Just In
Don't Miss
- News
ಭಾರತದಲ್ಲಿ 196 ಕೋಟಿ ದಾಟಿದ ಕೋವಿಡ್ ಲಸಿಕಾ ಅಭಿಯಾನ
- Automobiles
ಬರೋಬ್ಬರಿ 40 ವೆರಿಯೆಂಟ್ಗಳನ್ನು ಹೊಂದಿರಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್
- Finance
ಅತೀ ಕಡಿಮೆ ಬಡ್ಡಿದರದಲ್ಲಿ ವೈಯಕ್ತಿಕ ಸಾಲ ನೀಡುತ್ತೆ ಈ ಬ್ಯಾಂಕುಗಳು!
- Sports
1983ರ ವಿಶ್ವಕಪ್ ವಿಜಯೋತ್ಸವಕ್ಕೆ 39 ವರ್ಷಗಳು: ಇಡೀ ದೇಶಕ್ಕೆ ಸ್ಫೂರ್ತಿ ನೀಡಿದ್ದ ಕಪಿಲ್ ದೇವ್ ತಂಡ!
- Movies
ಹಿಟ್ಲರ್ ಕಲ್ಯಾಣ: ತನ್ನ ತಾಯಿಗೆ ಪಾಠ ಕಲಿಸುತ್ತಾಳ ಲೀಲಾ?
- Education
BIMS Belagavi Recruitment 2022 : 10 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಪುರುಷರಲ್ಲಿ ಲೈಂಗಿಕ ಶಕ್ತಿಯ ಸಮಸ್ಯೆಗೆ ಈ ಹಣ್ಣುಗಳೇ ಪವರ್ಫುಲ್ ಮದ್ದು
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಭಾರತದಲ್ಲಿ ಇನ್ಫಿನಿಕ್ಸ್ ನೋಟ್ 12 ಸರಣಿ ಬಿಡುಗಡೆ! ಬೆಲೆ ಎಷ್ಟು?
ಇನ್ಫಿನಿಕ್ಸ್ ಕಂಪೆನಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳಿಗೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ಹೊಸ ಇನ್ಫನಿಕ್ಸ್ ನೋಟ್ 12 ಸರಣಿಯನ್ನು ಪರಿಚಯಿಸಿದೆ. ಇದರಲ್ಲಿ ಇನ್ಫಿನಿಕ್ಸ್ ನೋಟ್ 12 ಮತ್ತು ಇನ್ಫಿನಿಕ್ಸ್ ನೋಟ್ 12 ಟರ್ಬೋ ಸ್ಮಾರ್ಟ್ಫೋನ್ ಸೇರಿವೆ. ಈ ಎರಡೂ ಸ್ಮಾರ್ಟ್ಫೋನ್ಗಳು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಬ್ಯಾಟರಿಯನ್ನು ಹೊಂದಿವೆ.

ಹೌದು, ಇನ್ಫಿನಿಕ್ಸ್ ಕಂಪೆನಿ ಹೊಸ ಇನ್ಫಿನಿಕ್ಸ್ ನೋಟ್ 12 ಮತ್ತು ಇನ್ಫಿನಿಕ್ಸ್ ನೋಟ್ 12 ಟರ್ಬೋ ಫೋನ್ ಲಾಂಚ್ ಮಾಡಿದೆ. ಇದರಲ್ಲಿ ಇನ್ಫಿನಿಕ್ಸ್ ನೋಟ್ 12 ಫೋನ್ ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್ ಹೊಂದಿದೆ. ಆದರೆ ಇನ್ಫಿನಿಕ್ಸ್ ನೋಟ್ 12 ಟರ್ಬೋ G96 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಎರಡೂ ಸ್ಮಾರ್ಟ್ಫೋನ್ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ ನೋಟ್ 12
ಇನ್ಫಿನಿಕ್ಸ್ ನೋಟ್ 12 ಸ್ಮಾರ್ಟ್ಫೋನ್ 6.7 ಇಂಚಿನ ಫುಲ್ HD+ ಡಿಸ್ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ X OS 10.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫ್ಲಾಶ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್, FM ರೇಡಿಯೋ, GPS/ A-GPS, USB ಟೈಪ್-C ಮತ್ತು 3.5mm ಹೆಡ್ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.

ಇನ್ಫಿನಿಕ್ಸ್ ನೋಟ್ 12 ಟರ್ಬೋ
ಇನ್ಫಿನಿಕ್ಸ್ ನೋಟ್ 12 ಟರ್ಬೋ 6.7 ಇಂಚಿನ ಫುಲ್ HD+ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇ 1,000 ನಿಟ್ಸ್ ಬ್ರೈಟ್ನೆಸ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಬೆಂಬಲದೊಂದಿಗೆ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 24 ಗಂಟೆಗಳವರೆಗೆ ವೀಡಿಯೊ ಪ್ಲೇಬ್ಯಾಕ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ನೋಟ್ 12 ಸ್ಮಾರ್ಟ್ಫೋನ್ 4GB RAM + 64GB ಸ್ಟೋರೇಜ್ ಮಾದರಿಗೆ 11,499ರೂ.ಬೆಲೆ ಹೊಂದಿದೆ. ಇನ್ನು 6GB RAM + 128GB ಸ್ಟೋರೇಜ್ ಮಾದರಿಗೆ 12,999ರೂ. ಬೆಲೆ ಹೊಂದಿದೆ. ಇದು ಫೋರ್ಸ್ ಬ್ಲ್ಯಾಕ್, ಜ್ಯುವೆಲ್ ಬ್ಲೂ ಮತ್ತು ಸನ್ಸೆಟ್ ಗೋಲ್ಡ್ ಬಣ್ಣಗಳ ಆಯ್ಕೆಯಲ್ಲಿ ಬರಲಿದೆ.
ಇನ್ನು ಇನ್ಫಿನಿಕ್ಸ್ ನೋಟ್ 12 ಟರ್ಬೋ ಸ್ಮಾರ್ಟ್ಫೋನ್ 8GB RAM + 128GB ಕಾನ್ಫಿಗರೇಶನ್ಗಾಗಿ 14,999ರೂ.ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಫೋರ್ಸ್ ಬ್ಲ್ಯಾಕ್, ಸಫೈರ್ ಬ್ಲೂ ಮತ್ತು ಸ್ನೋಫಾಲ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಮೇ 27 ಮತ್ತು ಮೇ 28 ರಿಂದ ಫ್ಲಿಪ್ಕಾರ್ಟ್ನಲ್ಲಿ ಲಭ್ಯವಿರುತ್ತವೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999