ಇಂದು ಇನ್ಫಿನಿಕ್ಸ್ ಹಾಟ್ 12 ಪ್ರೊ ಫಸ್ಟ್ ಸೇಲ್; ಡಿಸ್ಕೌಂಟ್ ಎಷ್ಟು ಗೊತ್ತಾ?
ಇನ್ಫಿನಿಕ್ಸ್ ಸ್ಮಾರ್ಟ್‌ಫೋನ್ ಕಂಪನಿಯ ದೇಶಿಯ ಮಾರುಕಟ್ಟೆಗೆ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ನೂತನ 'ಇನ್ಫಿನಿಕ್ಸ್ ಹಾಟ್ 12 ಪ್ರೊ' (Infinix Hot 12 Pro) ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಆಗಷ್ಟ್ 8) ಮಧ್ಯಾಹ್ನ 12 ರಿಂದ ಇ ಕಾಮರ್ಸ್ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಮೊದಲ ಮಾರಾಟ ಪ್ರಾರಂಭಿಸಲಿದೆ. ಇನ್ನು ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನಿನ 6GB + 64GB ಸ್ಟೋರೇಜ್ ವೇರಿಯಂಟ್‌ನ ಬೆಲೆಯು ಬೆಲೆ 10,999 ರೂ.ಗಳು ಆಗಿದ್ದು, ಕೆಲವು ಆಕರ್ಷಕ ಕೊಡುಗೆ ಲಭ್ಯವಾಗಲಿವೆ.

ಹೌದು, ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ ಫಸ್ಟ್ ಸೇಲ್ ಇಂದು ಫ್ಲಿಪ್‌ಕಾರ್ಟ್‌ನಲ್ಲಿ ನಡೆಯಲಿದೆ. ಈ ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಇದು ಒಳಗೊಂಡಿದೆ.

ಹಾಗೆಯೇ ಈ ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಅವುಗಳು ಕ್ರಮವಾಗಿ 4GB + 64GB ಮತ್ತು 8GB + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇನ್ನುಳಿದಂತೆ ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?
ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ 6.6 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,612x720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲವನ್ನು ಹೊಂದಿದೆ. ಅಲ್ಲದೆ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 480 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಪಡೆದುಕೊಂಡಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್ ಕಾರ್ಯವೈಖರಿ ಏನು?
ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ 12nm ಯೂನಿಸೋಕ್ T616 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ XOS 10.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಹೆಚ್ಚುವರಿ ಅಂತರ್ಗತ ಸಂಗ್ರಹಣೆಯನ್ನು ಬಳಸಿಕೊಂಡು RAM ಅನ್ನು 5GB ವರೆಗೆ ವಿಸ್ತರಿಸಬಹುದಾಗಿದೆ. ಮೆಮೊರಿ ಕಾರ್ಡ್ ಬೆಂಬಲದ ಬಗ್ಗೆ ಮಾಹಿತಿ ಲಭ್ಯವಿಲ್ಲ.

ಕ್ಯಾಮೆರಾ ಸೆಟ್‌ಅಪ್ ಎಷ್ಟಿದೆ?
ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ AI ಬೆಂಬಲಿತ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಪ್ರೈಮೆರಿ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ ಡ್ಯುಯಲ್ LED ಫ್ಲ್ಯಾಷ್ ಅನ್ನು ಒಳಗೊಂಡಿದೆ. ಇದಲ್ಲದೆ ಡ್ಯುಯಲ್-ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ AI ಬೆಂಬಲಿತ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್ ಜೂಮ್, ಆಟೋ ಫ್ಲ್ಯಾಶ್, ಫೇಸ್ ಡಿಟೆಕ್ಷನ್, ಟಚ್ ದಿ ಫೋಕಸ್ ಅನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್ ಏನಿದೆ?
ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಬ್ಯಾಟರಿಯು 79 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ಟೈಂ, 41 ಗಂಟೆಗಳ ಕಾಲ್ ಟೈಂ ಮತ್ತು 12 ಗಂಟೆಗಳ ಗೇಮಿಂಗ್ ಟೈಂ ಅನ್ನು ಸಿಂಗಲ್ ಚಾರ್ಜ್‌ನಲ್ಲಿ ನೀಡಲಿದೆ. ಜೊತೆಗೆ ಇದು 45 ದಿನಗಳವರೆಗೆ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ ಎಂದು ಇನ್ಫಿನಿಕ್ಸ್ ಕಂಪೆನಿ ಹೇಳಿಕೊಂಡಿದೆ.

