Just In
Don't Miss
- Sports
ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ರೋಹಿತ್ ಶರ್ಮಾ ಕೋವಿಡ್ ವರದಿ ನೆಗೆಟಿವ್; ಟಿ20 ಸರಣಿಗೆ ರೆಡಿ
- Movies
ಗುಬ್ಬಿ ವೀರಣ್ಣ ಪುತ್ರಿ, ಹಿರಿಯ ನಟಿ ಹೇಮಲತಾ ನಿಧನ
- News
ISWA: ಆಸ್ಟ್ರೇಲಿಯಾದ ಅನಿವಾಸಿ ಭಾರತೀಯರೊಂದಿಗೆ ಸಚಿವ ಪ್ರಲ್ಹಾದ್ ಜೋಶಿ ನಿಯೋಗ ಭೇಟಿ
- Finance
Gold Rate Today: ಚಿನ್ನ ಸ್ಥಿರ: ಪ್ರಮುಖ ನಗರಗಳಲ್ಲಿ ಜು.3ರಂದು ಬೆಲೆ ಎಷ್ಟು
- Automobiles
ಜೂನ್ ತಿಂಗಳಿನಲ್ಲಿ 4.84 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್
- Lifestyle
Weekly Horoscope: ಜುಲೈ 3ರಿಂದ ಜುಲೈ 9ರ ವಾರ ಭವಿಷ್ಯ: ಮೇಷ, ಮಿಥುನ, ಮಕರ, ಕುಂಭ ರಾಶಿಯ ವ್ಯಾಪಾರಸ್ಥರು ಆರ್ಥಿಕ ಲಾಭ ಪಡೆಯಬಹುದು
- Education
JNV Result 2022 : 6ನೇ ತರಗತಿ ತಾತ್ಕಾಲಿಕ ಆಯ್ಕೆ ಪಟ್ಟಿ ಜು.10ರಂದು ಪ್ರಕಟ ಸಾಧ್ಯತೆ
- Travel
ಕೆಮ್ಮಣ್ಣು ಗುಂಡಿ - ಒಂದು ಮನಮೋಹಕ ತಾಣ!
ಇಂದು ಇನ್ಫಿನಿಕ್ಸ್ ನೋಟ್ 12 ಫೋನಿನ ಫಸ್ಟ್ ಸೇಲ್!..ಬೆಲೆ ಎಷ್ಟು?
ಇನ್ಫಿನಿಕ್ಸ್ ಮೊಬೈಲ್ ಸಂಸ್ಥೆಯ ತನ್ನ ಬಹುನಿರೀಕ್ಷಿತ ಇನ್ಫಿನಿಕ್ಸ್ ನೋಟ್ 12 ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಆಗಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್ಫೋನ್ ಇಂದು (ಮೇ 28) ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ ಹಾಗೂ ಅಧಿಕೃತ ಇನ್ಫಿನಿಕ್ಸ್ ತಾಣದ ಮೂಲಕ ಮೊದಲ ಮಾರಾಟ ಆರಂಭಿಸಲಿದೆ. ಇನ್ನು ಇನ್ಫಿನಿಕ್ಸ್ ನೋಟ್ 12 ಸ್ಮಾರ್ಟ್ಫೋನ್ ಆರಂಭಿಕ ಬೆಲೆಯು 11,499 ರೂ. ಆಗಿದೆ.

ಹೌದು, ಇನ್ಫಿನಿಕ್ಸ್ ಕಂಪನಿಯ ಇನ್ಫಿನಿಕ್ಸ್ ನೋಟ್ 12 ಸ್ಮಾರ್ಟ್ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್ಫೋನ್ 5,000mAh ಬ್ಯಾಟರಿ ಬ್ಯಾಕ್ಅಪ್ ಹೊಂದಿದ್ದು, 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಅನ್ನು ಪಡೆದಿದೆ. ಇನ್ನು ಈ ಫೋನಿನ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿದೆ. ಇನ್ನುಳಿದಂತೆ ಇನ್ಫಿನಿಕ್ಸ್ ನೋಟ್ 12 ಸ್ಮಾರ್ಟ್ಫೋನಿನ ಇತರೆ ಯಾವೆಲ್ಲಾ ಫೀಚರ್ಸ್ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಇನ್ಫಿನಿಕ್ಸ್ ನೋಟ್ 12 ಫೀಚರ್ಸ್
ಇನ್ಫಿನಿಕ್ಸ್ ನೋಟ್ 12 ಸ್ಮಾರ್ಟ್ಫೋನ್ 6.7 ಇಂಚಿನ ಫುಲ್ HD + ಡಿಸ್ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G88 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ X OS 10.6 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫ್ಲಾಶ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್, FM ರೇಡಿಯೋ, GPS/ A-GPS, USB ಟೈಪ್-C ಮತ್ತು 3.5mm ಹೆಡ್ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.

ಇನ್ಫಿನಿಕ್ಸ್ ನೋಟ್ 12 ಟರ್ಬೋ ಫೀಚರ್ಸ್
ಇನ್ಫಿನಿಕ್ಸ್ ನೋಟ್ 12 ಟರ್ಬೋ 6.7 ಇಂಚಿನ ಫುಲ್ HD+ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇ 1,000 ನಿಟ್ಸ್ ಬ್ರೈಟ್ನೆಸ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಬೆಂಬಲದೊಂದಿಗೆ 512 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 24 ಗಂಟೆಗಳವರೆಗೆ ವೀಡಿಯೊ ಪ್ಲೇಬ್ಯಾಕ್ ಅನ್ನು ಬೆಂಬಲಿಸುತ್ತದೆ.
ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ನೋಟ್ 12 ಸ್ಮಾರ್ಟ್ಫೋನ್ 4GB RAM + 64GB ಸ್ಟೋರೇಜ್ ಮಾದರಿಗೆ 11,499 ರೂ. ಬೆಲೆ ಹೊಂದಿದೆ. ಇನ್ನು 6GB RAM + 128GB ಸ್ಟೋರೇಜ್ ಮಾದರಿಗೆ 12,999ರೂ. ಬೆಲೆ ಹೊಂದಿದೆ. ಹಾಗೆಯೇ ಇನ್ಫಿನಿಕ್ಸ್ ನೋಟ್ 12 ಟರ್ಬೋ ಸ್ಮಾರ್ಟ್ಫೋನ್ 8GB RAM + 128GB ಕಾನ್ಫಿಗರೇಶನ್ಗಾಗಿ 14,999 ರೂ.ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಫೋರ್ಸ್ ಬ್ಲ್ಯಾಕ್, ಸಫೈರ್ ಬ್ಲೂ ಮತ್ತು ಸ್ನೋಫಾಲ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಇನ್ನು ಇನ್ಫಿನಿಕ್ಸ್ ನೋಟ್ 12 ಸ್ಮಾರ್ಟ್ಫೋನ್ ಮೇ 28 ರಿಂದ ಫ್ಲಿಪ್ಕಾರ್ಟ್ನಲ್ಲಿ ಲಭ್ಯವಿರುತ್ತವೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086