ಭಾರತದಲ್ಲಿ ಲಗ್ಗೆ ಇಡಲು ಸಜ್ಜಾದ ಇನ್‌ಫಿನಿಕ್ಸ್ ನೋಟ್ 10 ಫೋನ್ ಸರಣಿ!
ಮೊಬೈಲ್ ವಲಯದಲ್ಲಿ ಇನ್‌ಫಿನಿಕ್ಸ್ ಕಂಪೆನಿ ಅಗ್ಗದ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಈಗಾಗಲೇ ಕೆಲವು ಫೋನ್ ಮಾಡೆಲ್‌ಗಳು ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿವೆ. ಇತ್ತೀಚಿಗಷ್ಟೆ ಇನ್‌ಫಿನಿಕ್ಸ್ ನೋಟ್ 10 ಸರಣಿಯಲ್ಲಿ ನೂತನವಾಗಿ ನೋಟ್ 10 ಮತ್ತು ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಿತು. ಈ ಎರಡು ಫೋನ್‌ಗಳನ್ನು ಭಾರತದಲ್ಲಿ ಲಾಂಚ್ ಮಾಡಲು ಕಂಪನಿಯು ಮುಹೂರ್ತ ಫಿಕ್ಸ್ ಮಾಡಿಕೊಂಡಿದೆ.

ಹೌದು, ಇನ್‌ಫಿನಿಕ್ಸ್ ಕಂಪೆನಿ ತನ್ನ ನೂತನ ನೋಟ್ 10 ಮತ್ತು ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ದೇಶಿಯ ಮಾರುಕಟ್ಟೆಗೆ ಇದೇ ಜೂನ್ 7 ರಂದು ಅಧಿಕೃತವಾಗಿ ಬಿಡುಗಡೆ ಮಾಡಲು ಸಜ್ಜಾಗಿದೆ. ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿರುವ ಈ ಎರಡು ಫೋನ್‌ಗಳು 20,000ರೂ.ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಳ್ಳಲಿವೆ ಎಂದು ಹೇಳಲಾಗಿದೆ. ಹಾಗಾದರೇ ಇನ್‌ಫಿನಿಕ್ಸ್ ನೋಟ್ 10 ಮತ್ತು ನೋಟ್ 10 ಪ್ರೊ ಫೋನ್‌ಗಳ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಇನ್‌ಫಿನಿಕ್ಸ್ ನೋಟ್ 10- ಡಿಸ್‌ಪ್ಲೇ
ಇನ್ಫಿನಿಕ್ಸ್ ನೋಟ್ 10 ಸ್ಮಾರ್ಟ್‌ಫೋನ್ 720 x 1640 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.95 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 1500: 1 ಕಾಂಟ್ರಾಸ್ಟ್ ಅನುಪಾತವನ್ನು ಹೊಂದಿದೆ.

ಇನ್‌ಫಿನಿಕ್ಸ್ ನೋಟ್ 10- ಪ್ರೊಸೆಸರ್
ಇದು ಮೀಡಿಯಾ ಟೆಕ್ ಹಿಲಿಯೊ G85 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB/6GB RAM ಜೊತೆಗೆ 64GB / 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್‌ಫಿನಿಕ್ಸ್ ನೋಟ್ 10- ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಇನ್‌ಫಿನಿಕ್ಸ್ ನೋಟ್ 10- ಬ್ಯಾಟರಿ
ಇನ್ಫಿನಿಕ್ಸ್ ನೋಟ್ 10 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ , ಯುಎಸ್‌ಬಿ ಟೈಪ್ ಸಿ, 5G , 4G ಯನ್ನು ಬೆಂಬಲಿಸಲಿದೆ.

ಇನ್‌ಫಿನಿಕ್ಸ್ ನೋಟ್ 10 ಪ್ರೊ - ಫೀಚರ್ಸ್
ಇನ್ಫಿನಿಕ್ಸ್ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.9-ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಮೀಡಿಯಾ ಟೆಕ್ G90 ಚಿಪ್‌ಸೆಟ್ ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ.


Click it and Unblock the Notifications