ಬಜೆಟ್ ಬೆಲೆಯ ಈ ಸ್ಮಾರ್ಟ್‌ಫೋನ್ ದರದಲ್ಲಿ ಈಗ ಸಖತ್ ಇಳಿಕೆ!
ಬಜೆಟ್ ದರದ ಮೊಬೈಲ್‌ಗಳ ಲಿಸ್ಟ್‌ನಲ್ಲಿ ಇನ್ಫಿನಿಕ್ಸ್ ಸಂಸ್ಥೆಯು ಕೂಡಾ ಗ್ರಾಹಕರ ಗಮನ ಸೆಳೆದಿದೆ. ಇನ್ಫಿನಿಕ್ಸ್ ಸಂಸ್ಥೆಯ ಇನ್ಫಿನಿಕ್ಸ್ ಹಾಟ್ 30i ಮೊಬೈಲ್ ಇದೀಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ರಿಯಾಯಿತಿ ಬೆಲೆಯನ್ನು ಪಡೆದಿದ್ದು, ಖರೀದಿದಾರರು ಫುಲ್ ಖುಷ್ ಆಗುವಂತೆ ಮಾಡಿದೆ.
ಹೌದು, ಫ್ಲಿಪ್‌ಕಾರ್ಟ್‌ನಲ್ಲಿ ಇನ್ಫಿನಿಕ್ಸ್ ಹಾಟ್ 30i ಮೊಬೈಲ್ ಶೇ. 30% ರಷ್ಟು ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 11,999ರೂ. ಪ್ರೈಸ್‌ಟ್ಯಾಗ್ ಅನ್ನು ಹೊಂದಿದ್ದು, ಸದ್ಯ ಫ್ಲಿಪ್‌ಕಾರ್ಟ್ ರಿಯಾಯಿತಿ ಕೊಡುಗೆಯಲ್ಲಿ 8,399ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗೆಯೇ ಗ್ರಾಹಕರಿಗೆ ಎಕ್ಸ್‌ಚೇಂಜ್ ಕೊಡುಗೆ ಹಾಗೂ ಆಯ್ದ ಕೆಲವು ಬ್ಯಾಂಕ್‌ಗಳಿಂದ ಆಫರ್ ಸಹ ದೊರೆಯುತ್ತದೆ.

ಅಂದಹಾಗೆ ಇನ್ಫಿನಿಕ್ಸ್ ಹಾಟ್ 30i ಮೊಬೈಲ್ ಮೀಡಿಯಾ ಟೆಕ್ G37 ಪ್ರೊಸೆಸರ್ ಕಾರ್ಯ ನಿರ್ವಹಣೆ ಪಡೆದಿದ್ದು, ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿದೆ. ಇನ್ನು ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇದ್ದು, ಸೆಲ್ಫಿ ಕ್ಯಾಮೆರಾವು 5 ಮೆಗಾಪಿಕ್ಸಲ್ ನಲ್ಲಿದೆ. ಹಾಗಾದರೇ ಇನ್ಫಿನಿಕ್ಸ್ ಹಾಟ್ 30i ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್ ಹಾಗೂ ರಚನೆ
ಇನ್ಫಿನಿಕ್ಸ್ ಹಾಟ್ 30i ಮೊಬೈಲ್ 6.6 ಇಂಚಿನ ಫುಲ್ ವ್ಯೂ ಡಿಸ್‌ಪ್ಲೇ ಪಡೆದುಕೊಂಡಿದ್ದು, ಹಾಗೆಯೇ ಇದರ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಪಡೆದಿದೆ. ಇದರೊಂದಿಗೆ 80Hz ಟಚ್ ಸ್ಯಾಂಪ್ಲಿಂಗ್ ರೇಟ್ ಹಾಗೂ 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಸಹ ಒಳಗೊಂಡಿದೆ.

ಪ್ರೊಸೆಸರ್ ಬಲ ಯಾವುದು
ಇನ್ಫಿನಿಕ್ಸ್ ಹಾಟ್ 30i ಫೋನ್ ಮೀಡಿಯಾ ಟೆಕ್ G37 ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ನ ಸಪೋರ್ಟ್ ಸಹ ಪಡೆದಿದೆ. ಇನ್ನುಳಿದಂತೆ ಈ ಫೋನ್ 8 GB RAM ಮತ್ತು 128GB ಹಾಗೂ 4GB + 64GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಆಯ್ಕೆಗಳನ್ನು ಪಡೆದುಕೊಂಡಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಅನ್ನು 1TB ವರೆಗೆ ವಿಸ್ತರಣೆ ಮಾಡಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ರಚನೆ
ಇನ್ಫಿನಿಕ್ಸ್ ಹಾಟ್ 30i ಫೋನ್ ಡ್ಯುಯಲ್ AI ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಆಯ್ಕೆ ನೀಡಲಾಗಿದೆ. ಕ್ಯಾಮೆರಾಗಳು ಡ್ಯುಯಲ್ ಎಲ್ಇಡಿ ಫ್ಲ್ಯಾಶ್ ಸೌಲಭ್ಯ AI ಬ್ಯೂಟಿ ಮತ್ತು ಪೋರ್ಟ್ರೇಟ್ ಸೇರಿದಂತೆ ಫೋಟೋ ಕ್ಲಿಕ್ ಮಾಡಲು ಹಲವಾರು ಆಕರ್ಷಕ ಮೋಡ್‌ಗಳ ಆಯ್ಕೆಯನ್ನು ಸಪೋರ್ಟ್ ಮಾಡುತ್ತದೆ.
ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ
ಇನ್ಫಿನಿಕ್ಸ್ ಸಂಸ್ಥೆಯ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಇದ್ದು, ಇದಕ್ಕೆ ಪೂರಕವಾಗಿ ಚಾರ್ಜಿಂಗ್ ವ್ಯವಸ್ಥೆಯನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಸೈಡ್‌ನಲ್ಲಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆ ಒದಗಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳನ್ನು ನೋಡುವುದಾರೆ ಇನ್ಫಿನಿಕ್ಸ್ ಹಾಟ್ 30i ಫೋನ್ 4G, ವೈ ಫೈ, ಬ್ಲೂಟೂತ್ ಆವೃತ್ತಿ 5.0 ಹಾಗೂ ಯುಎಸ್‌ಬಿ ಟೈಪ್ ಸಿ, ಓಟಿಜಿ ಫೀಚರ್ಸ್ ಹೊಂದಿದೆ.
ಮೆಮೊರಿ ಆಯ್ಕೆ
ಇನ್ಫಿನಿಕ್ಸ್ ಹಾಟ್ 30i ಫೋನ್ 8 GB RAM ಮತ್ತು 128GB ಹಾಗೂ 4GB + 64GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಆಯ್ಕೆಗಳನ್ನು ಪಡೆದುಕೊಂಡಿದೆ.


Click it and Unblock the Notifications








