Home
ಸುದ್ದಿಜಾಲ

ಇನ್ಫಿನಿಕ್ಸ್‌ನಿಂದ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌ ! ಬೆಲೆ ಕೇವಲ 8,999ರೂ..!

ಇನ್ಫಿನಿಕ್ಸ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಭಾರಿ ಕ್ರೇಜ್‌ ಇದೆ. ಕೈಗೆಟಕುವ ಬೆಲೆಯಲ್ಲಿ ಅತ್ಯಾಕರ್ಷಕ ಫೀಚರ್ಸ್‌ ಒಳಗೊಂಡ ಸ್ಮಾರ್ಟ್‌ಫೋನ್‌ಗಳಿಂದ ಸೈ ಎನಿಸಿಕೊಂಡಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಪ್ರಸಿದ್ಧಿ ಪಡೆದಿರುವ ಇನ್ಫಿನಿಕ್ಸ್‌ ಇದೀಗ ಹೊಸ ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ಫೋನ್‌ ಲಾಂಚ್‌ ಮಾಡಿದೆ. ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿರುವ ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಭಾರತದಲ್ಲಿ ಹೊಸ ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.82 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್‌ಫೋನ್‌ 6.82 ಇಂಚಿನ ಹೆಚ್‌ಡಿ ಪ್ಲಸ್‌ ಎಲ್ಸಿಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1640 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 90Hz ರಿಫ್ರೆಶ್ ರೇಟ್‌ ಮತ್ತು 120Hz ಟಚ್ ಸ್ಯಾಪ್ಲಿಂಗ್‌ ರೇಟ್‌ ಅನ್ನು ನೀಡಲಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 OS ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇದರಲ್ಲಿ ಇ೯ನ್‌ಬಿಲ್ಟ್‌ ಸ್ಟೋರೇಜ್‌ ಬಳಸಿಕೊಂಡು 3GB ವರ್ಚುವಲ್ RAM ವಿಸ್ತರಣೆ ಮಾಡಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿದೆ. ಇದಲ್ಲದೆ AI ಸೆನ್ಸಾರ್‌ ಅನ್ನು ಕೂಡ ಒಳಗೊಂಡಿದೆ. ಇದರೊಂದಿಗೆ ಎಲ್ಇಡಿ ಫ್ಲ್ಯಾಷ್‌ ಹೊಂದಿರುವ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ಫಿನಿಕ್ಸ್‌ ಹಾಟ್‌ 20ಪ್ಲೇ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು USB-C ಮೂಲಕ 18W ಚಾರ್ಜಿಂಗ್ ಅನ್ನು ಬೆಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಹೊಂದಿದೆ. ಇದಲ್ಲದೆ ಏರೋಸ್ಪೇಸ್-ಗ್ರೇಡ್ ಕೂಲಿಂಗ್ ಮೆಟೀರಿಯಲ್, ಡಾರ್-ಲಿಂಕ್ ಎಂಜಿನ್ 2.0, ಲಿಂಕ್‌ಪ್ಲಸ್ 1.0 ಮತ್ತು ಎರ್ಡಾಲ್ ಎಂಜಿನ್ 3.0 ಫೀಚರ್ಸ್‌ಗಳನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ಹಾಟ್‌ 20ಪ್ಲೇ ಸ್ಮಾರ್ಟ್‌ಫೋನ್‌ ಭಾರತದಲ್ಲಿ 8,999ರೂ. ಬೆಲೆಯಲ್ಲಿ ಬರಲಿದೆ. ಇದನ್ನು ರೇಸಿಂಗ್ ಬ್ಲಾಕ್, ಅರೋರಾ ಗ್ರೀನ್, ಫ್ಯಾಂಟಸಿ ಪರ್ಪಲ್ ಮತ್ತು ಲೂನಾ ಬ್ಲೂ ಮುಂತಾದ ಬಣ್ಣಗಳಲ್ಲಿ ಖರೀದಿಸಬಹುದು. ಇದು ಫ್ಲಿಪ್‌ಕಾರ್ಟ್ ಮೂಲಕ ಭಾರತದಲ್ಲಿ ಡಿಸೆಂಬರ್ 6 ರಿಂದ ಮಾರಾಟವಾಗಲಿದೆ.

ಸ್ಮಾರ್ಟ್‌ಫೋನ್‌

ಇದೇ ಸಂದರ್ಭದಲ್ಲಿ ಇನ್ಫಿನಿಕ್ಸ್‌ ಕಂಪೆನಿ ಭಾರತದಲ್ಲಿ ಹೊಸ ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈಗಾಗಲೇ ಜಾಗತಿಕ ಮಾರುಕಟ್ಟೆಯಲ್ಲಿ ಸಖತ್‌ ಸೌಂಡ್‌ ಮಾಡಿದ್ದ ಈ ಫೋನ್‌ ಅಂತಿಮವಾಗಿ ಭಾರತಕ್ಕೂ ಕಾಲಿಟ್ಟಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದ್ದು, ಮೂರು ದಿನಗಳವರೆಗೆ ಬ್ಯಾಕ್‌ಅಪ್‌ ನೀಡಲಿದೆ ಎಂದು ಹೇಳಲಾಗಿದೆ.

Best Mobiles in India

English summary
Infinix Hot 20 Play with 6,000mAh battery launched in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+