ಭಾರತದಲ್ಲಿ ಶೀಘ್ರದಲ್ಲೇ ಬರಲಿದೆ ಇನ್ಫಿನಿಕ್ಸ್ ಹಾಟ್ 40i ಫೋನ್! ಏನೆಲ್ಲಾ ನಿರೀಕ್ಷೆ?
ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಉತ್ತಮ ಮಾರುಕಟ್ಟೆಯಿದೆ. ತನ್ನ ವಿಭಿನ್ನ ಶೈಲಿಯ ಸ್ಮಾರ್ಟ್‌ಪೋನ್‌ಗಳಿಂದಾಗಿ ಗ್ರಾಹಕರ ಗಮನಸೆಳೆದಿದೆ. ಇದೀಗ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಇನ್ಫಿನಿಕ್ಸ್ ಹಾಟ್ 40i ಅನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ಅತಿ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡುವ ನಿರೀಕ್ಷೆಯಿದೆ.
ಹೌದು, Infinix Hot 40i ಸ್ಮಾರ್ಟ್‌ಫೋನ್ ಸದ್ಯದಲ್ಲೇ ಭಾರತಕ್ಕೆ ಬರಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್ ಫೆಬ್ರವರಿ ಮೊದಲಾರ್ಧದಲ್ಲಿ ಮಾರಾಟಕ್ಕೆ ಲಭ್ಯವಾಗಲಿದೆ ಎಂದು ವರದಿಯಾಗಿದೆ. ಇದೇ ಸಮಯದಲ್ಲಿ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Infinix Hot 40i ಫೀಚರ್ಸ್ ನೀರಿಕ್ಷೆ?
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ 6.56 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 720×1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿರಲಿದೆ. ಇದು 90Hz ರಿಫ್ರೆಶ್ ರೇಟ್, ಸೆಂಟರ್ಡ್ ಪಂಚ್-ಹೋಲ್ ಕಟೌಟ್, 480 ನಿಟ್ಸ್ ಪೀಕ್ ಬ್ರೈಟ್‌ನೆಸ್ ನೊಂದಿಗೆ ಬರಲಿದೆ.
ಇನ್ಫಿನಿಕ್ಸ್ ಹಾಟ್ 40i ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ ಯುನಿಸೋಕ್ T606 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದಕ್ಕೆ ಸಪೋರ್ಟ್ ಆಗಿ ARM ಮಾಲಿ G57 MP1 GPU ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್ಫಿನಿಕ್ಸ್ ಹಾಟ್ 40i ಕ್ಯಾಮೆರಾ ಸೆಟಪ್ ಏನಿದೆ?
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದು ಸೆಕೆಂಡರಿ AI ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಇನ್ಫಿನಿಕ್ಸ್ ಹಾಟ್ 40i ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್ ಕಾರ್ಡ್ ಸ್ಲಾಟ್, ವೈ-ಫೈ, ಬ್ಲೂಟೂತ್, 4 ಜಿ, ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಆಡಿಯೊ ಜಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್, ಕಂಪಾಸ್ ಅನ್ನು ಹೊಂದಿದೆ.
ಇನ್ಫಿನಿಕ್ಸ್ ಹಾಟ್ 40i ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ ಭಾರತದಲ್ಲಿ ಬಜೆಟ್ ಬೆಲೆಯಲ್ಲಿ ಬರಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್‌ನ ನಿಖರವಾದ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಈ ಫೋನ್ ಪಾಮ್ ಬ್ಲೂ, ಹಾರಿಜಾನ್ ಗೋಲ್ಡ್, ಸ್ಟಾರ್ಲಿಟ್ ಬ್ಲಾಕ್, ಸ್ಟಾರ್ಫಾಲ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.
ಇನ್ನು ಇತ್ತೀಚಿಗೆ ಇನ್ಫಿನಿಕ್ಸ್ ಕಂಪೆನಿ ಹೊಸ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ (Infinix Smart 8 Plus) ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.


Click it and Unblock the Notifications








