ಇಂದು ನಡೆಯಲಿದೆ ಇನ್ಫಿನಿಕ್ಸ್‌ ಹಾಟ್‌ 20ಪ್ಲೇ ಫಸ್ಟ್‌ ಸೇಲ್‌! ಏನೆಲ್ಲಾ ಆಫರ್‌ ಲಭ್ಯ?

|

ಭಾರತದಲ್ಲಿ ಇತ್ತೀಚಿಗೆ ಬಿಡುಗಡೆಯಾದ ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ಸ್ಮಾರ್ಟ್‌ಫೋನ್‌ ಇಂದು (ಡಿ.6) ತನ್ನ ಮೊದಲ ಮಾರಾಟವನ್ನು ನಡೆಸಲಿದೆ. ರೇಸಿಂಗ್ ಬ್ಲ್ಯಾಕ್, ಅರೋರಾ ಗ್ರೀನ್, ಫ್ಯಾಂಟಸಿ ಪರ್ಪಲ್ ಮತ್ತು ಲೂನಾ ಬ್ಲೂ ಕಲರ್‌ ಆಯ್ಕೆಗಳನ್ನು ಹೊಂದಿರುವ ಈ ಫೋನ್‌ ಇಂದಿನಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G37 CPU ಪ್ರೊಸೆಸರ್‌ ಹೊಂದಿದ್ದು, ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನಸೆಳೆದಿದೆ.

ಹಾಟ್‌

ಹೌದು, ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ಸ್ಮಾರ್ಟ್‌ಫೋನ್‌ ಇಂದು (ಡಿ.6) ತನ್ನ ಮೊದಲ ಸೇಲ್‌ ನಡೆಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 8,999ರೂ. ಪ್ರಾರಂಭಿಕ ಬೆಲೆಯಲ್ಲಿ ಬಿಡುಗಡೆಯಾಗಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬಿಗ್‌ ಬ್ಯಾಟರಿಯನ್ನು ಕೂಡ ಪಡೆದಿದೆ. ಹಾಗಾದ್ರೆ ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ಫಸ್ಟ್‌ ಸೇಲ್‌ನಲ್ಲಿ ಏನೆಲ್ಲಾ ಆಫರ್‌ ಲಭ್ಯವಾಗಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫಸ್ಟ್‌ ಸೇಲ್‌ ಆಫರ್‌ ಏನಿದೆ?

ಫಸ್ಟ್‌ ಸೇಲ್‌ ಆಫರ್‌ ಏನಿದೆ?

ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಮೂಲಕ ಫಸ್ಟ್‌ ಸೇಲ್‌ ನಡೆಸಲಿದೆ. ಈ ಸ್ಮಾರ್ಟ್‌ಫೋನ್‌ ಪ್ರಾರಂಭಿಕ ಬೆಲೆ 8,999ರೂ. ಆಗಿದೆ. ಇದನ್ನು ಫೆಡರಲ್ ಬ್ಯಾಂಕ್ ಡೆಬಿಟ್ ಕಾರ್ಡ್ ಬಳಸಿ ಖರೀದಿಸಿದರೆ ಬಳಕೆದಾರರು 10% ವರೆಗೆ ತ್ವರಿತ ರಿಯಾಯಿತಿಯನ್ನು ಪಡೆಯಬಹುದು. ಜೊತೆಗೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ ಬಳಕೆದಾರರು ಖರೀದಿಯ ಮೇಲೆ 5% ಕ್ಯಾಶ್‌ಬ್ಯಾಕ್‌ ಪಡೆದುಕೊಳ್ಳಬಹುದಾಗಿದೆ. ಇದನ್ನು ಯುಪಿಐ ವಹಿವಾಟಿನ ಮೂಲಕ ಖರೀದಿಸುವ ಗ್ರಾಹಕರಿಗೆ 300ರೂ.ವರೆಗೂ ರಿಯಾಯಿತಿ ದೊರೆಯಲಿದೆ. ಈ ಫೋನ್‌ ರೇಸಿಂಗ್ ಬ್ಲ್ಯಾಕ್, ಅರೋರಾ ಗ್ರೀನ್, ಫ್ಯಾಂಟಸಿ ಪರ್ಪಲ್ ಮತ್ತು ಲೂನಾ ಬ್ಲೂ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಫೀಚರ್ಸ್‌ ಹೇಗಿದೆ?

ಫೀಚರ್ಸ್‌ ಹೇಗಿದೆ?

ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ಸ್ಮಾರ್ಟ್‌ಫೋನ್‌ 6.82 ಇಂಚಿನ ಹೆಚ್‌ಡಿ ಪ್ಲಸ್‌ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1640 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಮತ್ತು 120Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ನ ಡಿಸ್‌ಪ್ಲೇ 82.8% ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಪಡೆದುಕೊಂಡಿದೆ. ಇದು 263 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌ ವೇಗ ಏನಿದೆ?

ಪ್ರೊಸೆಸರ್‌ ವೇಗ ಏನಿದೆ?

ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹೆಲಿಯೋ G37 ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 OS ನಲ್ಲಿ ಕಾರ್ಯನಿರ್ವಹಿಸಲಿದೆ. ಇದು Infinix ನ XOS UI ನೊಂದಿಗೆ ಆವರಿಸಲ್ಪಟ್ಟಿದೆ. ಹಾಗೆಯೇ 4GB RAM ಮತ್ತು 64GB ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ 3GB ವರ್ಚುವಲ್ RAM ಅನ್ನು ಹೊಂದಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, AI ಲೆನ್ಸ್ ಮತ್ತು ಕ್ವಾಡ್‌ LED ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 4G LTE, Wi-Fi 802.11ac, ಬ್ಲೂಟೂತ್ 5.0, GPS ಮತ್ತು USB ಟೈಪ್-C ಪೋರ್ಟ್‌, ಡ್ಯುಯಲ್ ಸ್ಪೀಕರ್‌ಗಳು ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ ಏರೋಸ್ಪೇಸ್-ಗ್ರೇಡ್ ಕೂಲಿಂಗ್ ಮೆಟೀರಿಯಲ್, ಡಾರ್-ಲಿಂಕ್ ಎಂಜಿನ್ 2.0, ಲಿಂಕ್‌ಪ್ಲಸ್ 1.0 ಮತ್ತು ಎರ್ಡಾಲ್ ಎಂಜಿನ್ 3.0 ನಂತಹ ಫಿಚರ್ಸ್‌ಗಳನ್ನು ಒಳಗೊಂಡಿದೆ.

Best Mobiles in India

Read more about:
English summary
infinix hot 20 play first sale begins today via flipkart in india

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X