Home
ಸುದ್ದಿಜಾಲ

ಬಿಡುಗಡೆಗೂ ಮುನ್ನವೇ ಇನ್ಫಿನಿಕ್ಸ್‌ ಜಿರೋ 30 5G ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

ಇನ್ಫಿನಿಕ್ಸ್‌ ಕಂಪೆನಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ಇನ್ಫಿನಿಕ್ಸ್‌ ಜಿರೋ 30 5G ಎಂದು ಹೆಸರಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 1100SoC ಪ್ರೊಸೆಸರ್‌ನಲ್ಲಿ ಬರಲಿದೆ ಎಂದು ವರದಿಯಾಗಿದೆ. ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ.

ಹೌದು, ಇನ್ಫಿನಿಕ್ಸ್‌ ಜಿರೋ 30 5G ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಎಂಟ್ರಿ ನೀಡುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಹೇಗಿರಲಿದೆ ಅನ್ನೊದು ಗೀಕ್‌ಬೆಂಚ್‌ನಲ್ಲಿ ಬಹಿರಂಗವಾಗಿದೆ. ಅದರಂತೆ ಸ್ಮಾರ್ಟ್‌ಫೋನ್‌ ಬ್ಲೂಟೂತ್ SIG ಪ್ರಮಾಣೀಕರಣವು ಬ್ಲೂಟೂತ್ 5.3 ನೊಂದಿಗೆ ಬರುತ್ತದೆ ಎಂದು ಬಹಿರಂಗಪಡಿಸಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಿಡುಗಡೆಗೂ ಮುನ್ನವೇ ಇನ್ಫಿನಿಕ್ಸ್‌ ಜಿರೋ 30 5G ಫೋನ್‌ ಫೀಚರ್ಸ್‌ ಬಹಿರಂಗ

ಇನ್ಫಿನಿಕ್ಸ್‌ ಜಿರೋ 30 5G ಡಿಸ್‌ಪ್ಲೇ ರಚನೆ
ಇನ್ಫಿನಿಕ್ಸ್‌ ಜಿರೋ 30 5G ಸ್ಮಾರ್ಟ್‌ಫೋನ್‌ 6.76 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಬಹುದು. ಇನ್ನು ಡಿಸ್‌ಪ್ಲೇ 480p ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ ಎಂದು ಪಟ್ಟಿಯು ತಿಳಿಸುತ್ತದೆ. ಇದರೊಂದಿಗೆ ಡಿಸ್‌ಪ್ಲೇ 120 Hz ರಿಫ್ರೆಶ್ ರೇಟ್‌, 280 Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಬೆಂಬಲಿಸಲಿದೆ ಎನ್ನಲಾಗಿದೆ.

ಇನ್ಫಿನಿಕ್ಸ್‌ ಜಿರೋ 30 5G ಪ್ರೊಸೆಸರ್‌ ಯಾವುದು?
ಇನ್ಫಿನಿಕ್ಸ್‌ ಜಿರೋ 30 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1100 ಪ್ರೊಸೆಸರ್‌ನಿಂದ ಚಾಲಿತವಾಗುತ್ತದೆ ಎನ್ನಲಾಗಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 2 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.

ಇನ್ಫಿನಿಕ್ಸ್‌ ಜಿರೋ 30 5G ಕ್ಯಾಮೆರಾ ಸೆಟ್‌ಅಪ್‌ ವಿವರ?
ಇನ್ಫಿನಿಕ್ಸ್‌ ಜಿರೋ 30 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಆಯ್ಕೆಯಲ್ಲಿ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 32 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ ಎನ್ನಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಇನ್ಫಿನಿಕ್ಸ್‌ ಜಿರೋ 30 5G ಬ್ಯಾಟರಿ ಬ್ಯಾಕ್‌ಅಪ್‌ ಸಾಧ್ಯತೆ
ಇನ್ಫಿನಿಕ್ಸ್‌ ಜಿರೋ 30 5G ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 80W ಫಾಸ್ಟ್ ಚಾರ್ಜರ್ ಬೆಂಬಲದೊಂದಿಗೆ ಬರಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಬೆಂಬಲದೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ.

ಇನ್ಫಿನಿಕ್ಸ್‌ ಜಿರೋ 30 5G ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್‌ ಜಿರೋ 30 5G ಸ್ಮಾರ್ಟ್‌ಫೋನ್‌ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಇದರ ನಿಖರವಾದ ಬೆಲೆಯ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಇದಲ್ಲದೆ ಇನ್ಫಿನಿಕ್ಸ್‌ ಕಂಪೆನಿ ಇತ್ತೀಚಿಗೆ ಹೊಸ ಇನ್ಫಿನಿಕ್ಸ್‌ GT 10 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 120Hz AMOLED ಡಿಸ್‌ಪ್ಲೇ, ಬ್ಲೋಟ್‌ವೇರ್-ಮುಕ್ತ ಅನುಭವವನ್ನು ನೀಡಲಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 8050 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ.

Best Mobiles in India

English summary
infinix is working on another smartphone called the Infinix Zero 30 5G
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+