ಭಾರತದಲ್ಲಿ ಇನ್ಪಿನಿಕ್ಸ್‌ ಇನ್‌ಬುಕ್‌ X1 ಸರಣಿ ಬಿಡುಗಡೆ! ಬೆಲೆ ಎಷ್ಟು?

|

ಟೆಕ್‌ ವಲಯದಲ್ಲಿ ಇನ್ಫಿನಿಕ್ಸ್‌ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಸ್ಮಾರ್ಟ್‌ಫೋನ್‌ ಮಾತ್ರವಲ್ಲದೆ ಲ್ಯಾಪ್‌ಟಾಪ್‌ ವಲಯದಲ್ಲಿಯೂ ಕೂಡ ತನ್ನದೇ ಆದ ಪ್ರಾಬಲ್ಯವನ್ನು ಸಾಧಿಸಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಇನ್ಪಿನಿಕ್ಸ್‌ ಇನ್‌ಬುಕ್‌ X1 ಸರಣಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಸರಣಿಯು ಇನ್ಪಿನಿಕ್ಸ್‌ ಇನ್‌ಬುಕ್‌ X1 ಮತ್ತು ಇನ್‌ಬುಕ್‌ X1 ಪ್ರೊ ಮಾದರಿಗಳನ್ನು ಒಳಗೊಂಡಿದೆ. ಈ ಹೊಸ ಲ್ಯಾಪ್‌ಟಾಪ್‌ಗಳು ಹೊಸ ಮಾದರಿಯ ಫೀಚರ್ಸ್‌ಗಳನ್ನ ಪಡೆದುಕೊಂಡಿವೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಭಾರತದಲ್ಲಿ ಇನ್ಫಿನಿಕ್ಸ್‌ ಇನ್‌ಬುಕ್‌ X1 ಸರಣಿಯನ್ನು ಲಾಂಚ್‌ ಮಾಡಿದೆ. ಇದರಲ್ಲಿ ಇನ್ಫಿನಿಕ್ಸ್‌ ಇನ್‌ಬುಕ್‌ X1 ಇಂಟೆಲ್‌ ಕೋರ್‌ i3 ಮತ್ತು ಕೋರ್‌ i5 ಪ್ರೊಸೆಸರ್ ಆಯ್ಕೆಗಳನ್ನು ಹೊಂದಿದೆ. ಆದರೆ ಇನ್‌ಬುಕ್‌ X1 ಪ್ರೋ ಇಂಟೆಲ್‌ ಕೋರ್‌ i7 ಪ್ರೊಸೆಸರ್ ರೂಪಾಂತರವನ್ನು ಹೊಂದಿದೆ. ಇನ್ನು ಈ ಎಲ್ಲಾ ಮೂರು ಲ್ಯಾಪ್‌ಟಾಪ್‌ಗಳು ವಿಂಡೋಸ್‌ 11 ಔಟ್-ಆಫ್-ದಿ-ಬಾಕ್ಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿವೆ. ಹಾಗಾದ್ರೆ ಈ ಲ್ಯಾಪ್‌ಟಾಪ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಇನ್ಫಿನಿಕ್ಸ್‌ ಇನ್‌ಬುಕ್‌ X1 ವಿಶೇಷತೆ

ಇನ್ಫಿನಿಕ್ಸ್‌ ಇನ್‌ಬುಕ್‌ X1 ವಿಶೇಷತೆ

ಇನ್ಫಿನಿಕ್ಸ್‌ ಇನ್‌ಬುಕ್‌ X1 ಲ್ಯಾಪ್‌ಟಾಪ್‌ 14 ಇಂಚಿನ ಫುಲ್‌ ಹೆಚ್‌ಡಿ IPS ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದು ಇಂಟೆಲ್‌ ಕೋರ್‌ i3-1005G1 ಮತ್ತು ಕೋರ್‌ i5-1035G1 ಆಯ್ಕೆಗಳಲ್ಲಿ ಬರುತ್ತದೆ. ಇನ್ನು ಈ ಲ್ಯಾಪ್‌ಟಾಪ್‌ ವಿಂಡೋಸ್ 11 ಹೋಮ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಲ್ಲದೆ 8GB RAM + 256GB ಇಂಟರ್‌ ಸ್ಟೋರೇಜ್‌ ಹಾಗೂ 8GB RAM + 512GB ಸ್ಟೋರೇಜ್ ಕಾನ್ಫಿಗರೇಶನ್‌ಗಳನ್ನು ಹೊಂದಿದೆ.

