ಬಜೆಟ್‌ ಬೆಲೆಯ ಇನ್ಫಿನಿಕ್ಸ್‌ ಹಾಟ್‌ 12ಪ್ಲೇ ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಇನ್ಫಿನಿಕ್ಸ್‌ ಕಂಪೆನಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಬಜೆಟ್‌ ಬೆಲೆಯಲ್ಲಿ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಇನ್ಫಿನಿಕ್ಸ್‌ ಹಾಟ್‌ 12ಪ್ಲೇ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 10W ಪ್ರಮಾಣಿತ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಭಾರತದಲ್ಲಿ ಹೊಸ ಇನ್ಫಿನಿಕ್ಸ್‌ ಹಾಟ್‌ 12ಪ್ಲೇ ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯೂನಿಸೋಕ್‌ T610 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಷಾಂಪೇನ್ ಗೋಲ್ಡ್, ಡೇಲೈಟ್ ಗ್ರೀನ್, ಹಾರಿಜಾನ್ ಬ್ಲೂ ಮತ್ತು ರೇಸಿಂಗ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಇನ್ಫಿನಿಕ್ಸ್‌ ಹಾಟ್‌ 12ಪ್ಲೇ 1,640x720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.82-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ 480 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 90.66% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ಫಿನಿಕ್ಸ್‌ ಹಾಟ್‌ 12ಪ್ಲೇ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯೂನಿಸೋಕ್‌ T610 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ XOS 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಹೆಚ್ಚುವರಿ ಅಂತರ್ಗತ ಸಂಗ್ರಹಣೆಯನ್ನು ಬಳಸಿಕೊಂಡು RAM ಅನ್ನು 3GB ವರೆಗೆ ವಿಸ್ತರಿಸಬಹುದು. ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 256GB ವರೆಗೆ ಇಂಟರ್‌ ಸ್ಟೋರೇಜ್‌ ಅನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ಫಿನಿಕ್ಸ್‌ ಹಾಟ್‌ 12 ಪ್ಲೇ ಕ್ವಾಡ್-LED ಫ್ಲ್ಯಾಷ್ ಜೊತೆಗೆ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13-ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಡ್ಯುಯಲ್ LED ಫ್ಲ್ಯಾಷ್‌ನೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ಫಿನಿಕ್ಸ್‌ ಹಾಟ್‌ 12 ಪ್ಲೇ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಪ್ರಮಾಣಿತ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, WCDMA, ಬ್ಲೂಟೂತ್‌ v5ಯನ್ನು ಹೊಂದಿದೆ. ಇದಲ್ಲದೆ ಜಿ-ಸೆನ್ಸರ್, ಇ-ಕಂಪಾಸ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ ಗೈರೊಸ್ಕೋಪ್ ಮತ್ತು ಸಾಮೀಪ್ಯ ಸಂವೇದಕವನ್ನು ಒಳಗೊಂಡಿವೆ. ಫೋನ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ಹಾಟ್‌ 12ಪ್ಲೇ ಭಾರತದಲ್ಲಿ ಏಕೈಕ 4GB + 64GB ಸ್ಟೋರೇಜ್ ರೂಪಾಂತರಕ್ಕೆ 8,499ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಷಾಂಪೇನ್ ಗೋಲ್ಡ್, ಡೇಲೈಟ್ ಗ್ರೀನ್, ಹಾರಿಜಾನ್ ಬ್ಲೂ ಮತ್ತು ರೇಸಿಂಗ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇದು ಮೇ 30 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಪ್ರಸ್ತುತ ಬೆಲೆ ಲಾಂಚ್‌ ಆಫರ್‌ ಬೆಲೆಯಾಗಿದೆ. ಆದರೆ ಈ ಲಾಂಚ್‌ ಆಫರ್‌ ಬೆಲೆ ಎಷ್ಟು ಕಾಲ ಉಳಿಯುತ್ತದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Infinix Hot 12 Play has a dual rear camera setup led by the 13-megapixel main sensor.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X