Infinix: ಇನ್ಫಿನಿಕ್ಸ್ ಹಾಟ್ 40i ಎಂಟ್ರಿಗೆ ಎದುರಾಳಿಗಳು ಕಂಗಾಲು! Xboost ಗೇಮಿಂಗ್ ಎಂಜಿನ್ ವಿಶೇಷ!
ಇನ್ಫಿನಿಕ್ಸ್ ಕಂಪೆನಿ ತನ್ನ ಹಾಟ್ 40 ಸರಣಿಯಲ್ಲಿ ಇನ್ಫಿನಿಕ್ಸ್ ಹಾಟ್ 40i ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದು ಯುನಿಸೋಕ್ T606 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಹೌದು, ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ Xboost ಗೇಮಿಂಗ್ ಎಂಜಿನ್ ಒಳಗೊಂಡಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಟೆಕ್ನಾಲಜಿಯನ್ನು ಸಹ ಬೆಂಬಲಿಸಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ ಹಾಟ್ 40i ಡಿಸ್‌ಪ್ಲೇ ಹೇಗಿದೆ?
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ 6.56 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೆಯನ್ನು ಹೊಂದಿದೆ. ಈ ಡಿಸ್‌ಪ್ಲೇ 720x1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 60Hz ನಿಂದ 90Hz ವರೆಗೆ ಬ್ರೈಟ್‌ನೆಸ್ ಬೆಂಬಲಿಸಲಿದೆ. ಜೊತೆಗೆ 480 ಗರಿಷ್ಠ ಬ್ರೈಟ್‌ನೆಸ್ ವೇರಿಯಬಲ್ ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ.
ಇನ್ಫಿನಿಕ್ಸ್ ಹಾಟ್ 40i ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ ಯುನಿಸೋಕ್ T606 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಆಧಾರಿತ XOS 13.0 ಜೊತೆಗೆ ರನ್ ಆಗಲಿದೆ. ಇದಲ್ಲದೆ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್ಫಿನಿಕ್ಸ್ ಹಾಟ್ 40i ಕ್ಯಾಮೆರಾ ಸೆಟ್‌ಅಪ್ ಏನಿದೆ?
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ನೊಂದಿಗೆ AI ಕ್ಯಾಮೆರಾವನ್ನು ಒಳಗೊಂಡಿದೆ. ಇದರೊಂದಿಗೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಇನ್ಫಿನಿಕ್ಸ್ ಹಾಟ್ 40i ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಹಾಗೂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಇನ್ಫಿನಿಕ್ಸ್ ಹಾಟ್ 40i ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ 4GB RAM + 128GB ಮಾದರಿಗೆ SAR 375 (ಅಂದಾಜು 8,300) ಬೆಲೆಯೊಂದಿಗೆ ಲಭ್ಯವಿದೆ. ಇದರ 8GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ SAR 465 (ಸುಮಾರು 10,300ರು)ಆಗಿದೆ.
ಇನ್ಫಿನಿಕ್ಸ್ ಸಂಸ್ಥೆಯು ದೇಶಿಯ ಮಾರುಕಟ್ಟೆಗೆ ನೂತನವಾಗಿ ಇನ್ಫಿನಿಕ್ಸ್ ಸ್ಮಾರ್ಟ್ 8HD ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಯುನಿಸೊಕ್ T606 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಈ ಇನ್ಫಿನಿಕ್ಸ್ ಸ್ಮಾರ್ಟ್ 8HD ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, 8 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ.


Click it and Unblock the Notifications