ಸದ್ದಿಲ್ಲದೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್.! ಬೊಂಬಾಟ್ ಡಿಸೈನ್!
ಇನ್ಫಿನಿಕ್ಸ್ ಕಂಪೆನಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ವಿಭಿನ್ನ ಶೈಲಿಯ ಸ್ಮಾರ್ಟ್‌ಫೋನ್ ಅತಿ ಕಡಿಮೆ ಬೆಲೆಗೆ ನೀಡುವುದು ಇನ್ಫಿನಿಕ್ಸ್ ಕಂಪೆನಿ ವಿಶೇಷತೆಯಾಗಿದೆ. ಸದ್ಯ ಇದೀಗ ಅದೇ ಹಾದಿಯಲ್ಲಿ ಇನ್ಫಿನಿಕ್ಸ್ ಹಾಟ್ 40i ಅನ್ನು ಬಿಡುಗಡೆ ಮಾಡಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ.
ಹೌದು, ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 18W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ ಹಾಟ್ 40i ಡಿಸ್‌ಪ್ಲೇ ರಚನೆ
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ 6.56 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, 500 NITS ವರೆಗೆ ಬ್ರೈಟ್‌ನೆಸ್ ನೀಡಲಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ.
ಇನ್ಫಿನಿಕ್ಸ್ ಹಾಟ್ 40i ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಔಟ್-ಆಫ್-ದಿ-ಬಾಕ್ಸ್‌ನೊಂದಿಗೆ ರನ್ ಆಗಲಿದೆ. ಹಾಗೆಯೇ 16GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ.

ಇನ್ಫಿನಿಕ್ಸ್ ಹಾಟ್ 40i ಕ್ಯಾಮೆರಾ ಸೆಟ್‌ಅಪ್
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಹಿಂಭಾಗದ ಕ್ಯಾಮೆರಾದೊಂದಿಗೆ ರಿಂಗ್ LED ಫ್ಲ್ಯಾಷ್‌ಲೈಟ್ ಅನ್ನು ಸಹ ನೀಡಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಇನ್ಫಿನಿಕ್ಸ್ ಹಾಟ್ 40i ಬ್ಯಾಟರಿ ಮತ್ತು ಇತರೆ ಫೀಚರ್ಸ್
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೈರ್ಡ್ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ. ಇದಲ್ಲದೆ ಭದ್ರತೆಗಾಗಿ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ನೊಂದಿಗೆ ಬರುತ್ತದೆ. ಇದನ್ನು ಹ್ಯಾಂಡ್‌ಸೆಟ್‌ನ ಬಲ ಅಂಚಿನಲ್ಲಿರುವ ಪವರ್ ಬಟನ್‌ನಲ್ಲಿ ಇರಿಸಲಾಗುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.

ಇನ್ಫಿನಿಕ್ಸ್ ಹಾಟ್ 40i ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್‌ಫೋನ್ ಪ್ರಸ್ತುತ ಸೌದಿ ಅರೇಬಿಯಾದಲ್ಲಿ ಬಿಡುಗಡೆ ಆಗಿದೆ. ಅದರಂತೆ 4GB RAM + 128GB ಆಯ್ಕೆಯು SAR 375 (ಸರಿಸುಮಾರು 8,300ರೂ) ಬೆಲೆಯನ್ನು ಹೊಂದಿದೆ. ಇದರ 8GB RAM + 256GB ಆಯ್ಕೆಯು SAR 465 (ಸುಮಾರು 10,300ರೂ)ಬೆಲೆಯನ್ನು ಪಡೆದುಕೊಂಡಿದೆ. ಇದು ಹರೈಸನ್ ಗೋಲ್ಡ್, ಪಾಮ್ ಬ್ಲೂ, ಸ್ಟಾರ್‌ಫಾಲ್ ಗ್ರೀನ್ ಮತ್ತು ಸ್ಟಾರ್‌ಲಿಟ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.
ಇನ್ನು ಇದೇ ಸಮಯದಲ್ಲಿ ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 30i ಭಾರಿ ರಿಯಾಯಿತಿ ಪಡೆದುಮಿಂಡಿದೆ. ಅಂದರೆ ಫ್ಲಿಪ್‌ಕಾರ್ಟ್‌ನಲ್ಲಿ ಈ ಮೊಬೈಲ್ ಶೇ. 30% ರಷ್ಟು ಡಿಸ್ಕೌಂಟ್ ಪಡೆದುಕೊಂಡಿದೆ. ಇದು 11,999ರೂ. ಪ್ರೈಸ್‌ಟ್ಯಾಗ್ ಅನ್ನು ಹೊಂದಿದ್ದು, ಸದ್ಯ ಫ್ಲಿಪ್‌ಕಾರ್ಟ್ ರಿಯಾಯಿತಿ ಕೊಡುಗೆಯಲ್ಲಿ 8,399ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗೆಯೇ ಗ್ರಾಹಕರಿಗೆ ಎಕ್ಸ್‌ಚೇಂಜ್ ಕೊಡುಗೆ ಹಾಗೂ ಆಯ್ದ ಕೆಲವು ಬ್ಯಾಂಕ್‌ಗಳಿಂದ ಆಫರ್ ಸಹ ದೊರೆಯುತ್ತದೆ.


Click it and Unblock the Notifications








