ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಇನ್ಫಿನಿಕ್ಸ್‌ ಹಾಟ್‌ 20 ಸರಣಿ!

|

ಇನ್ಫಿನಿಕ್ಸ್‌ ಕಂಪೆನಿ ತನ್ನ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಇದೀಗ ತನ್ನ ಹೊಸ ಇನ್ಫಿನಿಕ್ಸ್‌ ಹಾಟ್‌ 20 5G ಮತ್ತು ಹಾಟ್‌ 20 ಪ್ಲೇ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ಇನ್ಫಿನಿಕ್ಸ್‌ ಕಂಪೆನಿ ಈ ಸ್ಮಾರ್ಟ್‌ಫೋನ್‌ಗಳನ್ನು ನವೆಂಬರ್ 30 ರಂದು ಭಾರತದಲ್ಲಿ ಪರಿಚಯಿಸಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್‌ಗಳು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿವೆ ಎನ್ನಲಾಗಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ತನ್ನ ಹಾಟ್‌ 20 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಶೀಘ್ರದಲ್ಲೇ ಭಾರತದಲ್ಲಿ ಪರಿಚಯಿಸಲಿದೆ. ಈ ಸ್ಮಾರ್ಟ್‌ಫೋನ್‌ಗಳು 15,000ರೂ. ಬೆಲೆ ವಿಭಾಗದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಇದರಲ್ಲಿ ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಆದರೆ ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್‌ ಹಾಟ್‌ 20 5G ಫೀಚರ್ಸ್‌ ಹೇಗಿದೆ?

ಇನ್ಫಿನಿಕ್ಸ್‌ ಹಾಟ್‌ 20 5G ಫೀಚರ್ಸ್‌ ಹೇಗಿದೆ?

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 240hz ಟಚ್ ಸ್ಯಾಪ್ಲಿಂಗ್‌ ರೇಟ್‌ ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ಫೀಚರ್ಸ್‌ ಹೇಗಿದೆ?

ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ಫೀಚರ್ಸ್‌ ಹೇಗಿದೆ?

ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ಸ್ಮಾರ್ಟ್‌ಫೋನ್‌ 6.82 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1,640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸಲಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿರಲಿದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ. ಎರಡನೇ ಕ್ಯಾಮೆರಾದ ವಿವರ ಇನ್ನು ಬಹಿರಂಗವಾಗಿಲ್ಲ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 18W ವೇಗದ ಚಾರ್ಜಿಂಗ್‌ ಬೆಂಬಲಿಸುವ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ಹಾಟ್‌ 20 5G ಮತ್ತು ಇನ್ಫಿನಿಕ್ಸ್‌ ಹಾಟ್‌ 20ಪ್ಲೇ ಸ್ಮಾರ್ಟ್‌ಫೋನ್‌ ಭಾರತದಲ್ಲಿ ನವೆಂಬರ್ 30 ರಂದು ಬಿಡುಗಡೆಯಾಗಲಿದೆ. ಇದರಲ್ಲಿ ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ 15,000ರೂ. ಬೆಲೆಯಲ್ಲಿ ಬರುವ ಸಾಧ್ಯತೆಯಿದೆ. ಆದರೆ ಇನ್ಫಿನಿಕ್ಸ್‌ ಹಾಟ್‌ 20ಪ್ಲೇ ಸ್ಮಾರ್ಟ್‌ಫೋನ್‌ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಫ್ಲಿಪ್‌ಕಾರ್ಟ್ ಮೂಲಕ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ.

Best Mobiles in India

English summary
Infinix Hot 20 5G and Hot 20 Play India launch soon

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X