ಸೆ.9ಕ್ಕೆ Infinix Hot 50 5G ಸೇಲ್: ಅತೀ ಕಡಿಮೆ ಬೆಲೆ.. ಜೊತೆಗೆ ಸಖತ್ ಆಫರ್!
Infinix Hot 50 5G Sale: ಚೀನಾದ ಸ್ಮಾರ್ಟ್‌ಫೋನ್ ಕಂಪನಿ ಇನ್ಫಿನಿಕ್ಸ್ (Infinix) ತನ್ನ Hot ಸರಣಿಯಲ್ಲಿ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಇದು ಇನ್ಫಿನಿಕ್ಸ್ ಹಾಟ್ 50 5G (Infinix Hot 50 5G) ಎಂಬ ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಅಂದಹಾಗೆ, ಈ ಸ್ಮಾರ್ಟ್‌ಫೋನ್ ಸೆಪ್ಟೆಂಬರ್ 9 ರಂದು ಮಧ್ಯಾಹ್ನ 2 ಗಂಟೆಯಿಂದ ಫ್ಲಿಪ್‌ಕಾರ್ಟ್‌ನಲ್ಲಿ ಮಾರಾಟ ಪ್ರಾರಂಭ ಮಾಡಲಿದೆ. ಕಂಪನಿಯು ಲಾಂಚ್ ಭಾಗವಾಗಿ ಕೆಲವು ಆಫರ್‌ಗಳನ್ನು ಘೋಷಿಸಿದೆ. ಈ ಹೊಸ ಫೋನಿನ ಬೆಲೆ, ಡಿಸ್ಕೌಂಟ್ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ ಬನ್ನಿ.
ಕಂಪನಿಯು ಗ್ರಾಹಕರ ಬಜೆಟ್ ಗಮನದಲ್ಲಿಟ್ಟುಕೊಂಡು ಇನ್ಫಿನಿಕ್ಸ್ ಹಾಟ್ 50 5G ಫೋನನ್ನು ಬಿಡುಗಡೆ ಮಾಡಿದೆ. ಮೀಡಿಯಾ ಟೆಕ್ ಡೈಮೆನ್ಷನ್ 6300 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಇದು 120Hz ರಿಫ್ರೆಶ್ ದರದೊಂದಿಗೆ 6.7 ಇಂಚಿನ HD + LCD ಡಿಸ್ಪ್ಲೇಯನ್ನು ಹೊಂದಿದೆ. ಇದು ಡುಯಲ್ ರಿಯರ್ ಕ್ಯಾಮೆರಾ ಸೆಟಪ್ ಒಳಗೊಂಡಿದೆ. 48 ಮೆಗಾಪಿಕ್ಸೆಲ್ ಪ್ರಾಥಮಿಕ ಸೋನಿ IMX582 ಕ್ಯಾಮೆರಾ, 18W ವೇಗದ ಚಾರ್ಜಿಂಗ್‌ನೊಂದಿಗೆ 5000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಇನ್ಫಿನಿಕ್ಸ್ ಹಾಟ್ 50 5G ಫೋನಿನ ಬೆಲೆ ಮತ್ತು ಆಫರ್
ಕಂಪನಿಯು ಇನ್ಫಿನಿಕ್ಸ್ ಹಾಟ್ 50 5G ಫೋನನ್ನು ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟ ಮಾಡಲಿದೆ. ನೀವು ವೈಬ್ರೆಂಟ್ ಬ್ಲೂ, ಸ್ಲೀಕ್ ಬ್ಲಾಕ್, ಸೇಜ್ ಗ್ರೀನ್ ಮತ್ತು ಡ್ರೀಮಿ ಪರ್ಪಲ್ ಬಣ್ಣಗಳಲ್ಲಿ ಖರೀದಿಸಬಹುದು. ಈ ಫೋನಿನ ಫೋನ್‌ನ 4GB RAM + 128GB ಸ್ಟೋರೇಜ್ ಬೆಲೆ 9,999 ರೂ.ಗೆ ಮಾರಾಟವಾಗಲಿದೆ. ಟಾಪ್ ಮಾಡೆಲ್ 8GB RAM + 128GB ಸ್ಟೋರೇಜ್ ಬೆಲೆ 10,999 ರೂ.ಗೆ ಖರೀದಿಸಬಹುದು.
ಕಂಪನಿಯು ಬಿಡುಗಡೆ ಭಾಗವಾಗಿ ಕೆಲವು ಆಫರ್‌ಗಳನ್ನು ಸಹ ನೀಡುತ್ತಿದೆ. ಕೆಲವು ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೇಲೆ ಈ ಫೋನ್ ಖರೀದಿಸಿದರೆ 1,000 ರೂಪಾಯಿಗಳ ರಿಯಾಯಿತಿಯನ್ನು ಪಡೆಯಬಹುದು. ಇದೇ ಸೆಪ್ಟೆಂಬರ್ 9 ರಂದು ಮಧ್ಯಾಹ್ನ 2 ಗಂಟೆಯಿಂದ ಫ್ಲಿಪ್‌ಕಾರ್ಟ್‌ನಲ್ಲಿ ಇನ್ಫಿನಿಕ್ಸ್ ಹಾಟ್ 50 5G ಫೋನ್ ಖರೀದಿಗೆ ಲಭ್ಯವಿರುತ್ತದೆ.
