ಇಂದು ಇನ್ಫಿನಿಕ್ಸ್‌ ಹಾಟ್‌ 20 5G ಫಸ್ಟ್‌ ಸೇಲ್‌!..ಆಫರ್‌ ಏನು?..ಬೆಲೆ ಎಷ್ಟು?

|

ಇನ್ಫಿನಿಕ್ಸ್‌ ಮೊಬೈಲ್ ಸಂಸ್ಥೆಯ ತನ್ನ ಬಹುನಿರೀಕ್ಷಿತ ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಆಗಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಡಿ 9) ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ಇನ್ಫಿನಿಕ್ಸ್‌ ತಾಣದ ಮೂಲಕ ಮೊದಲ ಮಾರಾಟ ಆರಂಭಿಸಲಿದೆ. ಇನ್ನು ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್ ಆರಂಭಿಕ ಬೆಲೆಯು 11,999 ರೂ. ಆಗಿದೆ.

ಇನ್ಫಿನಿಕ್ಸ್‌

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್‌ 4GB + 64GB ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು ವಿಸ್ತರಿಸಬಹುದಾಗಿದೆ. ಹಾಗೆಯೇ ಇದು ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ.

ಚಾರ್ಜಿಂಗ್

ಇನ್ನು ಇನ್ಫಿನಿಕ್ಸ್‌ ಹಾಟ್‌ 20 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ಬಲದಲ್ಲಿದೆ. ಹಾಗಾದರೇ ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ? ಇದರೆ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್ 6.6 ಇಂಚಿನ ಪುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೆ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 20:9 ರಚನೆಯ ಅನುಪಾತ ಮತ್ತು 240hz ಟಚ್ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇಯಲ್ಲಿ ಬಳಕೆದಾರರು 60Hz, 90Hz, ಅಥವಾ 120Hz ರಿಫ್ರೆಶ್ ರೇಟ್‌ ಅನ್ನು ಹಸ್ತಚಾಲಿತವಾಗಿ ಇಲ್ಲವೆ ಆಟೋ-ಸ್ವಿಚ್ ಮೋಡ್ ಮೂಲಕ ಸೆಟ್‌ ಮಾಡಬಹುದಾಗಿದೆ.

ಪ್ರೊಸೆಸರ್‌ ಸಾಮರ್ಥ್ಯ ಹೇಗಿದೆ?

ಪ್ರೊಸೆಸರ್‌ ಸಾಮರ್ಥ್ಯ ಹೇಗಿದೆ?

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಆಧಾರಿತ XOS 10.6ನಿಂದ ರನ್‌ ಆಗಲಿದೆ. ಹಾಗೆಯೇ 4GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಕೂಡ ಅವಕಾಶ ನೀಡಿದೆ.

ಡ್ಯುಯಲ್‌ ರಿಯರ್‌ ಕ್ಯಾಮೆರಾ

ಡ್ಯುಯಲ್‌ ರಿಯರ್‌ ಕ್ಯಾಮೆರಾ

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸೆಲ್ಫಿ ಕ್ಯಾಮೆರಾವನ್ನು ವಾಟರ್‌ಡ್ರಾಪ್-ಶೈಲಿಯ ನಾಚ್‌ನಲ್ಲಿ ಇರಿಸಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?

ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?

ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದ್ದು, ಮೂರು ದಿನಗಳವರೆಗೆ ಬ್ಯಾಕ್‌ಅಪ್‌ ನೀಡಲಿದೆ ಎಂದು ಹೇಳಲಾಗಿದೆ. ಈ ಫೋನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಡ್ಯುಯಲ್-ಬ್ಯಾಂಡ್, ಹಾಟ್‌ಸ್ಪಾಟ್, ಬ್ಲೂಟೂತ್ ಅನ್ನು ಹೊಂದಿದೆ. ಜೊತೆಗೆ FM ರೇಡಿಯೋ,USB ಟೈಪ್-C 2.0 ಅನ್ನು ಸಹ ನೀಡಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ 4GB RAM + 128GB ಸ್ಟೋರೇಜ್ 11,999ರೂ. ಪ್ರೈಸ್‌ ಟ್ಯಾಗ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಬ್ಲಾಸ್ಟರ್ ಗ್ರೀನ್, ರೇಸಿಂಗ್ ಬ್ಲ್ಯಾಕ್ ಮತ್ತು ಸ್ಪೇಸ್ ಬ್ಲೂ ಬಣ್ಣಗಳ ಆಯ್ಕೆ ಪಡೆದಿದೆ.

Best Mobiles in India

English summary
Infinix Hot 20 5G First Sale Today Via Flipkart: Price in India, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X