ಭಾರತದಲ್ಲಿ ಇನ್‌ಫಿನಿಕ್ಸ್ 10 ಮತ್ತು ಇನ್‌ಫಿನಿಕ್ಸ್ 10 ಪ್ರೊ ಫೋನ್ ಲಾಂಚ್!
ಮೊಬೈಲ್ ವಲಯದಲ್ಲಿ ಇನ್‌ಫಿನಿಕ್ಸ್ ಕಂಪೆನಿ ಅಗ್ಗದ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸಂಸ್ಥೆಯು ಇತ್ತೀಚಿಗಷ್ಟೆ ನೋಟ್ ಸರಣಿಯಲ್ಲಿ ಇನ್‌ಫಿನಿಕ್ಸ್ ನೋಟ್ 10 ಮತ್ತು ಇನ್‌ಫಿನಿಕ್ಸ್ 10 ಪ್ರೊ ಫೋನ್‌ಗಳನ್ನು ಲಾಂಚ್ ಮಾಡಿತ್ತು. ಇದೀಗ ಈ ಎರಡು ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಬಜೆಟ್ ಪ್ರೈಸ್‌ಟ್ಯಾಗ್ ಹೊಂದಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ.

ಹೌದು, ಇನ್‌ಫಿನಿಕ್ಸ್ ಕಂಪೆನಿ ದೇಶಿಯ ಮಾರುಕಟ್ಟೆಯಲ್ಲಿ ಹೊಸದಾಗ ಇನ್‌ಫಿನಿಕ್ಸ್ ನೋಟ್ 10 ಸ್ಮಾರ್ಟ್‌ಫೋನ್ ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯು ಇನ್‌ಫಿನಿಕ್ಸ್ ನೋಟ್ 10 ಮತ್ತು ಇನ್‌ಫಿನಿಕ್ಸ್ 10 ಪ್ರೊ ಮಾಡೆಲ್‌ಗಳನ್ನು ಒಳಗೊಂಡಿದ್ದು, ಎರಡು ಫೋನ್‌ಗಳು 5,000mAh ಬ್ಯಾಟರಿ ಪಡೆದಿರುವುದು ಹೈಲೈಟ್ ಆಗಿದೆ. ಹಾಗಾದರೇ ಇನ್‌ಫಿನಿಕ್ಸ್ ನೋಟ್ 10 ಮತ್ತು ಇನ್‌ಫಿನಿಕ್ಸ್ 10 ಪ್ರೊ ಮಾಡೆಲ್‌ಗಳ ಇತರೆ ಫೀಚರ್ಸ್ ಏನು?..ಬೆಲೆ ಎಷ್ಟು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ
ಇನ್‌ಫಿನಿಕ್ಸ್ ನೋಟ್ 10 ಸ್ಮಾರ್ಟ್‌ಫೋನ್ 720 x 1640 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.95 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 1500: 1 ಕಾಂಟ್ರಾಸ್ಟ್ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಯಾವುದು
ಇನ್‌ಫಿನಿಕ್ಸ್ ನೋಟ್ 10 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G85 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB/6GB RAM ಜೊತೆಗೆ 64GB / 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್
ಇನ್‌ಫಿನಿಕ್ಸ್ ನೋಟ್ 10 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ನೋಟ್ 10 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ , ಯುಎಸ್‌ಬಿ ಟೈಪ್ ಸಿ, 5G , 4G ಯನ್ನು ಬೆಂಬಲಿಸಲಿದೆ.

ಇನ್‌ಫಿನಿಕ್ಸ್ ನೋಟ್ 10 ಪ್ರೊ- ಫೀಚರ್ಸ್
ಇನ್‌ಫಿನಿಕ್ಸ್ ನೋಟ್ 10 ಪ್ರೊ ಫೋನ್ 6.95 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಮೀಡಿಯಾ ಟೆಕ್ ಹಿಲಿಯೊ G95 ಪ್ರೊಸೆಸರ್ ಅನ್ನು ಒಳಗೊಂಡಿದೆ. ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 64 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಆಗಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ

ಬೆಲೆ ಮತ್ತು ಲಭ್ಯತೆ
ಇನ್‌ಫಿನಿಕ್ಸ್ ನೋಟ್ 10 ಸ್ಮಾರ್ಟ್‌ಫೋನ್ 4GB RAM + 64GB ವೇರಿಯಂಟ್ ಬೆಲೆಯು 10,999ರೂ. ಆಗಿದೆ. 6GB RAM + 128GB ವೇರಿಯಂಟ್ ಬೆಲೆಯು 11,999ರೂ. ಆಗಿದೆ. ಈ ಫೋನ್ ಜೂನ್ 13ರಂದು ಫಸ್ಟ್ ಸೇಲ್ ಶುರು ಮಾಡಲಿದೆ. ಇನ್ನು ಇನ್‌ಫಿನಿಕ್ಸ್ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 8GB RAM + 256GB ವೇರಿಯಂಟ್ ದರವು 16,999ರೂ. ಆಗಿದೆ. ಬ್ಲ್ಯಾಕ್, ಪರ್ಪಲ್ ಬಣ್ಣಗಳ ಆಯ್ಕೆ ಪಡೆದಿದೆ.


Click it and Unblock the Notifications