ಇತರೆ ಫೀಚರ್ಸ್‌ಗಳೇನು?
ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, WCDMA, GSM, Wi-Fi 802.11 a/b/g/n, ಬ್ಲೂಟೂತ್ v5, ಮತ್ತು GPS/ A-GPS ಬೆಂಬಲಿಸಲಿದೆ. ಆಂಬಿಯೆಂಟ್ ಲೈಟ್ ಸೆನ್ಸಾರ್, ಜಿ-ಸೆನ್ಸಾರ್, ಇ-ಕಂಪಾಸ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಈ ಸ್ಮಾರ್ಟ್‌ಫೋನ್‌ನಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್ ವ್ಯವಸ್ಥೆಯನ್ನು ಕೂಡ ನೀಡಲಾಗಿದೆ. ಇದಲ್ಲದೆ, ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ 164.2x75x8.42mm ಅಳತೆ ಮತ್ತು 191 ಗ್ರಾಂ ತೂಗುತ್ತದೆ.

ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ ಬೇಸ್ ಮಾಡೆಲ್ 6GB RAM + 64GB ಸ್ಟೋರೇಜ್ ಆಯ್ಕೆಗೆ 10,999 ರೂ. ಬೆಲೆಯನ್ನು ಹೊಂದಿದೆ. ಹಾಗೆಯೇ 8GB RAM + 128GB ಸ್ಟೋರೇಜ್ ಮಾಡೆಲ್ ಬೆಲೆ 12,999 ರೂ.ಹೊಂದಿದೆ. ಇನ್ಫಿನಿಕ್ಸ್ ಹಾಟ್ 12 ಪ್ರೊ ಆಗಸ್ಟ್ 8 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಈ ಸ್ಮಾರ್ಟ್‌ಫೋನ್ ಎಲೆಕ್ಟ್ರಿಕ್ ಬ್ಲೂ ಮತ್ತು ಲೈಟ್‌ಸೇಬರ್ ಬಣ್ಣದ ಆಯ್ಕೆಗಳಲ್ಲಿ ದೊರೆಯಲಿದೆ.

ಆಫರ್ ಏನಿದೆ?
ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ ಲಾಂಚ್ ಆಫರ್‌ನಲ್ಲಿ 1,000ರೂ, ರಿಯಾಯಿತಿ ಸಿಗುತ್ತೆ. ಟಾಪ್ ಎಂಡ್ ಮಾದರಿಯನ್ನು ಕೇವಲ 11,999ರೂ.ಬೆಲೆಗೆ ಖರೀದಿಸಬಹುದು. ಆದರೆ ಲಾಂಚ್ ಆಫರ್ ಎಷ್ಟು ದಿನಗಳ ಕಾಲ ಇರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಇದಲ್ಲದೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಇನ್ಫಿನಿಕ್ಸ್ ಹಾಟ್ 12 ಪ್ರೊ ಖರೀದಿಸಿದರೆ 5% ಕ್ಯಾಶ್‌ಬ್ಯಾಕ್ ಲಭ್ಯವಾಗಲಿದೆ. ಜೊತೆಗೆ ಗ್ರಾಹಕರು ಕೊಟಕ್ ಮಹೀಂದ್ರಾ ಬ್ಯಾಂಕ್ ಕಾರ್ಡ್‌ಗಳು ಮತ್ತು EMI ವಹಿವಾಟುಗಳನ್ನು ಬಳಸುವ ಖರೀದಿಗಳಿಗೆ 10% ರಿಯಾಯಿತಿಯನ್ನು ಪಡೆಯಬಹುದು.

ಇನ್ಫಿನಿಕ್ಸ್ ಹಾಟ್ 12 ಪ್ಲೇ ಫೋನ್ ಫೀಚರ್ಸ್:
ಇನ್ಫಿನಿಕ್ಸ್ ಹಾಟ್ 12 ಪ್ಲೇ ಫೋನ್ 1,640 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.82 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಯೂನಿಸೋಕ್ T610 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಜೊತೆಗೆ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಹಾಗೆಯೇ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.


Click it and Unblock the Notifications








