Home
ಸುದ್ದಿಜಾಲ

ಇನ್ಫಿನಿಕ್ಸ್‌ ಹಾಟ್‌ 30i ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌! ಫೀಚರ್ಸ್‌ ನಿರೀಕ್ಷೆ ಏನು?

ಅಗ್ಗದ ಬೆಲೆಯಲ್ಲಿ ಅತ್ಯಾಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವಲ್ಲಿ ಇನ್ಫಿನಿಕ್ಸ್‌ ಕಂಪೆನಿ ಮುಂಚೂಣಿಯಲ್ಲಿದೆ. ಇದೀಗ ಹೊಸ ಇನ್ಫಿನಿಕ್ಸ್‌ ಹಾಟ್‌ 30i ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್‌ 27 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಇನ್ಫಿನಿಕ್ಸ್‌ ಕಂಪನಿ ಘೋಷಣೆ ಮಾಡಿದೆ.

ಹೌದು, ಇನ್ಫಿನಿಕ್ಸ್‌ ಹಾಟ್‌ 30i ಸ್ಮಾರ್ಟ್‌ಫೋನ್‌ ಭಾರತದಲ್ಲಿ ಮಾರ್ಚ್ 27 ರಂದು ಲಾಂಚ್‌ ಆಗಲಿದೆ. ಈ ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದು, ಆನ್‌ಲೈನ್‌ನಲ್ಲಿ ಫೀಚರ್ಸ್‌ ಬಹಿರಂಗವಾಗಿದೆ. ಹಾಗಾದ್ರೆ ಇನ್ಫಿನಿಕ್ಸ್‌ ಹಾಟ್‌ 30i ಸ್ಮಾರ್ಟ್‌ಫೋನ್‌ ಏನೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್‌ ಹಾಟ್‌ 30i ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌! ನಿರೀಕ್ಷೆ ಏನು?

ಇನ್ಫಿನಿಕ್ಸ್‌ ಹಾಟ್‌ 30i ಡಿಸ್‌ಪ್ಲೇ ವಿನ್ಯಾಸ

ಇನ್ಫಿನಿಕ್ಸ್‌ ಹಾಟ್‌ 30i ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 267 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಒಳಗೊಂಡಿದೆ.

ಇನ್ಫಿನಿಕ್ಸ್‌ ಹಾಟ್‌ 30i ಪ್ರೊಸೆಸರ್‌ ಯಾವುದು?

ಇನ್ಫಿನಿಕ್ಸ್‌ ಹಾಟ್‌ 30i ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ v12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 64 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು ಎಂದು ಅಂದಾಜಿಸಲಾಗಿದೆ.

ಇನ್ಫಿನಿಕ್ಸ್‌ ಹಾಟ್‌ 30i ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌! ನಿರೀಕ್ಷೆ ಏನು?

ಇನ್ಫಿನಿಕ್ಸ್‌ ಹಾಟ್‌ 30i ಕ್ಯಾಮೆರಾ ಸೆಟ್‌ಅಪ್‌ ನಿರೀಕ್ಷೆ ಏನು?

ಇನ್ಫಿನಿಕ್ಸ್‌ ಹಾಟ್‌ 30i ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿರಬಹುದು ಎಂದು ನಿರೀಕ್ಷಿಸಲಾಗಿದೆ.

ಇನ್ಫಿನಿಕ್ಸ್‌ ಹಾಟ್‌ 30i ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಇನ್ಫಿನಿಕ್ಸ್‌ ಹಾಟ್‌ 30i ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದು 18W ವೇಗದ ಚಾರ್ಜಿಂಗ್‌ ಬೆಂಬಲಿಸುವ ಸಾಧ್ಯತೆಯಿದೆ.

ಇನ್ಫಿನಿಕ್ಸ್‌ ಹಾಟ್‌ 30i ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌! ನಿರೀಕ್ಷೆ ಏನು?

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ಹಾಟ್‌ 30i ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಜೆಟ್‌ ಬೆಲೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಇದರ ಬಿಡುಗಡೆ ದಿನಾಂಕ ಹತ್ತಿರವಾಗ್ತಿದ್ದ ಹಾಗೇ ಇದರ ನಿಖರ ಬೆಲೆ ತಿಳಿಯಲಿದೆ.

ಇದಲ್ಲದೆ ಇತ್ತೀಚಿಗೆ ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ ಅ ಈ ಸ್ಮಾರ್ಟ್‌ಫೋನ್‌ 6.6-ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು 1612 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಮತ್ತು 500 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ. ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ ಯುನಿಸೊಕ್ SC9863A1 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ ಹ್ಯಾಂಡ್ಸೆಟ್ XOS 12ನಲ್ಲಿ ಕಾರ್ಯನಿರ್ವಹಿಸಲಿದೆ. ಇದಲ್ಲದೆ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದಿದೆ. ಇದರೊಂದಿಗೆ ವರ್ಚುವಲ್ RAM ಫೀಚರ್ಸ್‌ ಮೂಲಕ ಬಳಕೆದಾರರು 3GB ವರೆಗೆ ಮೆಮೊರಿಯನ್ನು ವಿಸ್ತರಿಸುವ ಆಯ್ಕೆಯನ್ನು ನೀಡಲಾಗಿದೆ.

Best Mobiles in India

English summary
Infinix Hot 30i is expected to come as a budget offering. It could pack a 6.6-inch IPS display and is speculated to be powered by a MediaTek Helio G37 SoC.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+