ಭಾರತದಲ್ಲಿ ಇನ್ಫಿನಿಕ್ಸ್ ಕಂಪೆನಿಯ ಮೊದಲ 5G ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಇನ್ಫಿನಿಕ್ಸ್ ಕಂಪೆನಿ ಬಜೆಟ್ ಬೆಲೆಯ ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಎಂಟ್ರಿ ಲೆವೆಲ್ ಪ್ಲ್ಯಾಗ್‌ಶಿಪ್‌ನಲ್ಲಿ ಪರಿಚಯಿಸಿದೆ. ಆಕರ್ಷಕ ಕ್ಯಾಮೆರಾ, ಡಿಸ್‌ಪ್ಲೇ ಹಾಗೂ ಪ್ರೊಸೆಸರ್ ಒಳಗೊಂಡ ಸ್ಮಾರ್ಟ್‌ಫೋನ್‌ಗಳನ್ನು ಬಜೆಟ್ ಬೆಲೆಗೆ ನೀಡುವ ಮೂಲಕ ಗ್ರಾಹಕರನ್ನು ಸೆಳೆದಿದೆ. ಸದ್ಯ ಇದೀಗ ಇನ್ಫಿನಿಕ್ಸ್ ಕಂಪೆನಿ ಭಾರತದಲ್ಲಿ ತನ್ನ ಮೊದಲ 5G ಸ್ಮಾರ್ಟ್‌ಫೋನ್ ಇನ್ಫಿನಿಕ್ಸ್ ನೋಟ್ 12 5G ಸರಣಿಯನ್ನು ಬಿಡುಗಡೆ ಮಾಡಿದೆ.

ಹೌದು, ಇನ್ಫಿನಿಕ್ಸ್ ಕಂಪೆನಿ ಭಾರತದಲ್ಲಿ ಹೊಸ ಇನ್ಫಿನಿಕ್ಸ್ ನೋಟ್ 12 5G ಸರಣಿಯನ್ನು ಲಾಂಚ್ ಮಾಡಿದೆ. ಈ ಸರಣಿಯಲ್ಲಿ ಇನ್ಫಿನಿಕ್ಸ್ ನೋಟ್ 12 5G ಮತ್ತು ಇನ್ಫಿನಿಕ್ಸ್ ನೋಟ್ 12 ಪ್ರೊ 5G ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಾಗಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಮೀಡಿಯಾ ಟೆಕ್ ಡೈಮೆನ್ಸಿಟಿ 810 5G ಪ್ರೊಸೆಸರ್ ಬಲವನ್ನು ಹೊಂದಿವೆ. ಜೊತೆಗೆ ಈ ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ. ಆದರೆ ಪ್ರೈಮೆರಿ ಕ್ಯಾಮೆರಾ ಸೆನ್ಸಾರ್‌ಗಳು ವಿಭಿನ್ನವಾಗಿದೆ.

ಇನ್ಫಿನಿಕ್ಸ್ ನೋಟ್ 12 5G ಸರಣಿಯ ಸ್ಮಾರ್ಟ್‌ಫೋನ್‌ಗಳು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿವೆ. ಇನ್ನು ಇನ್ಫಿನಿಕ್ಸ್ ನೋಟ್ 12 5G ಸರಣಿ ಇದೇ ಜುಲೈ 14 ರಿಂದ ಫ್ಲಿಪ್‌ಕಾರ್ಟ್ ಮತ್ತು ಇನ್ಫಿನಿಕ್ಸ್‌ನ ಅಧಿಕೃತ ವೆಬ್‌ಸೈಟ್‌ನಿಂದ ಖರೀದಿಗೆ ಲಭ್ಯವಾಗಲಿದೆ. ಈ ಫೋನ್‌ಗಳು ಫೋರ್ಸ್ ಬ್ಲಾಕ್ ಮತ್ತು ಸ್ನೋಫಾಲ್ ವೈಟ್ ಕಲರ್ ಆಯ್ಕೆಯಲ್ಲಿ ದೊರೆಯಲಿವೆ. ಇನ್ನುಳಿದಂತೆ ಈ ಇನ್ಫಿನಿಕ್ಸ್ ನೋಟ್ 12 5G ಸರಣಿ ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಇನ್ಫಿನಿಕ್ಸ್ 12 ಪ್ರೊ 5G ಸ್ಮಾರ್ಟ್‌ಫೋನ್
ಇನ್ಫಿನಿಕ್ಸ್ 12 ಪ್ರೊ 5G ಸ್ಮಾರ್ಟ್‌ಫೋನ್ 5G 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇಯು 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 700 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 3 ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಪಡೆದಿದೆ. ಜೊತೆಗೆ ರಿಯರ್ ಪ್ಯಾನೆಲ್‌ನಲ್ಲಿ AG ಮ್ಯಾಟ್ ಫಿನಿಶ್ ಅನ್ನು ಹೊಂದಿದೆ.