ಲ್ಯಾಪ್‌ಟಾಪ್‌

ಇನ್ನು ಈ ಲ್ಯಾಪ್‌ಟಾಪ್‌ ಇಂಟಿಗ್ರೇಟೆಡ್ Intel UHD ಗ್ರಾಫಿಕ್ಸ್ ಅನ್ನು ಒಳಗೊಂಡಿದೆ. ಜೊತೆಗೆ ಈ ಲ್ಯಾಪ್‌ಟಾಪ್‌ ಹೆಚ್‌ಡಿ (720p) ವೆಬ್‌ಕ್ಯಾಮ್ ಅನ್ನು ಹೊಂದಿದೆ. ಈ ಲ್ಯಾಪ್‌ಟಾಪ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಒಂದು USB 2.0 ಮತ್ತು ಎರಡು USB 3.0 ಪೋರ್ಟ್‌ಗಳು, ಎರಡು USB Type-C ಪೋರ್ಟ್‌ಗಳು, HDMI 1.4 ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿವೆ. ಇದು ವೈರ್‌ಲೆಸ್ ಸಂಪರ್ಕದ ಭಾಗದಲ್ಲಿ ವೈ-ಫೈ 802.11ac ಮತ್ತು ಬ್ಲೂಟೂತ್ v5.1 ನೊಂದಿಗೆ ಬರುತ್ತದೆ. ಈ ಲ್ಯಾಪ್‌ಟಾಪ್‌ 55Wh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 65W ಪವರ್ ಡೆಲಿವರಿ (PD) ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಇನ್ಫಿನಿಕ್ಸ್‌ ಇನ್‌ಬುಕ್‌ X1 ಪ್ರೊ ವಿಶೇಷತೆ

