Home
ಸುದ್ದಿಜಾಲ

ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಇನ್ಪಿನಿಕ್ಸ್‌ ನೋಟ್‌ 11 ಸ್ಮಾರ್ಟ್‌ಫೋನ್‌!

ಟೆಕ್‌ ವಲಯದಲ್ಲಿ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಇನ್ಫಿನಿಕ್ಸ್‌ ಕಂಪೆನಿ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಬಜೆಟ್‌ ಬೆಲೆಯಲ್ಲಿ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಇನ್ಫಿನಿಕ್ಸ್‌ ನೋಟ್‌ 11 ಅನ್ನು ಡಿಸೆಂಬರ್‌ನಲ್ಲಿ ಫ್ಲಿಪ್‌ಕಾರ್ಟ್‌ನಲ್ಲಿ ಪ್ರತ್ಯೇಕವಾಗಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ.

ಇನ್ಫಿನಿಕ್ಸ್‌ ನೋಟ್‌ 11

ಹೌದು, ಇನ್ಫಿನಿಕ್ಸ್‌ ಕಂಪೆನಿ ಹೊಸ ಇನ್ಫಿನಿಕ್ಸ್‌ ನೋಟ್‌ 11 ಸ್ಮಾರ್ಟ್‌ಫೋನ್‌ ಡಿಸೆಂಬರ್‌ನಲ್ಲಿ ಭಾರತದಲ್ಲಿ ಲಾಂಚ್‌ ಮಾಡಲು ಪ್ಲಾನ್‌ ರೂಪಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ G88 ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿರಲಿದೆ ಎನ್ನಲಾಗಿದೆ. ಈಗಾಗಲೇ ಈ ಸ್ಮಾರ್ಟ್‌ಫೋನ್‌ ಅನ್ನು ಕೆಲವು ಅಯ್ದ ಮಾರುಕಟ್ಟೆಗಳಲ್ಲಿ ಲಾಂಚ್‌ ಮಾಡಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ ಎನ್ನಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಇನ್ಫಿನಿಕ್ಸ್‌ ನೋಟ್‌ 11 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ FHD+ ವಿವಿಡ್ AMOLED ಡಿಸ್ಪ್ಲೇಯನ್ನು ಹೊಂದಿದೆ ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ. ಇದಲ್ಲದೆ ಈ ಡಿಸ್‌ಪ್ಲೇ 393 ppi ಸಾಂದ್ರತೆ ಹೊಂದಿದ್ದು, 60Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್‌ ಹಿಲಿಯೋ G88 ಪ್ರೊಸೆಸರ್‌ನಿಂದ ಚಾಲಿತವಾಗುವ ನಿರೀಕ್ಷೆಯಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ ರನ್ ಆಗುತ್ತದೆ ಎನ್ನಲಾಗಿದೆ. ಜೊತೆಗೆ 4GB ಮತ್ತು 64GB RAM ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ಸಹ ನೀಡಲಾಗಿದೆ.

ಕ್ಯಾಮೆರಾ ಹೇಗಿದೆ?

ಕ್ಯಾಮೆರಾ ಹೇಗಿದೆ?

ಇನ್ಫಿನಿಕ್ಸ್‌ ನೋಟ್‌ 11 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಕ್ವಾಡ್ LED ಜೊತೆಗೆ 50-ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ f/2.4 ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ QVGA ಸೆನ್ಸಾರ್‌ ಪಡೆದುಕೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ USB ಟೈಪ್ C 2.0, USB ಆನ್ ದಿ ಗೋ ಅನ್ನು ಬೆಂಬಲಿಸಲಿದೆ. ಇದರೊಂದಿಗೆ ಫಿಂಗರ್‌ಪ್ರಿಂಟ್ (ಸೈಡ್-ಮೌಂಟೆಡ್), ಅಕ್ಸೆಲೆರೊಮೀಟರ್, ಗೈರೊ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್‌,ಯನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ನ ಬೆಲೆ 12,499 ರೂ.ಆಗಿರಲಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವ ಬಣ್ಣದ ಆಯ್ಕೆಯಲ್ಲಿ ಬರಲಿದೆ ಅನ್ನೊದು ಖಚಿತವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಈ ತಿಂಗಳ ಮದ್ಯದಲ್ಲಿ ಬಿಡುಗಡೆ ಆಗುವುದು ಪಕ್ಕಾ ಆಗಿದೆ.

ಇನ್ಫಿನಿಕ್ಸ್‌

ಇದಲ್ಲದೆ ಇನ್ಫಿನಿಕ್ಸ್‌ ಕಂಪೆನಿ ಇತ್ತೀಚಿಗಷ್ಟೆ ಇನ್ಫಿನಿಕ್ಸ್‌ ಹಾಟ್‌ 11 ಪ್ಲೇ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.82-ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G35 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಅನ್ನು ಆಧಾರಿತ XOS 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಈ ಫೋನ್ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು AI ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಪಿ ಕ್ಯಾಮೆರಾವನ್ನು ಹೊಂದಿದೆ.

Best Mobiles in India

English summary
infinix is Date set to launch a new smartphone in the Indian market.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+