Home
ಸುದ್ದಿಜಾಲ

ಬಿಗ್‌ ಡಿಸ್ಕೌಂಟ್‌ನಲ್ಲಿ 5G ಮೊಬೈಲ್‌ ಖರೀದಿಸಬೇಕೆ?..ಹಾಗಿದ್ರೆ, ಈ ಆಫರ್‌ ಗಮನಿಸಿ!

ಅಗ್ಗದ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಗುರುತಿಸಿಕೊಂಡಿರುವ ಇನ್ಫಿನಿಕ್ಸ್‌ ಮೊಬೈಲ್‌ ಬ್ರ್ಯಾಂಡ್‌ ಕೆಲವು ಆಕರ್ಷಕ ಫೋನ್‌ಗಳ ಲಿಸ್ಟ್‌ ಹೊಂದಿದೆ. ಆ ಪೈಕಿ ಕಡಿಮೆ ದರದಲ್ಲಿ 5G ಫೋನ್‌ಗಳ ಆಯ್ಕೆ ಕೂಡಾ ಪಡೆದಿದ್ದು, ಕಂಪನಿಯ ಇನ್ಫಿನಿಕ್ಸ್‌ ಹಾಟ್‌ 20 5G ಡಿಸೈನ್‌ ಹಾಗೂ ಬೆಲೆಯಿಂದ ಗ್ರಾಹಕರ ಗಮನ ಸೆಳೆದಿದೆ.

ಹೌದು, ಇನ್ಫಿನಿಕ್ಸ್‌ ಹಾಟ್‌ 20 5G ಫೋನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಶೇ. 23% ರಷ್ಟು ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಫೋನಿನ 6 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಇದೀಗ ಕೊಡುಗೆಯಲ್ಲಿ 15,321 ರೂ. ಗಳ ದರದಲ್ಲಿ ಖರೀದಿಗೆ ಲಭ್ಯ ಸಿಗಲಿದೆ. ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್‌ ಕೊಡುಗೆ ಕೂಡಾ ಲಭ್ಯ ಆಗಲಿವೆ.

ಬಿಗ್‌ ಡಿಸ್ಕೌಂಟ್‌ನಲ್ಲಿ 5G ಮೊಬೈಲ್‌ ಖರೀದಿಸಬೇಕೆ?..ಹಾಗಿದ್ರೆ, ಈ ಆಫರ್‌ ಗಮನಿಸಿ

ಅಂದಹಾಗೆ ಈ ಫೋನ್‌ 6 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಅನ್ನು ಪಡೆದುಕೊಂಡಿದೆ. ಅಲ್ಲದೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಕೂಡಾ ಒಳಗೊಂಡಿದೆ. ಇನ್ನುಳಿದಂತೆ ಇನ್ಫಿನಿಕ್ಸ್‌ ಹಾಟ್‌ 20 5G ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಇನ್ಫಿನಿಕ್ಸ್‌ ಹಾಟ್‌ 20 5G ಫೀಚರ್ಸ್‌ ಹೀಗಿವೆ

ಇನ್ಫಿನಿಕ್ಸ್‌ ಹಾಟ್‌ 20 5G ಮೊಬೈಲ್‌ 6.6 ಇಂಚಿನ ಪುಲ್‌ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೆ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 20:9 ರಚನೆಯ ಅನುಪಾತ ಮತ್ತು 240hz ಟಚ್ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇಯಲ್ಲಿ ಬಳಕೆದಾರರು 60Hz, 90Hz, ಅಥವಾ 120Hz ರಿಫ್ರೆಶ್ ರೇಟ್‌ ಅನ್ನು ಮಾನುವಲಿ, ಇಲ್ಲವೆ ಆಟೋ-ಸ್ವಿಚ್ ಮೋಡ್ ಮೂಲಕ ಸೆಟ್‌ ಮಾಡುವ ಆಯ್ಕೆ ಇದೆ.

ಬಿಗ್‌ ಡಿಸ್ಕೌಂಟ್‌ನಲ್ಲಿ 5G ಮೊಬೈಲ್‌ ಖರೀದಿಸಬೇಕೆ?..ಹಾಗಿದ್ರೆ, ಈ ಆಫರ್‌ ಗಮನಿಸಿ

ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಆಧಾರಿತ XOS 10.6ನಿಂದ ರನ್‌ ಆಗಲಿದೆ. ಹಾಗೆಯೇ 4GB RAM + 128GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಕೂಡ ಅವಕಾಶ ನೀಡಿದೆ.

ಇನ್ನು ಇನ್ಫಿನಿಕ್ಸ್‌ ಈ ಮೊಬೈಲ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ದ್ವಿತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎಲ್‌ಇಡಿ ಫ್ಲ್ಯಾಷ್‌ ಸೌಲಭ್ಯ ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸೆಲ್ಫಿ ಕ್ಯಾಮೆರಾವನ್ನು ವಾಟರ್‌ಡ್ರಾಪ್-ಶೈಲಿಯ ನಾಚ್‌ನಲ್ಲಿ ಒದಗಿಸಲಾಗಿದೆ.

ಬಿಗ್‌ ಡಿಸ್ಕೌಂಟ್‌ನಲ್ಲಿ 5G ಮೊಬೈಲ್‌ ಖರೀದಿಸಬೇಕೆ?..ಹಾಗಿದ್ರೆ, ಈ ಆಫರ್‌ ಗಮನಿಸಿ

ಹಾಗೆಯೇ ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದ್ದು, ಮೂರು ದಿನಗಳವರೆಗೆ ಬ್ಯಾಕ್‌ಅಪ್‌ ನೀಡಲಿದೆ ಎಂದು ಹೇಳಲಾಗಿದೆ. ಈ ಫೋನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಡ್ಯುಯಲ್-ಬ್ಯಾಂಡ್, ಹಾಟ್‌ಸ್ಪಾಟ್, ಬ್ಲೂಟೂತ್ ಅನ್ನು ಹೊಂದಿದೆ. ಜೊತೆಗೆ FM ರೇಡಿಯೋ,USB ಟೈಪ್-C 2.0 ಅನ್ನು ಸಹ ನೀಡಲಾಗಿದೆ.

ಇನ್ಫಿನಿಕ್ಸ್‌ ಹಾಟ್‌ 20 5G ಮೊಬೈಲ್‌ 4GB RAM + 128GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಬ್ಲಾಸ್ಟರ್ ಗ್ರೀನ್, ರೇಸಿಂಗ್ ಬ್ಲ್ಯಾಕ್ ಮತ್ತು ಸ್ಪೇಸ್ ಬ್ಲೂ ಬಣ್ಣಗಳ ಆಯ್ಕೆ ಪಡೆದಿದೆ.

Best Mobiles in India

English summary
Infinix Hot 20 5G received attractive discount in India. check offers, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+