ಬಿಡುಗಡೆಗೂ ಮುನ್ನವೇ ಸದ್ದು ಮಾಡ್ತಿದೆ ಇನ್ಫಿನಿಕ್ಸ್ ಹಾಟ್ 30!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಇನ್ಫಿನಿಕ್ಸ್ ತನ್ನ ಭಿನ್ನ ಮಾದರಿಯ ಫೋನ್‌ಗಳಿಂದ ಗುರುತಿಸಿಕೊಂಡಿದೆ. ಇದೀಗ ಹೊಸ ಇನ್ಫಿನಿಕ್ಸ್ ಹಾಟ್ 30 ಅನ್ನು ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್ ವೇಗದಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ಇನ್ಫಿನಿಕ್ಸ್ ಕಂಪೆನಿ ಹೊಸ ಇನ್ಫಿನಿಕ್ಸ್ ಹಾಟ್ 30 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಪ್ಲಾನ್ ನಡೆಸಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ಫೀಚರ್ಸ್ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ ಹಾಟ್ 30 ಫೀಚರ್ಸ್ ಹೇಗಿದೆ?
ಇನ್ಫಿನಿಕ್ಸ್ ಹಾಟ್ 30 ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ ಡಿಸ್‌ಪ್ಲೇ 392 ppi ಪಿಕ್ಸೆಲ್ ಸಾಂದ್ರತೆಯನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ.
ಇನ್ಫಿನಿಕ್ಸ್ ಹಾಟ್ 30 ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ಹಾಟ್ 30 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 OS ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿರಲಿದೆ ಎಂದು ವರದಿಯಾಗಿದೆ.

ಇನ್ಫಿನಿಕ್ಸ್ ಹಾಟ್ 30 ಕ್ಯಾಮೆರಾ ಸೆಟ್‌ಅಪ್ ಏನಿದೆ?
ಇನ್ಫಿನಿಕ್ಸ್ ಹಾಟ್ 30 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿರಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಬಲವನ್ನು ಪಡೆದಿರಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದೆ.
ಇನ್ಫಿನಿಕ್ಸ್ ಹಾಟ್ 30 ಬ್ಯಾಟರಿ ಯಾವುದು?
ಇನ್ಫಿನಿಕ್ಸ್ ಹಾಟ್ 30 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಮೈಕ್ರೊಫೋನ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಇನ್ಫಿನಿಕ್ಸ್ ಹಾಟ್ 30 ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಹಾಟ್ 30 ಸ್ಮಾರ್ಟ್‌ಫೋನ್ 15,990ರೂ. ಬೆಲೆಯಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಭಾರತಕ್ಕೆ ಎಂಟ್ರಿ ನೀಡಿದ ನಂತರ ಇದರ ಲಭ್ಯತೆಯ ದಿನಾಂಕ ಬಹಿರಂಗವಾಗುವ ಸಾಧ್ಯತೆಯಿದೆ.
ಇನ್ನು ಇತ್ತೀಚಿಗೆ ಇನ್ಫಿನಿಕ್ಸ್ ಕಂಪೆನಿ ಹೊಸ ಇನ್ಫಿನಿಕ್ಸ್ ಹಾಟ್ 30i ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ವ್ಯೂ ಡಿಸ್‌ಪ್ಲೇ ಹೊಂದಿದ್ದು, ಇದು 90Hz ರಿಫ್ರೆಶ್ ರೇಟ್ ನೀಡಲಿದೆ. ಹಾಗೆಯೇ 80Hz ಟಚ್ ಸ್ಯಾಂಪ್ಲಿಂಗ್ ರೇಟ್ ಹಾಗೂ 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದುಕೊಂಡಿದೆ. ಇದು ಮೀಡಿಯಾ ಟೆಕ್ G37 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 12 ನಲ್ಲಿ ರನ್ ಆಗಲಿದೆ. ಇನ್ನುಳಿದಂತೆ ಈ ಫೋನ್ 8GB RAM ಮತ್ತು 8GB ವರ್ಚುವಲ್ RAM ಆಯ್ಕೆಯೊಂದಿಗೆ 128GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ.


Click it and Unblock the Notifications








