ಇನ್ಫಿನಿಕ್ಸ್ ಹಾಟ್ 9ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ! ಆಕರ್ಷಕ ಕ್ಯಾಮೆರಾ ಫೀಚರ್ಸ್!
ಟೆಕ್ ವಲಯದಲ್ಲಿ ಸಾಕಷ್ಟು ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಈಗಾಗಲೇ ಹಲವು ಕಂಪೆನಿಗಳು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿವೆ. ಇದರಲ್ಲಿ ಇನ್‌ಫಿನಿಕ್ಸ್ ಕಂಪೆನಿ ಸಹ ಒಂದಾಗಿದೆ. ಇನ್ನು ಇನ್‌ಫಿನಿಕ್ಸ್ ಕಂಪೆನಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಸದ್ಯ ತನ್ನ ಭಿನ್ನ ಮಾದರಿಯ ಫೀಚರ್ಸ್‌ಗಳಿಂದ ಗುರುತಿಸಿಕೊಂಡಿದೆ. ಇದೀಗ ತನ್ನ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು, ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಇನ್‌ಫಿನಿಕ್ಸ್ ಕಂಪೆನಿ ತನ್ನ ಜನಪ್ರಿಯ ಹಾಟ್ 9 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ಸದ್ಯ ಇದೀಗ ಇನ್ಫಿನಿಕ್ಸ್ ಹಾಟ್ 9 ಪ್ರೊ ಮತ್ತು ಇನ್ಫಿನಿಕ್ಸ್ ಹಾಟ್ 9 ಸ್ಮಾರ್ಟ್‌ಫೋನ್ ಅನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಹೊಸ ಮಾದರಿಯ ಫೀಚರ್ಸ್‌ಗಳನ್ನ ಹೊಂದಿದ್ದು, ಕ್ಯಾಮೆರಾ ಸೆಟ್‌ಅಪ್‌ನಲ್ಲಿ ತುಸು ಭಿನ್ನ ಮಾದರಿಯನ್ನ ಹೊಂದಿವೆ. ಇನ್ನು ಈ ಲೇಖನದಲ್ಲಿ ಇನ್ಫಿನಿಕ್ಸ್ ಹಾಟ್ 9 ಪ್ರೊ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ
ಇನ್ಫಿನಿಕ್ಸ್ ಹಾಟ್ 9ಪ್ರೊ ಸ್ಮಾರ್ಟ್‌ಫೋನ್ 720x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಎಚ್‌ಡಿ + ಆಗಿದ್ದು ಪಂಚ್‌ಹೋಲ್ ಮಾದರಿಯನ್ನ ಒಳಗೊಂಡಿದೆ. ಅಲ್ಲದೆ ಇದು ಎಲ್‌ಸಿಡಿ ಐಪಿಎಸ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯ ರಚನೆ ಅನುಪಾತ 20: 9 ಆಗಿದ್ದು, ಸ್ಕ್ರೀನ್ ಟು ಬಾಡಿ ಅನುಪಾತ 90.5% ಆಗಿದೆ. ಇದಲ್ಲದೆ ಈ ಡಿಸ್‌ಪ್ಲೇ 480 ನಿಟ್ಸ್ ಬ್ರೈಟ್‌ನೆಶ್ ಅನ್ನು ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P22 ಪ್ರೊಸೆಸರ್ ವೇಗವನ್ನ ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ XOS 6.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.ಹಾಗೇಯೇ ಈ ಸ್ಮಾರ್ಟ್‌ಫೋನ್ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಇನ್‌ಫಿನಿಕ್ಸ್ ಹಾಟ್ 9ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ ಹೆಚ್ಚುವರಿ ಕಡಿಮೆ ಬೆಳಕಿನ ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್-ಎಲ್ಇಡಿ ಫ್ಲ್ಯಾಷ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಫ್ರಂಟ್ ಕ್ಯಾಮೆರಾ ಮೋಡ್‌ಗಳಲ್ಲಿ ಎಐ ಪೋರ್ಟ್ರೇಟ್, ಎಐ 3 ಡಿ ಫೇಸ್ ಬ್ಯೂಟಿ, ವೈಡ್-ಸೆಲ್ಫಿ ಮತ್ತು ಎಆರ್ ಅನಿಮೋಜಿ ಅನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನು ಈ ಬ್ಯಾಟರಿಯು 30 ಗಂಟೆಗಳ 4G ಟಾಕ್‌ಟೈಮ್, 130 ಗಂಟೆಗಳ ಪ್ಲೇಬ್ಯಾಕ್ ಮ್ಯೂಸಿಕ್, 13 ಗಂಟೆಗಳ ಗೇಮಿಂಗ್ ಮತ್ತು 19 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ V5, 3.5mm ಆಡಿಯೊ ಜ್ಯಾಕ್, fm ರೇಡಿಯೋ, ಯುಎಸ್‌ಬಿ ಒಟಿಜಿ, ವೋವೈಫೈ ಮತ್ತು ಮೈಕ್ರೋ ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಇನ್‌ಫಿನಿಕ್ಸ್ ಹಾಟ್ 9ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ 4GB RAM + 64GB ಶೇಖರಣಾ ಆಯ್ಕೆಗೆ 9,499 ರೂ. ಬೆಲೆಯನ್ನ ಹೊಂದಿದ್ದು, ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿವೆ. ಇನ್ನು ಈ ಸ್ಮಾರ್ಟ್‌ಫೋನ್‌ನ ಮೊದಲ ಮಾರಾಟವನ್ನು ಜೂನ್ 5ಕ್ಕೆ ನಿಗದಿಪಡಿಸಲಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಓಷನ್ ಬ್ಲೂ ಮತ್ತು ವೈಲೆಟ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications




