Home
ಸುದ್ದಿಜಾಲ

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್ ಲಾಂಚ್‌! ಏನಿದು ಲಿಂಕ್‌ಪ್ಲಸ್ 1.0 ಫೀಚರ್‌!

ಇನ್ಫಿನಿಕ್ಸ್‌ ಕಂಪೆನಿ ತನ್ನ ಇನ್ಫಿನಿಕ್ಸ್‌ ಹಾಟ್‌ ಸರಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಜಾಗತಿಕ ಮಾರುಕಟ್ಟೆಯಲ್ಲಿ ಉತ್ತಮ ಸ್ಪಂದನೆ ಪಡೆದಿದೆ. ಭಿನ್ನ ಮಾದರಿಯ ರಿಯರ್‌ ಪ್ಯಾನಲ್‌ ಹಾಗೂ ಆಕರ್ಷಕ ಡಿಸ್‌ಪ್ಲೇ ವಿನ್ಯಾಸದಿಂದ ಸಾಕಷ್ಟು ಗಮನಸೆಳೆದಿದೆ. ಇದೀಗ ತನ್ನ ಹಾಟ್‌ ಸರಣಿಯಲ್ಲಿ ಹೊಸ ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಇನ್ಫಿನಿಕ್ಸ್‌ ಹಾಟ್‌ 20 5G ಫೋನ್‌ ಲಾಂಚ್‌ ಮಾಡಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಕ್ಯಾಮೆರಾದಲ್ಲಿ ಸೂಪರ್‌ನೈಟ್‌ ಮೋಡ್‌ ಫಿಚರ್ಸ್‌ ಇದರ ಹೈಲೈಟ್‌ ಆಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್ 6.6 ಇಂಚಿನ ಪುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೆ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 20:9 ರಚನೆಯ ಅನುಪಾತ ಮತ್ತು 240hz ಟಚ್ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇಯಲ್ಲಿ ಬಳಕೆದಾರರು 60Hz, 90Hz, ಅಥವಾ 120Hz ರಿಫ್ರೆಶ್ ರೇಟ್‌ ಅನ್ನು ಹಸ್ತಚಾಲಿತವಾಗಿ ಇಲ್ಲವೆ ಆಟೋ-ಸ್ವಿಚ್ ಮೋಡ್ ಮೂಲಕ ಸೆಟ್‌ ಮಾಡಬಹುದಾಗಿದೆ.

ಪ್ರೊಸೆಸರ್‌ ಸಾಮರ್ಥ್ಯ ಹೇಗಿದೆ?

ಪ್ರೊಸೆಸರ್‌ ಸಾಮರ್ಥ್ಯ ಹೇಗಿದೆ?

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಆಧಾರಿತ XOS 10.6ನಿಂದ ರನ್‌ ಆಗಲಿದೆ. ಹಾಗೆಯೇ 4GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಕೂಡ ಅವಕಾಶ ನೀಡಿದೆ.

ಡ್ಯುಯಲ್‌ ರಿಯರ್‌ ಕ್ಯಾಮೆರಾ

ಡ್ಯುಯಲ್‌ ರಿಯರ್‌ ಕ್ಯಾಮೆರಾ

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸೆಲ್ಫಿ ಕ್ಯಾಮೆರಾವನ್ನು ವಾಟರ್‌ಡ್ರಾಪ್-ಶೈಲಿಯ ನಾಚ್‌ನಲ್ಲಿ ಇರಿಸಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?

ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?

ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದ್ದು, ಮೂರು ದಿನಗಳವರೆಗೆ ಬ್ಯಾಕ್‌ಅಪ್‌ ನೀಡಲಿದೆ ಎಂದು ಹೇಳಲಾಗಿದೆ. ಈ ಫೋನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಡ್ಯುಯಲ್-ಬ್ಯಾಂಡ್, ಹಾಟ್‌ಸ್ಪಾಟ್, ಬ್ಲೂಟೂತ್ ಅನ್ನು ಹೊಂದಿದೆ. ಜೊತೆಗೆ FM ರೇಡಿಯೋ,USB ಟೈಪ್-C 2.0 ಅನ್ನು ಸಹ ನೀಡಲಾಗಿದೆ.

ಇತರೆ ಫೀಚರ್ಸ್‌

ಇತರೆ ಫೀಚರ್ಸ್‌

ಈ ಸ್ಮಾರ್ಟ್‌ಫೋನ್‌ ಪೇಸ್‌ ಚೇಂಜ್‌ ಕೂಲಿಂಗ್ ಸಿಸ್ಟಮ್‌ನಂತಹ ಗೇಮಿಂಗ್-ಆಧಾರಿತ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇದಲ್ಲದೆ, ಲಿಂಕ್‌ಪ್ಲಸ್ 1.0 ಫೀಚರ್ಸ್‌ ಅನ್ನು ಒಳಗೊಂಡಿದ್ದು, ಇದು ವೈ-ಫೈ ನೆಟ್‌ವರ್ಕ್ ಇಲ್ಲದ ಸಂದರ್ಭದಲ್ಲಿ ಸ್ಮಾರ್ಟ್‌ಫೋನ್ ಸ್ವಯಂಚಾಲಿತವಾಗಿ ಮೊಬೈಲ್ ಡೇಟಾಗೆ ಬದಲಾಯಿಸುವಂತೆ ಮಾಡುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ 4GB RAM + 128GB ಸ್ಟೋರೇಜ್ ಆಯ್ಕೆಗೆ $179.9 (ಸುಮಾರು 15,000ರೂ)ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಬ್ಲಾಸ್ಟರ್ ಗ್ರೀನ್, ರೇಸಿಂಗ್ ಬ್ಲ್ಯಾಕ್ ಮತ್ತು ಸ್ಪೇಸ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಬರಲಿದೆ. ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಇನ್ಫಿನಿಕ್ಸ್‌ ಕಂಪೆನಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ ಈ ಫೋನ್‌ ಶೀಘ್ರದಲ್ಲೇ ಭಾರತಕ್ಕೂ ಕೂಡ ಎಂಟ್ರಿ ನೀಡುವ ಸಾಧ್ಯತೆಯಿದೆ.

Best Mobiles in India

English summary
Infinix Hot 20 5G With 6.6-Inch Full-HD+ Display Launched: Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+