Home
ಸುದ್ದಿಜಾಲ

ಭಾರತದಲ್ಲಿ ಇನ್ಫಿನಿಕ್ಸ್‌ ನೋಟ್‌ 11 ಮತ್ತು ನೋಟ್‌ 11S ಸ್ಮಾರ್ಟ್‌ಫೋನ್‌ ಲಾಂಚ್‌!

ಇನ್ಫಿನಿಕ್ಸ್‌ ಕಂಪೆನಿ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಬಜೆಟ್‌ ಬೆಲೆಯಲ್ಲಿ ಪರಿಚಯಿಸಿ ತನ್ನ ಸ್ಥಾನ ಭದ್ರ ಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಇನ್ಫಿನಿಕ್ಸ್‌ ನೋಟ್‌ 11 ಮತ್ತು ಇನ್ಫಿನಿಕ್ಸ್‌ ನೋಟ್‌ 11S ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದುಕೊಂಡಿವೆ.

ಇನ್ಪಿನಿಕ್ಸ್‌

ಹೌದು, ಇನ್ಪಿನಿಕ್ಸ್‌ ಕಂಪೆನಿ ಭಾರತದಲ್ಲಿ ಹೊಸ ಇನ್ಫಿನಿಕ್ಸ್‌ ನೋಟ್‌ 11 ಮತ್ತು ಇನ್ಫಿನಿಕ್ಸ್‌ ನೋಟ್‌ 11S ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದರಲ್ಲಿ ಇನ್ಫಿನಿಕ್ಸ್ ನೋಟ್ 11 ವಾಟರ್‌ಡ್ರಾಪ್ ಸ್ಟೈಲ್ ನಾಚ್‌ ಶೈಲಿಯ ಅಮೋಲೆಡ್‌ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಇನ್ಫಿನಿಕ್ಸ್ ನೋಟ್ 11S ಫೋನ್‌ ಪಂಚ್- ಹೋಲ್‌ ಕಟೌಟ್ ವಿನ್ಯಾಸದ ಡಿಸ್‌ಪ್ಲೇ ಹೊಂದಿದೆ. ಜೊತೆಗೆ ಈ ಎರಡೂ ಸ್ಮಾರ್ಟ್‌ಫೋನ್‌ಗಳು 5,000mAh ಸಾಮರ್ಥ್ಯದ ಬ್ಯಾಟರಿಗಳನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಇನ್ಫಿನಿಕ್ಸ್‌ ನೋಟ್‌ 11 ಡಿಸ್‌ಪ್ಲೇ

ಇನ್ಫಿನಿಕ್ಸ್‌ ನೋಟ್‌ 11 ಡಿಸ್‌ಪ್ಲೇ

ಇನ್ಫಿನಿಕ್ಸ್‌ ನೋಟ್‌ 11 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಪಡೆದಿದೆ.

ಇನ್ಫಿನಿಕ್ಸ್‌ ನೋಟ್‌ 11S ಡಿಸ್‌ಪ್ಲೇ

ಇನ್ಫಿನಿಕ್ಸ್‌ ನೋಟ್‌ 11S ಡಿಸ್‌ಪ್ಲೇ

ಇನ್ನು ಇನ್ಫಿನಿಕ್ಸ್‌ ನೋಟ್‌ 11S ಸ್ಮಾರ್ಟ್‌ಫೋನ್‌ 1,080x2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.95 ಇಂಚಿನ ಫುಲ್‌ HD+ IPS ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಇದು ವೀಡಿಯೋ ಕರೆ ಹಾಗೂ ವಿಡಿಯೋ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಹೊಂದಿದೆ.

