Home
ಸುದ್ದಿಜಾಲ

ಭಾರತದಲ್ಲಿ ಇನ್ಫಿನಿಕ್ಸ್‌ ಹಾಟ್‌ 20 5G ಫೋನ್‌ ಲಾಂಚ್‌!..12 5G ಬ್ಯಾಂಡ್‌ಗಳಿಗೆ ಬೆಂಬಲ!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಇನ್ಫಿನಿಕ್ಸ್‌ ಕಂಪೆನಿಯ ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ತನ್ನ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗಮನ ಸೆಳೆದಿರುವ ಇನ್ಫಿನಿಕ್ಸ್‌ ಕಂಪೆನಿ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಆಯ್ಕೆಗಳಲ್ಲಿ ಒಂದಾಗಿದೆ. ಅದರ ಮುಂದುವರೆದ ಭಾಗವಾಗಿ ಇದೀಗ ಭಾರತದಲ್ಲಿ ಹೊಸ ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಡೈಮೆನ್ಸಿಟಿ 810SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಭಾರತದಲ್ಲಿ ಹೊಸ ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈಗಾಗಲೇ ಜಾಗತಿಕ ಮಾರುಕಟ್ಟೆಯಲ್ಲಿ ಸಖತ್‌ ಸೌಂಡ್‌ ಮಾಡಿದ್ದ ಈ ಫೋನ್‌ ಅಂತಿಮವಾಗಿ ಭಾರತಕ್ಕೂ ಕಾಲಿಟ್ಟಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದ್ದು, ಮೂರು ದಿನಗಳವರೆಗೆ ಬ್ಯಾಕ್‌ಅಪ್‌ ನೀಡಲಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ ಹೇಗಿದೆ?

ಡಿಸ್‌ಪ್ಲೇ ವಿನ್ಯಾಸ ಹೇಗಿದೆ?

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್ 6.6 ಇಂಚಿನ ಪುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಪಡೆದಿದೆ. ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌, 180Hz ಟಚ್ ಸ್ಯಾಂಪ್ಲಿಂಗ್ ರೇಟ್‌, 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದೆ.

ಪ್ರೊಸೆಸರ್‌ ಯಾವುದು? ಕಾರ್ಯದಕ್ಷತೆ ಎಷ್ಟಿದೆ?

ಪ್ರೊಸೆಸರ್‌ ಯಾವುದು? ಕಾರ್ಯದಕ್ಷತೆ ಎಷ್ಟಿದೆ?

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ XOS 10.6 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM +64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶ ಕೂಡ ಪಡೆದುಕೊಂಡಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಇದು ಶಾರ್ಟ್-ವಿಡಿಯೋ ಮೋಡ್, ಸೂಪರ್ ನೈಟ್‌ಸ್ಕೇಪ್, ಪೋರ್ಟ್ರೇಟ್ ಮೋಡ್ ಮತ್ತು ಐ-ಟ್ರ್ಯಾಕಿಂಗ್‌ನಂತಹ ಫೋಟೋಗ್ರಫಿ ಫೀಚರ್ಸ್‌ಗಳನ್ನು ನೀಡುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸೆಲ್ಫಿ ಕ್ಯಾಮೆರಾವನ್ನು ವಾಟರ್‌ಡ್ರಾಪ್-ಶೈಲಿಯ ನಾಚ್‌ನಲ್ಲಿ ಇರಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು USB-C ಮೂಲಕ 18W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಫೋನ್‌ ಸಿಂಗಲ್‌ ಚಾರ್ಜ್‌ನಲ್ಲಿ ಮೂರು ದಿನಗಳ ಬ್ಯಾಟರಿ ಬಾಳಿಕೆಯನ್ನು ನೀಡಲಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಈ ಫೋನ್ 12 5G ಬ್ಯಾಂಡ್‌ಗಳಿಗೆ ಬೆಂಬಲ, ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು ಮತ್ತು 3.5mm ಹೆಡ್‌ಫೋನ್ ಜ್ಯಾಕ್‌ನಂತಹ ಕನೆಕ್ಟಿವಿಟಿ ಆಯ್ಕೆಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮರ್ಟ್‌ಫೋನ್‌ ಭಾರತದಲ್ಲಿ 11,999ರೂ. ಬೆಲೆಯಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಸ್ಪೇಸ್ ಬ್ಲೂ, ಬ್ಲಾಸ್ಟರ್ ಗ್ರೀನ್ ಮತ್ತು ರೇಸಿಂಗ್ ಬ್ಲ್ಯಾಕ್‌ನಂತಹ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಪ್ರಸ್ತುತ ಭಾರತದಲ್ಲಿ 4GB RAM +64GB ಸ್ಟೋರೇಜ್‌ ಆಯ್ಕೆಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ.

Best Mobiles in India

English summary
Infinix Hot 20 5G with 120Hz display launched in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+