ಇನ್ನು ಈ ಸ್ಮಾರ್ಟ್‌ಫೋನ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 810 5G ಪ್ರೊಸೆಸರ್ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಹೊಂದಿದೆ. ಜೊತೆಗೆ 13GB ಡೈನಾಮಿಕ್ RAM ಅನ್ನು ಕೂಡ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದು Quad LED ಫ್ಲ್ಯಾಷ್ ಒಳಗೊಂಡಿದೆ. ಇದಲ್ಲದೆ 16ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಡ್ಯುಯಲ್ LED ಫ್ಲ್ಯಾಷ್ ಹೊಂದಿದೆ.

ಇನ್ಫಿನಿಕ್ಸ್ 12 ಪ್ರೊ 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ಟೈಪ್-ಸಿ ಫಾಸ್ಟ್ ಚಾರ್ಜರ್ ಬೆಂಬಲಿಸಲಿದೆ. ಒಂದು ಗಂಟೆ 30 ನಿಮಿಷಗಳ ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳುತ್ತದೆ. ಇನ್ನು ಈ ಫೋನ್ DTS ಸರೌಂಡ್ ಸೌಂಡ್ ಜೊತೆಗೆ ಡ್ಯುಯಲ್ ಸ್ಪೀಕರ್‌ಗಳನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ v5.0, ಯುಎಸ್‌ಬಿ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಇನ್ಫಿನಿಕ್ಸ್ ನೋಟ್ 12 5G ಸ್ಮಾರ್ಟ್‌ಫೋನ್
ಇನ್ಫಿನಿಕ್ಸ್ ನೋಟ್ 12 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 5G ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB ಸ್ಟೋರೇಜ್ ಅನ್ನು ಹೊಂದಿದೆ. ಜೊತೆಗೆ 9GB ಡೈನಾಮಿಕ್ RAM ಅನ್ನು ಬೆಂಬಲಿಸಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಹುದಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಬಲದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು DTS ಸರೌಂಡ್ ಸೌಂಡ್ ಜೊತೆಗೆ ಡ್ಯುಯಲ್ ಸ್ಪೀಕರ್‌ಗಳನ್ನು ಹೊಂದಿದೆ. ಜೊತೆಗೆ 33W ಟೈಪ್-ಸಿ ಫಾಸ್ಟ್ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಇನ್ಫಿನಿಕ್ಸ್ ನೋಟ್ 12 ಪ್ರೊ 5G ಸ್ಮಾರ್ಟ್‌ಫೋನ್ 17,999ರೂ. ಬೆಲೆಯನ್ನು ಹೊಂದಿದೆ. ಆದರೆ ಇನ್ಫಿನಿಕ್ಸ್ ನೋಟ್ 12 5G ಸ್ಮಾರ್ಟ್‌ಫೋನ್ ಭಾರತದಲ್ಲಿ 14,999ರೂ.ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಫೋರ್ಸ್ ಬ್ಲಾಕ್ ಮತ್ತು ಸ್ನೋಫಾಲ್ ವೈಟ್ ಕಲರ್ ಆಯ್ಕೆಯಲ್ಲಿ ದೊರೆಯಲಿವೆ. ಈ ಎರಡೂ ಫೋನ್‌ಗಳು ಭಾರತದಲ್ಲಿ ಜುಲೈ 14 ರಿಂದ ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯವಾಗಲಿವೆ.

ಲಾಂಚ್ ಆಪರ್ ಏನಿದೆ?
ಇನ್ಫನಿಕ್ಸ್ ಕಂಪೆನಿ ತನ್ನ ಇನ್ಫಿನಿಕ್ಸ್ ನೋಟ್ 12 5G ಸರಣಿಯ ಸ್ಮಾರ್ಟ್‌ಫೋನ್‌ಗಳ ಮೇಲೆ ಅನೇಕ ಲಾಂಚ್ ಆಫರ್ ಅನ್ನು ನೀಡುತ್ತಿದೆ. ಅದರಂತೆ ನೀವು ಈ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಪ್ರಿ ಬುಕ್ಕಿಂಗ್ ಮಾಡಿದರೆ 1,000ರೂಪಾಯಿಗಳ ರಿಯಾಯಿತಿಯನ್ನು ಪಡೆದುಕೊಳ್ಳಬಹುದು. ಅಲ್ಲದೆ ಆಕ್ಸಿಸ್ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಪಾವತಿ ಮಾಡುವ ಗ್ರಾಹಕರು 1,500 ರೂ. ಆಫರ್ ಪಡದುಕೊಳ್ಳಬಹುದಾಗಿದೆ. ಇದಲ್ಲದೆ ಇನ್ಫಿನಿಕ್ಸ್ ಫೋನ್ 12 5G ಅನ್ನು ಪ್ರಿ ಬುಕ್ಕಿಂಗ್ ಮಾಡಿದರೆ 500ರೂಪಾಯಿ ರಿಯಾಯಿತಿ ದೊರೆಯಲಿದೆ.


Click it and Unblock the Notifications








