Home
ಸುದ್ದಿಜಾಲ

ಇನ್ಫಿನಿಕ್ಸ್‌ನಿಂದ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ! 6000mAh ಬ್ಯಾಟರಿ!

ಭಾರತದ ಮೊಬೈಲ್‌ ಮಾರುಕಟ್ಟೆಯಲ್ಲಿ ಅಗ್ಗದ ಬೆಲೆಯ ಫೋನ್‌ಗಳಿಗೆ ಇನ್ಫಿನಿಕ್ಸ್‌ ಕಂಪೆನಿ ಪ್ರಸಿದ್ಧಿ ಪಡೆದುಕೊಂಡಿದೆ. ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಬಯಸುವವರನ್ನು ಗುರಿಯಾಗಿರಿಸಿಕೊಂಡಿರುವ ಇನ್ಫಿನಿಕ್ಸ್‌ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಕೈಗೆಟಕುವ ಬೆಲೆಯಲ್ಲಿ ಅತ್ಯಾಕರ್ಷಕ ಫೀಚರ್ಸ್‌ ಒಳಗೊಂಡ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವ ಮೂಲಕ ಗ್ರಾಹಕರ ಗಮನಸೆಳೆದಿದೆ. ಸದ್ಯ ಇದೀಗ ಇನ್ಫಿನಿಕ್ಸ್‌ ಕಂಪೆನಿ ಹೊಸ ಇನ್ಫಿನಿಕ್ಸ್‌ ಹಾಟ್‌ 12 ಅನ್ನು ಲಾಂಚ್‌ ಮಾಡಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಭಾರತದಲ್ಲಿ ಹೊಸ ಇನ್ಫಿನಿಕ್ಸ್‌ ಹಾಟ್‌ 12 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕೈ ಗೆಟಕುವ ಬೆಲೆಯನ್ನು ಹೊಂದಿದ್ದು, 6,000mAh ಬ್ಯಾಟರಿ ಸಾಮರ್ಥ್ಯವನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ಫಿನಿಕ್ಸ್‌ ಹಾಟ್‌ 12 ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ಇನ್ಫಿನಿಕ್ಸ್‌ ಹಾಟ್‌ 12 ಸ್ಮಾರ್ಟ್‌ಫೋನ್‌ 6.82 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:5:9 ರಚನೆಯ ಅನುಪಾತವನ್ನು ಹೊಂದಿದ್ದು, ತಡೆರಹಿತ ಬ್ರೌಸಿಂಗ್ ಅನುಭವವನ್ನು ನೀಡಲಿದೆ. ಇದು 90.66% ನ ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 460 ನಿಟ್ಸ್ ಬ್ರೈಟ್‌ನೆಸ್ ಮತ್ತು 1500:1 ಕಾಂಟ್ರಾಸ್ಟ್ ಅನುಪಾತವನ್ನು ಒಳಗೊಂಡಿದ್ದು, ಉತ್ತಮವಾದ ವೀಡಿಯೊ ವೀಕ್ಷಣೆಯ ಅನುಭವವನ್ನು ಒದಗಿಸುತ್ತದೆ.

ಪ್ರೊಸೆಸರ್‌ ಕಾರ್ಯದಕ್ಷತೆ ಏನು?

ಪ್ರೊಸೆಸರ್‌ ಕಾರ್ಯದಕ್ಷತೆ ಏನು?

ಇನ್ಫಿನಿಕ್ಸ್‌ ಹಾಟ್‌ 12 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 XOS 7.6 ಬೆಂಬಲವನ್ನು ಪಡೆದಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ವರ್ಚುವಕ್‌ RAM ಮೂಲಕ 3GB RAM ಅನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಮೆಮೊರಿ ಕಾರ್ಡ್‌ ಬಳಸಿ ಸಂಗ್ರಹ ಸಾಮರ್ಥ್ಯವನ್ನು 256GB ವರೆಗೆ ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶವನ್ನು ಕೂಡ ನೀಡಲಾಗಿದೆ.

