭವವನ್ನು ಒದಗಿಸುತ್ತದೆ.

ಪ್ರೊಸೆಸರ್ ಕಾರ್ಯದಕ್ಷತೆ ಏನು?
ಇನ್ಫಿನಿಕ್ಸ್ ಹಾಟ್ 12 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G37 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 XOS 7.6 ಬೆಂಬಲವನ್ನು ಪಡೆದಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ವರ್ಚುವಕ್ RAM ಮೂಲಕ 3GB RAM ಅನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಮೆಮೊರಿ ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು 256GB ವರೆಗೆ ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶವನ್ನು ಕೂಡ ನೀಡಲಾಗಿದೆ.

ಕ್ಯಾಮೆರಾ ಸೆಟ್ಅಪ್ ಎಷ್ಟಿದೆ?
ಇನ್ಫಿನಿಕ್ಸ್ ಹಾಟ್ 12 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು AI ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಇನ್ನು ಹಿಂಬದಿಯ ಕ್ಯಾಮೆರಾ ಕ್ವಾಡ್ ಎಲ್ಇಡಿ ಫ್ಲ್ಯಾಷ್ ಮತ್ತು ಸೆಲ್ಫಿ ಕ್ಯಾಮೆರಾ ಡ್ಯುಯಲ್ ಎಲ್ಇಡಿ ಫ್ಲ್ಯಾಷ್ ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್ ಹೇಗಿದೆ?
ಇನ್ಫಿನಿಕ್ಸ್ ಹಾಟ್ 12 ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬಿಗ್ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜರ್ ಅನ್ನು ಬೆಂಬಲಿಸಲಿದೆ. ಇದು 62.97 ದಿನಗಳ ಸ್ಟ್ಯಾಂಡ್‌ಬೈ ಟೈಂ, 49.37 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್, 28.79 ಗಂಟೆಗಳ ವೀಡಿಯೊ ಪ್ಲೇಬ್ಯಾಕ್, 172.61 ಗಂಟೆಗಳ ಹೆಡ್‌ಫೋನ್ ಪ್ಲೇಬ್ಯಾಕ್, 14.83 ಗಂಟೆಗಳ ವೆಬ್ ಬ್ರೌಸಿಂಗ್, 15.85 ಗಂಟೆಗಳ ಗೇಮಿಂಗ್ ಅನುಭವ ನೀಡಲಿದೆ.

ಇತರೆ ಫೀಚರ್ಸ್?
ಇನ್ಫಿನಿಕ್ಸ್ ಹಾಟ್ 12 ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ 5.0, GPS/ A-GPS, ಮತ್ತು USB ಟೈಪ್-C ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ ಬ್ಯಾಕ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಪಡೆದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 12 ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ಆವೃತ್ತಿಗೆ 9,499ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಎಕ್ಸ್‌ಪ್ಲೋರೇಟರಿ ಬ್ಲೂ, ಪೋಲಾರ್ ಬ್ಲ್ಯಾಕ್, ಪರ್ಪಲ್ ಮತ್ತು ಟರ್ಕೋಯಿಸ್ ಸಯಾನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಫ್ಲಿಪ್‌ಕಾರ್ಟ್‌ನಲ್ಲಿ ಇದೇ ಆಗಸ್ಟ್ 23 ರಂದು ಮಧ್ಯಾಹ್ನ 12 ಗಂಟೆಗೆ ತನ್ನ ಫಸ್ಟ್ ಸೇಲ್ ನಡಸಲಿದೆ.


Click it and Unblock the Notifications








