Infinix: 2 TB ವರೆಗೆ ವಿಸ್ತರಿಸಬಹುದಾದ ಸ್ಟೋರೇಜ್ ಆಯ್ಕೆಯ ಈ ಇನ್ಫಿನಿಕ್ಸ್ ಫೋನ್‌ಗೆ ಭರ್ಜರಿ ಆಫರ್!
ಇನ್ಫಿನಿಕ್ಸ್ ಸ್ಮಾರ್ಟ್‌ಫೋನ್‌ಗಳಿಗೆ (Infinix smartphone) ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಅದರಲ್ಲೂ ಈ ಫೋನ್‌ಗಳು ಅಗ್ಗದ ದರದಲ್ಲಿ ಹೆಚ್ಚಿನ ಸ್ಟೋರೇಜ್ ಸೌಲಭ್ಯ ನೀಡಲಿದ್ದು, ಈ ಮೂಲಕ ಬಳಕೆದಾರರು ಈ ಫೋನ್‌ಗಳನ್ನು ಹೆಚ್ಚಾಗಿ ಖರೀದಿ ಮಾಡುತ್ತಿದ್ದಾರೆ. ಈ ಬೆಳವಣಿಗೆ ನಡುವೆ ಇನ್ಫಿನಿಕ್ಸ್ ನ ಈ ಬಹುಬೇಡಿಕೆ ಫೋನ್ ಆಫರ್ ಬೆಲೆಗೆ ಕಾಣಿಸಿಕೊಂಡಿದೆ.
ಹೌದು, ಇನ್ಫಿನಿಕ್ಸ್ ನೋಟ್ 12 5G ಸ್ಮಾರ್ಟ್‌ಫೋನ್ (Infinix Note 12 5G smartphone) ಇದೀಗ ಆಫರ್ ಬೆಲೆಗೆ ಲಭ್ಯ ಇದೆ. ಈ ಸ್ಮಾರ್ಟ್‌ಫೋನ್ 2 TB ವರೆಗೆ ವಿಸ್ತರಿಸಬಹುದಾದ ಸ್ಟೋರೇಜ್ ಆಯ್ಕೆಯನ್ನು ಪಡೆದಿದ್ದು, 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮೂಲಕ ಉತ್ತಮ ಎನಿಸಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಭಾರತದಲ್ಲಿ ಇದರ ಆಫರ್ ಬೆಲೆ ಎಷ್ಟು ಅನ್ನೋ ಮಾಹಿತಿ ಇಲ್ಲಿದೆ ನೋಡಿ.

ಇನ್ಫಿನಿಕ್ಸ್ ನೋಟ್ 12 5G ಸ್ಮಾರ್ಟ್‌ಫೋನ್ ಅಫರ್ ಮಾಹಿತಿ: ಈ ಸ್ಮಾರ್ಟ್‌ಫೋನ್ 19,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದೆಯಾದರೂ ಸಹ ನೀವು ಈಗ ಆಫರ್ ಬೆಲೆ 15,999 ರೂ.ಗಳಿಗೆ ಇದನ್ನು ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಫ್ಲಿಪ್‌ಕಾರ್ಟ್ ಈ ಫೋನ್ ಮೇಲೆ 20% ರಿಯಾಯಿತಿ ಘೋಷಣೆ ಮಾಡಿದೆ. ಅದಾಗ್ಯೂ ನೀವು ಕೆಲವು ಬ್ಯಾಂಕ್ ಆಫರ್ ಬಳಕೆ ಮಾಡಿಕೊಂಡು ಇನ್ನೂ ಹಣ ಉಳಿತಾಯ ಮಾಡಬಹುದಾಗಿದೆ.
ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್ ಮತ್ತು ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ, ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್‌ನಲ್ಲಿ ಹೆಚ್ಚುವರಿ 750 ರೂ.ಗಳ ರಿಯಾಯಿತಿ, ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಇಎಮ್‌ಐ 9 ತಿಂಗಳು ಮತ್ತು ಹೆಚ್ಚಿನ ವ್ಯವಹಾರದ ಮೇಲೆ 500 ರಿಯಾಯಿತಿ ಸೇರಿದಂತೆ ವಿವಿಧ ಆಫರ್ ಅನ್ನು ಪಡೆಯಬಹುದಾಗಿದೆ. ಹಾಗಿದ್ರೆ ಈ ಫೋನ್ ಏನೆಲ್ಲಾ ಫೀಚರ್ಸ್ ಹೊಂದಿದೆ ಅನ್ನೋದನ್ನು ನೋಡೋಣ ಬನ್ನಿ.

ಇನ್ಫಿನಿಕ್ಸ್ ನೋಟ್ 12 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.7 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದ್ದು, 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಉತ್ತಮ ಎನಿಸಿದೆ. ಜೊತೆಗೆ 393 ppi ಸಾಂದ್ರತೆ, 85.6% ಸ್ಕ್ರೀನ್-ಟು-ಬಾಡಿ ಅನುಪಾತ ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಪಡೆದಿದೆ.
ಇನ್ಫಿನಿಕ್ಸ್ ನೋಟ್ 12 5G ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಇನ್ನು ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 810 (6 nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 12, XOS 10.6 ಓಎಸ್ ಅನ್ನು ಇದು ರನ್ ಮಾಡಲಿದೆ. ಇದರೊಂದಿಗೆ ಮಾಲಿ-G57 MC2 ಗ್ರಾಫಿಕ್ಸ್ ಕಾರ್ಡ್ ಬಲ ಸಹ ಈ ಫೋನ್‌ನಲ್ಲಿದೆ. ಉಳಿದಂತೆ 6GB RAM ಹಾಗೂ 64GB ಇಂಟರ್ ಸ್ಟೋರೇಜ್ ಅನ್ನು ಈ ಫೋನ್ ಹೊಂದಿದ್ದು, ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 2 TB ವರೆಗೆ ವಿಸ್ತರಿಸಬಹುದಾದ ಸ್ಟೋರೇಜ್ ಸೌಲಭ್ಯಕ್ಕೆ ಅನುಮತಿ ನೀಡಲಿದೆ.

ಇನ್ಫಿನಿಕ್ಸ್ ನೋಟ್ 12 5G ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಹೊಂದಿದೆ. ಈ ಸೆನ್ಸರ್‌ಗಳು ಕ್ವಾಡ್ ಎಲ್ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್ ಸೌಲಭ್ಯ ಪಡೆದಿದ್ದು, 1440p@30fps ಸಾಮರ್ಥ್ಯದ ವಿಡಿಯೋಗಳನ್ನು ರೆಕಾರ್ಡ್ ಮಾಡಬಹುದಾಗಿದೆ. ಅಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್‌ನಲ್ಲಿ ನೋಡಬಹುದಾಗಿದೆ.
ಇನ್ಫಿನಿಕ್ಸ್ ನೋಟ್ 12 5G ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 33W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಇದರ ಜೊತೆಗೆ ವೈ-ಫೈ 802.11 a/b/g/n, ಬ್ಲೂಟೂತ್ ಆವೃತ್ತಿ 5.0, A2DP, LE, ಯುಎಸ್‌ಬಿ ಟೈಪ್-ಸಿ 2.0, ಓಟಿಜಿ ಸೇರಿದಂತೆ ಅನೇಕ ಕನೆಕ್ಟಿವಿಟಿ ಫೀಚರ್ಸ್ ಅನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.


Click it and Unblock the Notifications








