ಇಂದು ಇನ್ಫಿನಿಕ್ಸ್ ಹಾಟ್ 12 ಪ್ಲೇ ಫಸ್ಟ್ ಸೇಲ್!.ಬಿಗ್ ಬ್ಯಾಟರಿ ಇದೆ, ಬೆಲೆಯು ಅಗ್ಗ!
ಇನ್ಫಿನಿಕ್ಸ್ ಮೊಬೈಲ್ ಕಂಪನಿಯ ಭಾರತದಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ಇನ್ಫಿನಿಕ್ಸ್ ಹಾಟ್ 12 ಪ್ಲೇ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಮೇ 30) ಮಧ್ಯಾಹ್ನ 12 ರಿಂದ ಇ ಕಾಮರ್ಸ್ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಫಸ್ಟ್ ಸೇಲ್ ಶುರುವಾಗಲಿದೆ. ಇನ್ನು ಫ್ಲಿಪ್‌ಕಾರ್ಟ್‌ನಲ್ಲಿ ಈ ಸ್ಮಾರ್ಟ್‌ಫೋನಿನ ಬೆಲೆ 8,499ರೂ..ಗಳು ಆಗಿದ್ದು, ಕೆಲವು ಆಕರ್ಷಕ ಕೊಡುಗೆ ಲಭ್ಯವಾಗಲಿವೆ.

ಹೌದು, ಇನ್ಫಿನಿಕ್ಸ್ ಹಾಟ್ 12 ಪ್ಲೇ ಸ್ಮಾರ್ಟ್‌ಫೋನ್ ಫಸ್ಟ್ ಸೇಲ್ ಇಂದು ಫ್ಲಿಪ್‌ಕಾರ್ಟ್‌ನಲ್ಲಿ ನಡೆಯಲಿದೆ. ಈ ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಪಡೆದಿದ್ದು, ಜೊತೆಗೆ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4GB + 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇನ್ನುಳಿದಂತೆ ಇನ್ಫಿನಿಕ್ಸ್ ಹಾಟ್ 12 ಪ್ಲೇ ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಇನ್ಫಿನಿಕ್ಸ್ ಹಾಟ್ 12 ಪ್ಲೇ ಫೋನ್ 1,640 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.82 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ 480 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 90.66% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.
ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ಹಾಟ್ 12 ಪ್ಲೇ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಯೂನಿಸೋಕ್ T610 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ XOS 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಹೊಂದಿದೆ. ಇದಲ್ಲದೆ ಹೆಚ್ಚುವರಿ ಅಂತರ್ಗತ ಸಂಗ್ರಹಣೆಯನ್ನು ಬಳಸಿಕೊಂಡು RAM ಅನ್ನು 3GB ವರೆಗೆ ವಿಸ್ತರಿಸಬಹುದು. ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಇಂಟರ್ ಸ್ಟೋರೇಜ್ ಅನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ
ಇನ್ಫಿನಿಕ್ಸ್ ಹಾಟ್ 12 ಪ್ಲೇ ಕ್ವಾಡ್ LED ಫ್ಲ್ಯಾಷ್ ಜೊತೆಗೆ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಡ್ಯುಯಲ್ LED ಫ್ಲ್ಯಾಷ್‌ನೊಂದಿಗೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯ
ಇನ್ಫಿನಿಕ್ಸ್ ಹಾಟ್ 12 ಪ್ಲೇ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಪ್ರಮಾಣಿತ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, WCDMA, ಬ್ಲೂಟೂತ್ v5ಯನ್ನು ಹೊಂದಿದೆ. ಇದಲ್ಲದೆ ಜಿ-ಸೆನ್ಸರ್, ಇ-ಕಂಪಾಸ್ ಸೆನ್ಸಾರ್ ಅನ್ನು ಒಳಗೊಂಡಿದೆ ಗೈರೊಸ್ಕೋಪ್ ಮತ್ತು ಸಾಮೀಪ್ಯ ಸಂವೇದಕವನ್ನು ಒಳಗೊಂಡಿವೆ. ಫೋನ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಸಹ ಒಳಗೊಂಡಿದೆ.
ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಹಾಟ್ 12 ಪ್ಲೇ ಭಾರತದಲ್ಲಿ ಏಕೈಕ 4GB + 64GB ಸ್ಟೋರೇಜ್ ರೂಪಾಂತರಕ್ಕೆ 8,499ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಷಾಂಪೇನ್ ಗೋಲ್ಡ್, ಡೇಲೈಟ್ ಗ್ರೀನ್, ಹಾರಿಜಾನ್ ಬ್ಲೂ ಮತ್ತು ರೇಸಿಂಗ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇದು ಮೇ 30 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ.


Click it and Unblock the Notifications