ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ ಆಗಲಿದೆ ಇನ್ಫಿನಿಕ್ಸ್ ಹಾಟ್ 9 ಸರಣಿಯ ಸ್ಮಾರ್ಟ್‌ಫೋನ್!
ಇನ್‌ಫಿನಿಕ್ಸ್ ಕಂಪೆನಿ ಟೆಕ್ ವಲಯದಲ್ಲಿ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಅಗ್ಗದ ಬೆಲೆಯಲ್ಲಿ ಲಾಂಚ್ ಮಾಡಿದೆ. ಸದ್ಯ ಇದೀಗ ಹೊಸದಾಗಿ ತನ್ನ ಜನಪ್ರಿಯ ಇನ್‌ಫಿನಿಕ್ಸ್ ಹಾಟ್ 9 ಸರಣಿಯ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇದರ ಬಗ್ಗೆ ಇನ್ಫಿನಿಕ್ಸ್ ಮೊಬೈಲ್ ತನ್ನ ಅಧಿಕೃತ ವೆಬ್‌ಸೈಟ್ ಮೂಲಕ ಇನ್‌ಫಿನಿಕ್ಸ್ ಹಾಟ್ 9 ಸರಣಿಯ ಸ್ಮಾರ್ಟ್‌ಫೋನ್ ವಿನ್ಯಾಸದ ಟೀಸರ್ ವೀಡಿಯೊವನ್ನು ಬಿಡುಗಡೆ ಮಾಡಿದೆ.

ಹೌದು, ಹಾಂಗ್‌ಕಾಂಗ್ ಮೂಲದ ಸ್ಮಾರ್ಟ್‌ಫೋನ್ ತಯಾರಕ ಇನ್‌ಫಿನಿಕ್ಸ್ ಕಂಪೆನಿ ತನ್ನ ಇನ್‌ಫಿನಿಕ್ಸ್ ಹಾಟ್ 9 ಸರಣಿಯ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅತಿ ಶೀಘ್ರದಲ್ಲಿಯೇ ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇನ್ನು ಟ್ರಾನ್ಸ್‌ಷನ್ ಹೋಲ್ಡಿಂಗ್ಸ್ ಒಡೆತನದ ಇನ್‌ಫಿನಿಕ್ಸ್ ಕಂಪನಿಯು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಇನ್ಫಿನಿಕ್ಸ್ ಹಾಟ್ 8 ಅನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದರ ಮುಂದುವರೆದ ಸರಣಿಯ ಭಾಗವಾಗಿ ಇನ್ಫಿನಿಕ್ಸ್ ಹಾಟ್ 9 ಅನ್ನು ಬಿಡುಗಡೆ ಮಾಡಲಿದೆ ಎನ್ನಲಾಗ್ತಿದೆ. ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್ ವಿನ್ಯಾಸ ಹಾಗೂ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ಇನ್ಫಿನಿಕ್ಸ್ ಹಾಟ್ 9 ಸ್ಮಾರ್ಟ್‌ಫೋನ್ 6.6-ಇಂಚಿನ ಡಿಸ್‌ಪ್ಲೇಯನ್ನ ಹೊಂದಿರಲಿದೆ ಎನ್ನಲಾಗ್ತಿದೆ. ಇನ್ನು ಈ ಡಿಸ್‌ಪ್ಲೇ ಎಚ್‌ಡಿ + ಐಪಿಎಸ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಪಂಚ್‌ಹೋಲ್ ವಿನ್ಯಾಸವನ್ನ ಹೊಂದಿದ್ದು, ವಾಟರ್ ಡ್ರಾಪ್ ನಾಚ್ ಶೈಲಿಯನ್ನ ಹೊಂದಿರಲಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ A25 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಇಂಟರ್ ಸ್ಟೊರೇಜ್ ಸಾಮರ್ಥ್ಯವನ್ನ ಹೊಂದಿರುವ ಸಾದ್ಯತೆ ಇದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಇನ್‌ಫಿನಿಕ್ಸ್ ಹಾಟ್ 9 ಸರಣಿಯ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹಾಗೂ ನಾಲ್ಕನೇ ಕ್ಯಾಮೆರಾ AI ಬೆಂಬಲಿತ ಸೆನ್ಸಾರ್ ಕ್ಯಾಮೆರಾವನ್ನು ಹೊಂದಿರುವ ಸಾಧ್ಯತೆ ಇದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಅನ್ನು ಬೆಂಬಲಿಸಲಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಯಾವ ಬೆಲೆಗೆ ಲಭ್ಯವಾಗಲಿದೆ ಎನ್ನುವ ಮಾಹಿತಿ ಇನ್ನು ಕೂಡ ಲಭ್ಯವಾಗಿಲ್ಲ. ಆದರೆ ಇಗಾಗಲೇ ಇಂಡೋನೆಷ್ಯಾದಲ್ಲಿ ಬಿಡುಗಡೆ ಆಗಿರುವುದರಿಂದ ಇಂಡೋನೇಷ್ಯಾದಲ್ಲಿ ಇದರ ಬೆಲೆ IDR 1,699,000 (ಸರಿಸುಮಾರು 8,600 ರೂ.) ಆಗಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮ್ಯಾಟ್ ಬ್ಲ್ಯಾಕ್, ಸಯಾನ್, ವೈಲೆಟ್ ಮತ್ತು ಲೈಟ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications




