ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ ಲಾಂಚ್! ಬೆಲೆ ಕೇವಲ 9999ರೂ ಮಾತ್ರ!
ಬಹು ನಿರೀಕ್ಷಿತ ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ಎಂಟ್ರಿ ನಿಡಿದ್ದು, ಅತ್ಯಾಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಇದು ಅಕ್ಟಾ ಕೋರ್ ಯುನಿಸೋಕ್ T606 SoC ಪ್ರೊಸೆಸರ್ ವೇಗದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಹೌದು, Infinix HOT 40i ಸ್ಮಾರ್ಟ್‌ಫೋನ್ ಭಾರತದಲ್ಲಿ ಲಾಂಚ್ ಆಗಿದೆ. ಈ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಫೋನ್ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ. ಹಾಗಾದ್ರೆ Infinix HOT 40i ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Infinix HOT 40i ಡಿಸ್‌ಪ್ಲೇ ರಚನೆ ಹೇಗಿದೆ?
Infinix HOT 40i ಸ್ಮಾರ್ಟ್‌ಫೋನ್ 6.6 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 480 ನಿಟ್ಸ್ ಬ್ರೈಟ್‌ನೆಸ್ ಬೆಂಬಲದೊಂದಿಗೆ ಬರಲಿದ್ದು, 1500:1 ಕಾಂಟ್ರಾಸ್ಟ್ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಹಾಗೂ 180Hz ಟಚ್ ಸ್ಯಾಪ್ಲಿಂಗ್ ರೇಟ್ ಒಳಗೊಂಡಿದೆ.
Infinix HOT 40i ಪ್ರೊಸೆಸರ್ ಯಾವುದು?
Infinix HOT 40i ಸ್ಮಾರ್ಟ್‌ಫೋನ್ ಅಕ್ಟಾ ಕೋರ್ ಯುನಿಸೋಕ್ T606 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಜೊತೆಗೆ ಮಾಲಿ G57 MP1 GPU ಸಪೋರ್ಟ್ ಅನ್ನು ಪಡೆದಿದೆ. ಈ ಫೋನ್ ಆಂಡ್ರಾಯ್ಡ್ 13 ಬೆಮಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಜೊತೆಗೆ 8GB ವರ್ಚುವಲ್ RAM ಅನ್ನು ಸಹ ಬೆಂಬಲಿಸಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
Infinix HOT 40i ಕ್ಯಾಮೆರಾ ಸೆಟಪ್ ಏನಿದೆ?
Infinix HOT 40i ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಹಿಂಭಾಗದ ಕ್ಯಾಮರಾವನ್ನು ಹೊಂದಿದೆ. ಜೊತೆಗೆ AI ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಕ್ವಾಡ್ LED ರಿಂಗ್ ಫ್ಲಾಶ್ ಹಾಗೂ ಡ್ಯುಯಲ್ LED ಫ್ಲ್ಯಾಶ್ ಅನ್ನು ಸಹ ಪಡೆದುಕೊಂಡಿದೆ.

Infinix HOT 40i ಬ್ಯಾಟರಿ ಮತ್ತು ಇತರೆ ಫೀಚರ್ಸ್
Infinix HOT 40i ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, Wi-Fi 802.11 ac, ಬ್ಲೂಟೂತ್ 5.0, GPS + GLONASS, USB ಟೈಪ್-C ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP53 ರೇಟಿಂಗ್‌ಗಳನ್ನು ಹೊಂದಿದೆ. ಅಲ್ಲದೆ ಮ್ಯಾಜಿಕ್ ರಿಂಗ್ ಫೇಸ್ ಅನ್‌ಲಾಕ್, ಬ್ಯಾಕ್‌ಗ್ರೌಂಡ್ ಕಾಲ್, ಚಾರ್ಜಿಂಗ್ ಅನಿಮೇಷನ್, ಚಾರ್ಜ್ ಕಂಪ್ಲೀಷನ್ ರಿಮೈಂಡರ್ ಮತ್ತು ಲೋ ಬ್ಯಾಟರಿ ರಿಮೈಂಡರ್‌ನಂತಹ ಫೀಚರ್ಸ್‌ಗಳನ್ನು ಸಹ ನೀಡಲಾಗಿದೆ.
Infinix HOT 40i ಬೆಲೆ ಮತ್ತು ಲಭ್ಯತೆ
Infinix Hot 40i ಸ್ಮಾರ್ಟ್‌ಫೋನ್ ಭಾರತದಲ್ಲಿ 9999ರೂ ಬೆಲೆಗೆ ಲಭ್ಯವಾಗಲಿದೆ. ಇದು ಫೆಬ್ರವರಿ 21 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಇದನ್ನು ನೀವು Starlit Black, Palm Blue, Horizon Gold ಮತ್ತು Starfall ಗ್ರೀನ್ ಬಣ್ಣಗಳಲ್ಲಿ ಬರುತ್ತದೆ. ಹೆಚ್ಚುವರಿಯಾಗಿ ಎಕ್ಸ್‌ಚೇಂಜ್ ಆಫರ್‌ನಲ್ಲಿ 1000 ರಿಯಾಯಿತಿ ಕೂಡ ಸಿಗಲಿದೆ.


Click it and Unblock the Notifications