ಕ್ಯಾಮೆರಾ ಸೆಟ್ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್ಅಪ್‌ ಎಷ್ಟಿದೆ?

ಇನ್ಫಿನಿಕ್ಸ್‌ ಹಾಟ್‌ 12 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು AI ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಇನ್ನು ಹಿಂಬದಿಯ ಕ್ಯಾಮೆರಾ ಕ್ವಾಡ್ ಎಲ್ಇಡಿ ಫ್ಲ್ಯಾಷ್ ಮತ್ತು ಸೆಲ್ಫಿ ಕ್ಯಾಮೆರಾ ಡ್ಯುಯಲ್ ಎಲ್ಇಡಿ ಫ್ಲ್ಯಾಷ್ ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಹೇಗಿದೆ?

ಬ್ಯಾಟರಿ ಬ್ಯಾಕ್‌ಅಪ್‌ ಹೇಗಿದೆ?

ಇನ್ಫಿನಿಕ್ಸ್‌ ಹಾಟ್‌ 12 ಸ್ಮಾರ್ಟ್‌ಫೋನ್‌ 6000mAh ಸಾಮರ್ಥ್ಯದ ಬಿಗ್‌ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜರ್ ಅನ್ನು ಬೆಂಬಲಿಸಲಿದೆ. ಇದು 62.97 ದಿನಗಳ ಸ್ಟ್ಯಾಂಡ್‌ಬೈ ಟೈಂ, 49.37 ಗಂಟೆಗಳ ಮ್ಯೂಸಿಕ್‌ ಪ್ಲೇಬ್ಯಾಕ್, 28.79 ಗಂಟೆಗಳ ವೀಡಿಯೊ ಪ್ಲೇಬ್ಯಾಕ್, 172.61 ಗಂಟೆಗಳ ಹೆಡ್‌ಫೋನ್ ಪ್ಲೇಬ್ಯಾಕ್, 14.83 ಗಂಟೆಗಳ ವೆಬ್ ಬ್ರೌಸಿಂಗ್, 15.85 ಗಂಟೆಗಳ ಗೇಮಿಂಗ್‌ ಅನುಭವ ನೀಡಲಿದೆ. ಜೊತೆಗೆ ಇದು ಪವರ್ ಮ್ಯಾರಥಾನ್ ಟೆಕ್ ಅನ್ನು ಹೊಂದಿದೆ, ಇದು ಬ್ಯಾಟರಿ ಅವಧಿಯನ್ನು 25% ವರೆಗೆ ವಿಸ್ತರಿಸುವ ಸಾಮರ್ಥ್ಯವನ್ನು ಹೊಂದಿದೆ.

ಇತರೆ ಫೀಚರ್ಸ್‌?

ಇತರೆ ಫೀಚರ್ಸ್‌?

ಇನ್ಫಿನಿಕ್ಸ್‌ ಹಾಟ್‌ 12 ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ 5.0, GPS/ A-GPS, ಮತ್ತು USB ಟೈಪ್-C ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಜೊತೆಗೆ ಬ್ಯಾಕ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಇನ್ಫಿನಿಕ್ಸ್‌ ಹಾಟ್‌ 12 ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ಆವೃತ್ತಿಗೆ 9,499ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಎಕ್ಸ್‌ಪ್ಲೋರೇಟರಿ ಬ್ಲೂ, ಪೋಲಾರ್ ಬ್ಲ್ಯಾಕ್, ಪರ್ಪಲ್ ಮತ್ತು ಟರ್ಕೋಯಿಸ್ ಸಯಾನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಫ್ಲಿಪ್‌ಕಾರ್ಟ್‌ನಲ್ಲಿ ಇದೇ ಆಗಸ್ಟ್ 23 ರಂದು ಮಧ್ಯಾಹ್ನ 12 ಗಂಟೆಗೆ ತನ್ನ ಫಸ್ಟ್‌ ಸೇಲ್‌ ನಡಸಲಿದೆ.

Best Mobiles in India

English summary
infinix Hot 12 sports a triple rear camera setup that comprises a 50-megapixel primary sensor paired with f/1.6 aperture lens.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+