ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾದ ಹೊಸ 5G ಫೋನ್!..ಬೆಲೆ ಎಷ್ಟು?
ಇತ್ತೀಚಿಗೆ ಬಿಡುಗಡೆ ಆಗಿರುವ ಇನ್ಫಿನಿಕ್ಸ್ ಹಾಟ್ 20 5G (Infinix Hot 20 5G) ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಹೊಂದಿದ್ದು, ಗ್ರಾಹಕರನ್ನು ಆಕರ್ಷಿಸಿದೆ. ಈ ಫೋನ್ ಇದೀಗ ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಕಲ ತಯಾರಿ ನಡೆಸಿದ್ದು, ಮುಹೂರ್ತ ಸಹ ಫಿಕ್ಸ್ ಆಗಿದೆ.

ಹೌದು, ಇನ್ಫಿನಿಕ್ಸ್ ಹಾಟ್ 20 5G ಫೋನ್ ಇದೇ ಡಿಸೆಂಬರ್ 1 ರಂದು ಅಧಿಕೃತವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಲಾಂಚ್ ಆಗಲಿದೆ. ಈ ಫೋನಿನ ಕೆಲವು ಫೀಚರ್ಸ್‌ಗಳು ಫೋನ್ ಪ್ರಿಯರ ಗಮನ ಸೆಳೆದಿದ್ದು, ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್ ಬ್ಲಾಸ್ಟರ್ ಗ್ರೀನ್, ರೇಸಿಂಗ್ ಬ್ಲ್ಯಾಕ್ ಮತ್ತು ಸ್ಪೇಸ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಬರಲಿದೆ. ಹಾಗಾದರೆ ಈ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಇನ್ಫಿನಿಕ್ಸ್ ಹಾಟ್ 20 5G ಸ್ಮಾರ್ಟ್‌ಫೋನ್ 6.6 ಇಂಚಿನ ಪುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೆ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 20:9 ರಚನೆಯ ಅನುಪಾತ ಮತ್ತು 240hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇಯಲ್ಲಿ ಬಳಕೆದಾರರು 60Hz, 90Hz, ಅಥವಾ 120Hz ರಿಫ್ರೆಶ್ ರೇಟ್ ಅನ್ನು ಹಸ್ತಚಾಲಿತವಾಗಿ ಇಲ್ಲವೆ ಆಟೋ-ಸ್ವಿಚ್ ಮೋಡ್ ಮೂಲಕ ಸೆಟ್ ಮಾಡಬಹುದಾಗಿದೆ.

ಪ್ರೊಸೆಸರ್ ಸಾಮರ್ಥ್ಯ ಯಾವುದು
ಇನ್ಫಿನಿಕ್ಸ್ ಹಾಟ್ 20 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಆಧಾರಿತ XOS 10.6ನಿಂದ ರನ್ ಆಗಲಿದೆ. ಹಾಗೆಯೇ 4GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಕೂಡ ಅವಕಾಶ ನೀಡಿದೆ.

ಡ್ಯುಯಲ್ ರಿಯರ್ ಕ್ಯಾಮೆರಾ ಸೆನ್ಸಾರ್
ಇನ್ಫಿನಿಕ್ಸ್ ಹಾಟ್ 20 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸೆಲ್ಫಿ ಕ್ಯಾಮೆರಾವನ್ನು ವಾಟರ್‌ಡ್ರಾಪ್-ಶೈಲಿಯ ನಾಚ್‌ನಲ್ಲಿ ಇರಿಸಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್ ಎಷ್ಟು?
ಇನ್ಫಿನಿಕ್ಸ್ ಹಾಟ್ 20 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದ್ದು, ಮೂರು ದಿನಗಳವರೆಗೆ ಬ್ಯಾಕ್‌ಅಪ್ ನೀಡಲಿದೆ ಎಂದು ಹೇಳಲಾಗಿದೆ. ಈ ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಡ್ಯುಯಲ್-ಬ್ಯಾಂಡ್, ಹಾಟ್‌ಸ್ಪಾಟ್, ಬ್ಲೂಟೂತ್ ಅನ್ನು ಹೊಂದಿದೆ. ಜೊತೆಗೆ FM ರೇಡಿಯೋ,USB ಟೈಪ್-C 2.0 ಅನ್ನು ಸಹ ನೀಡಲಾಗಿದೆ.

ಇತರೆ ಫೀಚರ್ಸ್ ಸೌಲಭ್ಯಗಳು
ಈ ಸ್ಮಾರ್ಟ್‌ಫೋನ್ ಪೇಸ್ ಚೇಂಜ್ ಕೂಲಿಂಗ್ ಸಿಸ್ಟಮ್‌ನಂತಹ ಗೇಮಿಂಗ್-ಆಧಾರಿತ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇದಲ್ಲದೆ, ಲಿಂಕ್‌ಪ್ಲಸ್ 1.0 ಫೀಚರ್ಸ್ ಅನ್ನು ಒಳಗೊಂಡಿದ್ದು, ಇದು ವೈ-ಫೈ ನೆಟ್‌ವರ್ಕ್ ಇಲ್ಲದ ಸಂದರ್ಭದಲ್ಲಿ ಸ್ಮಾರ್ಟ್‌ಫೋನ್ ಸ್ವಯಂಚಾಲಿತವಾಗಿ ಮೊಬೈಲ್ ಡೇಟಾಗೆ ಬದಲಾಯಿಸುವಂತೆ ಮಾಡುತ್ತದೆ.


Click it and Unblock the Notifications








