ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್‌ಫೋನ್ ಬಿಡುಗಡೆ! ಜಬರ್ದಸ್ತ್ ಫೀಚರ್ಸ್!
ಮೊಬೈಲ್ ಮಾರುಕಟ್ಟೆಯಲ್ಲಿ ವಿಶೇಷ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಭಿನ್ನ ಶ್ರೇಣಿಯಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಚಯಿಸಿದೆ. ಇದೀಗ ಹಾಟ್ 20 ಸರಣಿಯಲ್ಲಿ ಹೊಸ ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಪಂಚ್ ಹೋಲ್ ವಿನ್ಯಾಸವನ್ನು ಹೊಂದಿರುವ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಹೆಲಿಯೋ G37 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಇನ್ಫಿನಿಕ್ಸ್ ಕಂಪೆನಿ ಭಾರತದಲ್ಲಿ ಹೊಸ ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶವನ್ನು ಕೂಡ ನೀಡಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್‌ಫೋನ್ 6.82 ಇಂಚಿನ ಹೆಚ್‌ಡಿ ಪ್ಲಸ್ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1640 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ನ ಡಿಸ್‌ಪ್ಲೇ 82.8% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಪಡೆದುಕೊಂಡಿದೆ. ಇದು 263 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹೆಲಿಯೋ G37 ಪ್ರೊಸೆಸರ್ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 OS ನಲ್ಲಿ ಕಾರ್ಯನಿರ್ವಹಿಸಲಿದೆ. ಇದು Infinix ನ XOS UI ನೊಂದಿಗೆ ಆವರಿಸಲ್ಪಟ್ಟಿದೆ. ಹಾಗೆಯೇ 4GB RAM ಮತ್ತು 64GB ಹಾಗೂ 4GB RAM ಮತ್ತು 128GB ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, AI ಲೆನ್ಸ್ ಮತ್ತು LED ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 4G LTE, Wi-Fi 802.11ac, ಬ್ಲೂಟೂತ್ 5.0, GPS ಮತ್ತು USB ಟೈಪ್-C ಪೋರ್ಟ್, ಡ್ಯುಯಲ್ ಸ್ಪೀಕರ್‌ಗಳು ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್‌ಫೋನ್ ಬೆಲೆಯ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದು ಜಾಗತಿಕವಾಗಿ ಹಾಗೂ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಾಗುವ ಬಗ್ಗೆ ಕೂಡ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್ ರೇಸಿಂಗ್ ಬ್ಲ್ಯಾಕ್, ಲೂನಾ ಬ್ಲೂ, ಅರೋರಾ ಗ್ರೀನ್ ಮತ್ತು ಫ್ಯಾಂಟಸಿ ಪರ್ಪಲ್ ಕಲರ್ ಆಯ್ಕೆಗಳಲ್ಲಿ ಬರಲಿದೆ.


Click it and Unblock the Notifications








