ಇನ್ಫಿನಿಕ್ಸ್‌ ನೋಟ್‌ 12 ಪ್ರೊ 4G ಸ್ಮಾರ್ಟ್‌ಫೋನ್ ಲಾಂಚ್‌ ಡೇಟ್‌ ಫಿಕ್ಸ್‌!

|

ಇನ್ಫಿನಿಕ್ಸ್‌ ಕಂಪೆನಿ ತನ್ನ ವಿಶೇಷ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್‌ ನೋಟ್‌ 12 ಪ್ರೊ 4G ಸ್ಮಾರ್ಟ್‌ಫೋನ್ ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಇದು ಇದೇ ಆಗಸ್ಟ್ 26 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್‌ ನೋಟ್‌ 12 ಪ್ರೊ 4G ಬಿಡುಗಡೆಗೆ ವೇದಿಕೆ ಸಿದ್ಧಪಡಿಸಿದೆ. ಈ ಸ್ಮಾರ್ಟ್‌ಫೋನ್‌ ವಾಟರ್‌ ಡ್ರಾಪ್‌ ಶೈಲಿಯ ನಾಚ್‌ ವಿನ್ಯಾಸವನ್ನು ಹೊಂದಿದೆ. ಇದು ವರ್ಚುವಲ್‌ RAM ಅನ್ನು ಕೂಡ ಹೊಂದಿದೆ ಎನ್ನಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಮದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ಫೀಚರ್ಸ್‌ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಇನ್ಫಿನಿಕ್ಸ್‌ ನೋಟ್‌ 12 ಪ್ರೊ 4G ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಲಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 393 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್‌ ಹೊಂದಿರುವ ಬೆಜೆಲ್-ಲೆಸ್ ಡಿಸ್‌ಪ್ಲೇ ಆಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ಫಿನಿಕ್ಸ್‌ ನೋಟ್‌ 12 ಪ್ರೊ 4G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ ಬಲದಿಂದ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಬಲವನ್ನು ಪಡೆದಿರುವ ಸಾಧ್ಯತೆಯಿದೆ. ಇದಲ್ಲದೆ ನಿಮಗೆ 5GB ವರೆಗಿನ ಆಂತರಿಕ ಸಂಗ್ರಹಣೆಯನ್ನು ವರ್ಚುವಲ್ RAM ಆಗಿ ಬಳಸಲು ಅನುಮತಿಸುತ್ತದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ಫಿನಿಕ್ಸ್‌ ನೋಟ್‌ 12 ಪ್ರೊ 4G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಡೆಪ್ತ್ ಲೆನ್ಸ್ ಮತ್ತು ಹಿಂಭಾಗದಲ್ಲಿ AI ಲೆನ್ಸ್ ಕೂಡ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ಫಿನಿಕ್ಸ್‌ ನೋಟ್‌ 12 ಪ್ರೊ 4G ಸ್ಮಾರ್ಟ್‌ಫೋನ್‌ 33W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಯನ್ನು ಬೆಂಬಲಿಸಲಿದೆ. ಇದಲ್ಲದೆ DTS ತಂತ್ರಜ್ಞಾನದಿಂದ ವರ್ಧಿತ ಡ್ಯುಯಲ್ ಸ್ಪೀಕರ್‌ಗಳನ್ನು ಹೊಂದಿದೆ. ಜೊತೆಗೆ ಗೇಮಿಂಗ್ ಅನುಭವಕ್ಕಾಗಿ 4D ಕಂಪನದೊಂದಿಗೆ ಲೀನಿಯರ್ ಮೋಟಾರ್ ಟ್ಯಾಕ್ಟೈಲ್ ಸಿಸ್ಟಮ್ ಸಹ ಇದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ನೋಟ್‌ 12 ಪ್ರೊ 4G ಸ್ಮಾರ್ಟ್‌ಫೋನ್‌ ಇದೇ ಆಗಸ್ಟ್‌ 26 ರಂದು ಬಿಡುಗಡೆ ಆಗಲಿದೆ. ಈ ಸ್ಮಾರ್ಟ್‌ಫೋನ್‌ 15,000ರೂ. ಬೆಲೆಗೆ ಲಭ್ಯವಾಗುವ ಸಾದ್ಯತೆಯಿದೆ. ಇದು ಆಲ್ಪೈನ್ ವೈಟ್, ಟಸ್ಕನಿ ಬ್ಲೂ ಮತ್ತು ಜ್ವಾಲಾಮುಖಿ ಬೂದು ಬಣ್ಣಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
The Infinix Note 12 Pro 4G packs 5,000mAh battery with 33W fast charging

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X