ಇನ್ಫಿನಿಕ್ಸ್ ಹಾಟ್ 50 5G ಫೋನಿನ ವೈಶಿಷ್ಟ್ಯಗಳು
ಇನ್ಫಿನಿಕ್ಸ್ ಹಾಟ್ 50 5G ಫೋನ್ ಇದು 120Hz ರಿಫ್ರೆಶ್ ದರದೊಂದಿಗೆ 6.7 ಇಂಚಿನ HD ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನಿನಲ್ಲಿರುವ ಅಪ್ಲಿಕೇಶನ್‌ಗಳ ಪ್ರಕಾರ 60, 90 ಮತ್ತು 120 Hz ರಿಫ್ರೆಶ್ ದರವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಕಂಪನಿ ಹೇಳಿದೆ. ಇದು ಮೀಡಿಯಾ ಟೆಕ್ ಡೈಮೆನ್ಶನ್ 6300 ಚಿಪ್‌ಸೆಟ್ ಅನ್ನು ಹೊಂದಿದೆ. ಇದು ಉತ್ತಮ ಡೌನ್‌ಲೋಡ್ ವೇಗ ಮತ್ತು ಗೇಮ್‌ಗಳನ್ನು ಆಡುವ ಸಾಮರ್ಥ್ಯವನ್ನು ನೀಡುತ್ತದೆ.
ಇನ್ಫಿನಿಕ್ಸ್ ಹಾಟ್ 50 5G ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಫೋನಿನ ಹಿಂದಿನ ಪ್ಯಾನೆಲ್‌ನಲ್ಲಿ ಎಲ್‌ಇಡಿ ಫ್ಲ್ಯಾಷ್ ಲೈಟ್‌ನೊಂದಿಗೆ 48 ಮೆಗಾಪಿಕ್ಸೆಲ್ ಪ್ರಾಥಮಿಕ ಸೋನಿ IMX582 ಕ್ಯಾಮೆರಾ ಲೆನ್ಸ್ ಇದೆ. ಇದರಲ್ಲಿ ಎಐ (AI) ಲೆನ್ಸ್ ಕೂಡ ಇದೆ. ಈ ಕ್ಯಾಮೆರಾದಲ್ಲಿ ನೀವು 12ಕ್ಕೂ ಹೆಚ್ಚು ಮೋಡ್‌ಗಳನ್ನು ಪಡೆಯಬಹುದು. ಇದು ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ ಎಲ್ಇಡಿ ಫ್ಲ್ಯಾಷ್‌ನೊಂದಿಗೆ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ.
ಈ ಸುದ್ದಿ ಓದಿದ್ದೀರಾ?: iPhone 16 Series: ಬಿಡುಗಡೆಗೂ ಮೊದಲೇ.. ಐಫೋನ್ 16 ಸರಣಿಯ ಬೆಲೆ ಸೋರಿಕೆ! ಎಷ್ಟು ಗೊತ್ತೇ?
ಇನ್ಫಿನಿಕ್ಸ್ ಹಾಟ್ 50 5G ಫೋನನ್ನು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ನೀವು ಇಡೀ ದಿನದ ಬ್ಯಾಕಪ್ ಅನ್ನು ಸುಲಭವಾಗಿ ಪಡೆಯಬಹುದು. ಇದು 18W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ಎಐ ಚಾರ್ಜ್ ರಕ್ಷಣೆ, ಪವರ್ ಮ್ಯಾರಥಾನ್, ಸ್ಮಾರ್ಟ್ ಮೋಡ್, ಅಲ್ಟ್ರಾ ಪವರ್ ಸೇವಿಂಗ್ ಮೋಡ್‌ನಂತಹ ವೈಶಿಷ್ಟ್ಯಗಳನ್ನು ಸಹ ಒಳಗೊಂಡಿದೆ.
ಇನ್ಫಿನಿಕ್ಸ್ ಹಾಟ್ 50 5G ಫೋನಿನಲ್ಲಿ ಭದ್ರತೆಗಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಫೇಸ್ ಅನ್‌ಲಾಕ್ ವೈಶಿಷ್ಟ್ಯ ಮತ್ತು ಹಲವು ಎಐ ತಂತ್ರಜ್ಞಾನ ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, ವೈ-ಫೈ, ಬ್ಲೂಟೂತ್ ಲಭ್ಯವಿದೆ.


Click it and Unblock the Notifications








