ಶುರುವಾಯ್ತು ಇನ್ಫಿನಿಕ್ಸ್ ಹಾಟ್ 40 ಫೋನ್ ಅಬ್ಬರ!..ಇದರ ಲುಕ್‌ಗೆ ಫಿದಾ ಆಗದವರಿಲ್ಲ!
ಬಜೆಟ್ ಮೊಬೈಲ್ ವಿಭಾಗದಲ್ಲಿ ಮುಂಚೂಣಿಯಲ್ಲಿರುವ ಇನ್ಫಿನಿಕ್ಸ್ ಇದೀಗ ಭರ್ಜರಿ ಸೌಂಡ್ ಮಾಡುತ್ತಿದೆ. ತನ್ನ ಇನ್ಫಿನಿಕ್ಸ್ ಹಾಟ್ 40 ಸರಣಿಯನ್ನು ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಳಿಸುವ ಮೂಲಕ ಸಂಚಲನ ಮೂಡಿಸಿದೆ. ಈ ಸರಣಿಯಲ್ಲಿ ಇನ್ಫಿನಿಕ್ಸ್ ಹಾಟ್ 40, ಇನ್ಫಿನಿಕ್ಸ್ ಹಾಟ್ 40 ಪ್ರೊ ಮತ್ತು ಇನ್ಫಿನಿಕ್ಸ್ ಹಾಟ್ 40i ಫೋನ್‌ಗಳನ್ನು ಪರಿಚಯಿಸಿದೆ.
ಹೌದು, ಇನ್ಫಿನಿಕ್ಸ್ ಹಾಟ್ 40 ಸರಣಿಯು ಬಿಡುಗಡೆ ಆಗಿದೆ. ಇದರಲ್ಲಿ ಇನ್ಫಿನಿಕ್ಸ್ ಹಾಟ್ 40 ಸ್ಮಾರ್ಟ್‌ಫೋನ್ ಅತ್ಯಾಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ ಹಾಟ್ 40 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಇನ್ಫಿನಿಕ್ಸ್ ಹಾಟ್ 40 ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು IPS LTPS ಡಿಸ್‌ಪ್ಲೇ ಆಗಿದ್ದು, 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ.
ಇನ್ಫಿನಿಕ್ಸ್ ಹಾಟ್ 40 ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ಹಾಟ್ 40 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G88SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ XOS 13.5 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್‌ನೊಂದಿಗೆ ಬರಲಿದೆ. ಇದಲ್ಲದೆ ಬಳಕೆಯಾಗದ ಸಂಗ್ರಹಣೆಯನ್ನು ಬಳಸಿಕೊಂಡು ಲಭ್ಯವಿರುವ ಮೆಮೊರಿಯನ್ನು ವಾಸ್ತವಿಕವಾಗಿ 16GB ವರೆಗೆ ವಿಸ್ತರಿಸಬಹುದು. ಇದರೊಂದಿಗೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಇನ್ಫಿನಿಕ್ಸ್ ಹಾಟ್ 40 ಕ್ಯಾಮೆರಾ ಸೆಟಪ್
ಇನ್ಫಿನಿಕ್ಸ್ ಹಾಟ್ 40 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು AI ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಇನ್ಫಿನಿಕ್ಸ್ ಹಾಟ್ 40 ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಹಾಟ್ 40 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, ಎನ್‌ಎಫ್‌ಸಿ, ಬ್ಲೂಟೂತ್, ಜಿಪಿಎಸ್, ಎಫ್‌ಎಂ ರೇಡಿಯೋ, 3.5 ಎಂಎಂ ಆಡಿಯೊ ಜ್ಯಾಕ್, ಒಟಿಜಿ ಮತ್ತು ವೈ-ಫೈ ಅನ್ನು ಒಳಗೊಂಡಿದೆ. ಇದಲ್ಲದೆ ಲೈಟ್ ಸೆನ್ಸಾರ್, ಇ-ಕಂಪಾಸ್, ಗೈರೊಸ್ಕೋಪ್, ಜಿ-ಸೆನ್ಸರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ನೊಂದಿಗೆ ಬರಲಿದೆ.

ಇನ್ಫಿನಿಕ್ಸ್ ಹಾಟ್ 40 ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಹಾಟ್ 40 ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆಯ ವಿವರಗಳನ್ನು ಪ್ರಕಟಿಸಿಲ್ಲ. ಆದರೆ ಈ ಸರಣಿಯು $200 (ಅಂದಾಜು 16,000ರೂ) ಕ್ಕಿಂತ ಕಡಿಮೆ ಬೆಲೆಯಲ್ಲಿ ಬರಲಿದೆ ಎಂದು ನೀರಿಕ್ಷಿಸಲಾಗಿದೆ. ಇನ್ನು ಫೋನ್ ಪಾಮ್ ಬ್ಲೂ, ಹರೈಸನ್ ಗೋಲ್ಡ್, ಸ್ಟಾರ್‌ಲಿಟ್ ಬ್ಲಾಕ್ ಮತ್ತು ಸ್ಟಾರ್‌ಫಾಲ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಲಭ್ಯವಿದೆ.


Click it and Unblock the Notifications