ಇನ್ಫಿನಿಕ್ಸ್‌ ನೋಟ್‌ 11 ಪ್ರೊಸೆಸರ್‌

ಇನ್ಫಿನಿಕ್ಸ್‌ ನೋಟ್‌ 11 ಪ್ರೊಸೆಸರ್‌

ಇದು ಆಕ್ಟಾ-ಕೋರ್‌ ಮೀಡಿಯಾಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಕಂಪನಿಯ XOS 10 ಕಸ್ಟಮ್ ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್ಫಿನಿಕ್ಸ್‌ ನೋಟ್‌ 11S ಪ್ರೊಸೆಸರ್‌

ಇನ್ಫಿನಿಕ್ಸ್‌ ನೋಟ್‌ 11S ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಕಂಪನಿಯ XOS 10 ಕಸ್ಟಮ್ ಸ್ಕಿನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಸ್ಲಾಟ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್ಫಿನಿಕ್ಸ್‌ ನೋಟ್‌ 11 ಕ್ಯಾಮೆರಾ

ಇನ್ಫಿನಿಕ್ಸ್‌ ನೋಟ್‌ 11 ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.6 ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು AI ಲೆನ್ಸ್‌ನೊಂದಿಗೆ ಬರುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಡ್ಯುಯಲ್-LED ಫ್ಲ್ಯಾಷ್‌ನೊಂದಿಗೆ ಅಳವಡಿಸಲಾಗಿದೆ.

ಇನ್ಫಿನಿಕ್ಸ್‌ ನೋಟ್‌ 11S ಕ್ಯಾಮೆರಾ

ಇನ್ಫಿನಿಕ್ಸ್‌ ನೋಟ್‌ 11S ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.6 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದು, ಇದನ್ನು ಡ್ಯುಯಲ್ LED ಫ್ಲ್ಯಾಷ್‌ನೊಂದಿಗೆ ಅಳವಡಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, 3.5 ಎಂಎಂ ಹೆಡ್ಫೋನ್ ಜ್ಯಾಕ್ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಕೂಡ ಪಡೆದಿವೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ಗಳು ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಇನ್ಫಿನಿಕ್ಸ್‌ ನೋಟ್‌ 11 ಸ್ಮಾರ್ಟ್‌ಫೋನ್‌ ಬೆಲೆ 11,999ರೂ. ಆಗಿದೆ. ಇದು ಸೆಲೆಸ್ಟಿಯಲ್ ಸ್ನೋ, ಗ್ಲೇಸಿಯರ್ ಗ್ರೀನ್ ಮತ್ತು ಗ್ರ್ಯಾಫೈಟ್ ಬ್ಲ್ಯಾಕ್ ಬಣ್ಣಗಳಲ್ಲಿ ಲಭ್ಯವಿದೆ. ಈ ಫೋನ್‌ ಇದೇ ಡಿಸೆಂಬರ್ 23 ರಿಂದ ಫ್ಲಿಪ್‌ಕಾರ್ಟ್ ಮೂಲಕ ದೇಶದಲ್ಲಿ ಖರೀದಿಗೆ ಲಭ್ಯವಿರುತ್ತದೆ.
ಇನ್ನು ಇನ್ಫಿನಿಕ್ಸ್‌ ನೋಟ್‌ 11S ಸ್ಮಾರ್ಟ್‌ಫೋನ್‌ ಬೆಲೆ 6GB + 64GBಸ್ಟೋರೇಜ್‌ ಆಯ್ಕೆಗೆ 12,999ರೂ.ಆಗಿದೆ. 8GB + 128GB ಸ್ಟೋರೇಜ್ ಆಯ್ಕೆಗೆ 14,999.ರೂ.ಬೆಲೆ ಹೊಂದಿದೆ. ಇದು ಹ್ಯಾಝ್ ಗ್ರೀನ್, ಮಿಥ್ರಿಲ್ ಗ್ರೇ ಮತ್ತು ಸಿಂಫನಿ ಸಯಾನ್ ಬಣ್ಣಗಳ ಆಯ್ಕೆಯಲ್ಲಿ ಮಾರಾಟವಾಗಲಿದೆ. ಈ ಫೋನ್‌ ಡಿಸೆಂಬರ್ 20 ರಿಂದ ಭಾರತದಲ್ಲಿ ಖರೀದಿಗೆ ಲಭ್ಯವಿರುತ್ತದೆ.

Best Mobiles in India

English summary
The smartphones are equipped with 50-megapixel triple rear camera modules.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+