Home
ಸುದ್ದಿಜಾಲ

ಅಗ್ಗದ ಬೆಲೆಯ ಈ ಫೋನಿಗೂ ಬಿಗ್‌ ಡಿಸ್ಕೌಂಟ್‌ ಲಭ್ಯ!..ಖರೀದಿಗೆ ಉತ್ತಮವೇ?

ಇನ್ಫಿನಿಕ್ಸ್ ಮೊಬೈಲ್‌ ಸಂಸ್ಥೆಯು ಅಗ್ಗದ ಬೆಲೆಯಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೊನ್‌ಗಳನ್ನು ಪರಿಚಯಿಸುವ ಮೂಲಕ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಇನ್ಫಿನಿಕ್ಸ್ ಸಂಸ್ಥೆಯ ಮುಖ್ಯವಾಗಿ ಎಂಟ್ರಿ ಲೆವೆಲ್‌ ಸೇರಿದಂತೆ ಕೆಲವು ಮೀಡ್‌ರೇಂಜ್‌ ದರದ ಫೋನ್‌ಗಳು ಗ್ರಾಹಕರ ಗಮನ ಸೆಳೆದಿವೆ. ಆ ಪೈಕಿ ಇನ್ಫಿನಿಕ್ಸ್‌ ಹಾಟ್‌ 30i ಫೋನ್‌ ಇದೀಗ ಸಖತ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹೌದು, ದೈತ್ಯ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ನಲ್ಲಿ ಇನ್ಫಿನಿಕ್ಸ್‌ ಹಾಟ್‌ 30i ಫೋನ್‌ ಶೇ. 25% ರಿಯಾಯಿತಿ ಪಡೆದಿದ್ದು, ಈ ಫೋನಿನ 4 GB RAM + 64 GB ವೇರಿಯಂಟ್‌ ಫೋನ್‌ 7,499ರೂ. ಗಳ ಆಫರ್‌ನಲ್ಲಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ನಲ್ಲಿ ಲಭ್ಯ ಇತರೆ ಆಯ್ದ ಬ್ಯಾಂಕ್ ಆಫರ್‌, ಎಕ್ಸ್‌ಚೇಂಜ್ ಆಫರ್‌ ಪಡೆದುಕೊಂಡರೆ, ಈ ಮೊಬೈಲ್‌ ಮತ್ತಷ್ಟು ಡಿಸ್ಕೌಂಟ್‌ ಬೆಲೆಗೆ ಲಭ್ಯ.

ಅಗ್ಗದ ಬೆಲೆಯ ಈ ಫೋನಿಗೂ ಬಿಗ್‌ ಡಿಸ್ಕೌಂಟ್‌ ಲಭ್ಯ!..ಖರೀದಿಗೆ ಉತ್ತಮವೇ?

ಇನ್ನು ಇನ್ಫಿನಿಕ್ಸ್‌ ಸಂಸ್ಥೆಯ ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ G37 ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಈ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇನ್ನು ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದ್ದು, ಸೆಲ್ಫಿ ಕ್ಯಾಮೆರಾವು 5 ಮೆಗಾಪಿಕ್ಸಲ್‌ ನಲ್ಲಿ ಇದೆ. ಇನ್ನುಳಿದಂತೆ ಇನ್ಫಿನಿಕ್ಸ್‌ ಹಾಟ್‌ 30i ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗಿದೆ

ಇನ್ಫಿನಿಕ್ಸ್ ಹಾಟ್‌ 30i ಮೊಬೈಲ್‌ 6.6 ಇಂಚಿನ ಫುಲ್ ವ್ಯೂ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಹಾಗೆಯೇ ಇದರ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಹೊಂದಿದೆ. ಅಲ್ಲದೇ 80Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹಾಗೂ 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ ಸಹ ಒಳಗೊಂಡಿದೆ.

ಅಗ್ಗದ ಬೆಲೆಯ ಈ ಫೋನಿಗೂ ಬಿಗ್‌ ಡಿಸ್ಕೌಂಟ್‌ ಲಭ್ಯ!..ಖರೀದಿಗೆ ಉತ್ತಮವೇ?

ಪ್ರೊಸೆಸರ್‌ ಪವರ್ ಯಾವುದು

ಇನ್ಫಿನಿಕ್ಸ್ ಸಂಸ್ಥೆಯ ಈ ಫೋನ್‌ ಮೀಡಿಯಾ ಟೆಕ್ G37 ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ನ ಸಪೋರ್ಟ್‌ ಸಹ ಪಡೆದಿದೆ. ಇನ್ನುಳಿದಂತೆ ಈ ಫೋನ್ 8 GB RAM + 128GB ಹಾಗೂ 4GB + 64GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯ ಆಯ್ಕೆಗಳನ್ನು ಪಡೆದುಕೊಂಡಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ಅನ್ನು 1TB ವರೆಗೆ ವಿಸ್ತರಣೆ ಮಾಡಲು ಅವಕಾಶ ಇದೆ.

ಅಗ್ಗದ ಬೆಲೆಯ ಈ ಫೋನಿಗೂ ಬಿಗ್‌ ಡಿಸ್ಕೌಂಟ್‌ ಲಭ್ಯ!..ಖರೀದಿಗೆ ಉತ್ತಮವೇ?

ಡ್ಯುಯಲ್‌ ಕ್ಯಾಮೆರಾ ಸೆನ್ಸಾರ್‌ ಸೌಲಭ್ಯ

ಇನ್ಫಿನಿಕ್ಸ್ ಹಾಟ್‌ 30i ಫೋನ್ ಡ್ಯುಯಲ್‌ AI ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್‌ ನಲ್ಲಿದೆ. ಇದರೊಂದಿಗೆ ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಕ್ಯಾಮೆರಾಗಳು ಡ್ಯುಯಲ್ ಎಲ್ಇಡಿ ಫ್ಲ್ಯಾಶ್‌ ಸೌಲಭ್ಯ AI ಬ್ಯೂಟಿ ಮತ್ತು ಪೋರ್ಟ್ರೇಟ್ ಸೇರಿದಂತೆ ಫೋಟೋ ಕ್ಲಿಕ್ ಮಾಡಲು ಹಲವಾರು ಆಕರ್ಷಕ ಮೋಡ್‌ಗಳ ಆಯ್ಕೆಯನ್ನು ಸಪೋರ್ಟ್ ಮಾಡುತ್ತದೆ.

ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ

ಇನ್ಫಿನಿಕ್ಸ್ ಹಾಟ್‌ 30i ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಇದ್ದು, ಇದಕ್ಕೆ ಪೂರಕವಾಗಿ ಚಾರ್ಜಿಂಗ್ ವ್ಯವಸ್ಥೆ ಸೌಲಭ್ಯ ಹೊಂದಿದೆ. ಹಾಗೆಯೇ ಈ ಫೋನಿನ ಸೈಡ್‌ನಲ್ಲಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆ ಒದಗಿಸಲಾಗಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 4G, ವೈ ಫೈ, ಬ್ಲೂಟೂತ್ ಆವೃತ್ತಿ 5.0 ಹಾಗೂ ಯುಎಸ್‌ಬಿ ಟೈಪ್‌ ಸಿ, ಓಟಿಜಿ ಫೀಚರ್ಸ್‌ ಹೊಂದಿದೆ.

Best Mobiles in India

English summary
Infinix HOT 30i mobile Price Slashed on flipkart. offer, price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+