ಇನ್ಫಿನಿಕ್ಸ್‌ ಇನ್‌ಬುಕ್‌ X1 ಪ್ರೊ ವಿಶೇಷತೆ

ಇನ್ಫಿನಿಕ್‌ಸ್‌ ಇನ್‌ಬುಕ್‌ X1 ಪ್ರೊ ಲ್ಯಾಪ್‌ಟಾಪ್‌ 14 ಇಂಚಿನ ಫುಲ್‌ ಹೆಚ್‌ಡಿ IPS ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 300 nits ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇನ್ನು ಈ ಲ್ಯಾಪ್‌ಟಾಪ್‌ ಇಂಟೆಲ್‌ ಕೋರ್‌ i7-1065G7 ಪ್ರೊಸೆಸರ್‌ ಅನ್ನು ಹೊಂದಿದ್ದು, ವಿಂಡೋಸ್‌ 11 ಹೋಮ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಲ್ಯಾಪ್‌ಟಾಪ್ ಇಂಟೆಲ್ ಐರಿಸ್ ಪ್ಲಸ್ ಗ್ರಾಫಿಕ್ಸ್‌ ಅನ್ನು ಹೊಂದಿದೆ. ಇದು ಹಾರ್ಡ್‌ವೇರ್ ಸ್ವಿಚ್‌ನೊಂದಿಗೆ HD (720p) ವೆಬ್‌ಕ್ಯಾಮ್ ಅನ್ನು ಸಹ ಒಳಗೊಂಡಿದೆ. ಇನ್ನು ಇನ್ಪಿನಿಕ್ಸ್‌ ಇನ್‌ಬುಕ್‌ X1 ಪ್ರೋ ಲ್ಯಾಪ್‌ಟಾಪ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಸುಧಾರಿತ ವೈರ್‌ಲೆಸ್ ಸಂಪರ್ಕಕ್ಕಾಗಿ Wi-Fi 6 ಅನ್ನು ಒಳಗೊಂಡಿದೆ. ಜೊತೆಗೆ ಒಂದು USB 2.0 ಮತ್ತು ಎರಡು USB 3.0 ಪೋರ್ಟ್‌ಗಳು, ಎರಡು USB Type-C ಪೋರ್ಟ್‌ಗಳು, HDMI 1.4 ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿವೆ. ಇದಲ್ಲದೆ ಈ ಲ್ಯಾಪ್‌ಟಾಪ್‌ 55Wh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W PD ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಇನ್ಫಿನಿಕ್ಸ್‌ ಇನ್‌ಬುಕ್‌ X1 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಹೊಂದಿರುವ ಇಂಟೆಲ್‌ ಕೋರ್‌ i3 ರೂಪಾಂತರಕ್ಕೆ 35,999.ರೂ ಬೆಲೆ ಹೊಂದಿದೆ. ಇನ್ನು ಈ ಲ್ಯಾಪ್‌ಟಾಪ್‌ನ ಇಂಟೆಲ್ ಕೋರ್ i5 ಮಾದರಿ 8GB RAM ಮತ್ತು 512GB SSD ಸ್ಟೋರೇಜ್ ಆಯ್ಕೆಯ ಬೆಲೆ 45,999.ರೂ.ಆಗಿದೆ. ಇದಲ್ಲದೆ ಇನ್ಫಿನಿಕ್ಸ್‌ ಇನ್‌ಬುಕ್‌ X1 Pro ಬೆಲೆ 55,999ರೂ ಆಗಿದ್ದು, 16GB RAM ಮತ್ತು 512GB ಸ್ಟೋರೇಜ್‌ ಸಾಮರ್ಥ್ಯದ Intel Core i7 ಆವೃತ್ತಿಯಲ್ಲಿ ಲಭ್ಯವಿದೆ. ಇನ್ನು ಇನ್ಫಿನಿಕ್ಸ್‌ ಇನ್‌ಬುಕ್‌ X1 ಸರಣಿಯು ಫ್ಲಿಪ್‌ಕಾರ್ಟ್ ಮೂಲಕ ಡಿಸೆಂಬರ್ 15 ರಿಂದ ಮಾರಾಟವಾಗಲಿದೆ. ಈ ಲ್ಯಾಪ್‌ಟಾಪ್‌ಗಳನ್ನು ಈಗಾಗಲೇ ಇ-ಕಾಮರ್ಸ್ ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ.

ಇನ್ಫಿನಿಕ್ಸ್‌

ಇದಲ್ಲದೆ ಇನ್ಫಿನಿಕ್ಸ್‌ ಕಂಪೆನಿ ಭಾರತದಲ್ಲಿ ಇದೇ ತಿಂಗಳು ಹೊಸ ಇನ್ಫಿನಿಕ್ಸ್‌ ನೋಟ್‌ 11 ಫೋನ್‌ ಲಾಂಚ್‌ ಮಾಡಲು ಸಿದ್ದತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G88 ಪ್ರೊಸೆಸರ್‌ನಿಂದ ಚಾಲಿತವಾಗುವ ನಿರೀಕ್ಷೆಯಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ ರನ್ ಆಗುತ್ತದೆ ಎನ್ನಲಾಗಿದೆ. ಜೊತೆಗೆ 4GB ಮತ್ತು 64GB RAM ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ಸಹ ನೀಡಲಾಗಿದೆ.ಇನ್ಫಿನಿಕ್ಸ್‌ ನೋಟ್‌ 11 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಕ್ವಾಡ್ LED ಜೊತೆಗೆ 50-ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ USB ಟೈಪ್ C 2.0, USB ಆನ್ ದಿ ಗೋ ಅನ್ನು ಬೆಂಬಲಿಸಲಿದೆ. ಇದರೊಂದಿಗೆ ಫಿಂಗರ್‌ಪ್ರಿಂಟ್ (ಸೈಡ್-ಮೌಂಟೆಡ್), ಅಕ್ಸೆಲೆರೊಮೀಟರ್, ಗೈರೊ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್‌,ಯನ್ನು ಸಹ ಒಳಗೊಂಡಿದೆ.

Most Read Articles
Best Mobiles in India

English summary
Infinix InBook X1 series was launched in India on Wednesday. The series consists of three models that are available under two distinct titles.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X