ಇಂದು ಇನ್ಫಿನಿಕ್ಸ್‌ ನೋಟ್‌ 12 ಪ್ರೊ ಫಸ್ಟ್‌ ಸೇಲ್‌!..ಬಜೆಟ್‌ ಬೆಲೆಗೆ 108MP ಕ್ಯಾಮೆರಾ!

|

ಇನ್ಫಿನಿಕ್ಸ್‌ ಮೊಬೈಲ್ ಸಂಸ್ಥೆಯ ತನ್ನ ಬಹುನಿರೀಕ್ಷಿತ ಇನ್ಫಿನಿಕ್ಸ್‌ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಆಗಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಮೇ 28) ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ಇನ್ಫಿನಿಕ್ಸ್‌ ತಾಣದ ಮೂಲಕ ಮೊದಲ ಮಾರಾಟ ಆರಂಭಿಸಲಿದೆ. ಇನ್ನು ಇನ್ಫಿನಿಕ್ಸ್‌ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆಯು 16,999 ರೂ. ಆಗಿದೆ.

ನೋಟ್‌

ಕಳೆದ ವಾರ ಬಿಡುಗಡೆ ಆಗಿರುವ ಇನ್ಫಿನಿಕ್ಸ್‌ ನೋಟ್‌ 12 ಪ್ರೊ ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್‌ 8GB RAM + 256GB ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದ್ದು, ಎಸ್‌ಡಿ ಕಾರ್ಡ್‌ ಮೂಲಕ 2TB ವರೆಗೂ ಬಾಹ್ಯ ಮೆಮೊರಿಯನ್ನು ವಿಸ್ತರಿಸಬಹುದಾಗಿದೆ. ಹಾಗೆಯೇ ಇದು ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ.

ಪಿಕ್ಸಲ್‌

ಇನ್ನು ಇನ್ಫಿನಿಕ್ಸ್‌ ನೋಟ್‌ 12 ಪ್ರೊ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ಬಲದಲ್ಲಿದೆ. ಹಾಗಾದರೇ ಇನ್ಫಿನಿಕ್ಸ್‌ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ? ಇದರೆ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಇನ್ಫಿನಿಕ್ಸ್‌ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 393 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್‌ ಹೊಂದಿರುವ ಬೆಜೆಲ್-ಲೆಸ್ ಡಿಸ್‌ಪ್ಲೇ ಆಗಿದೆ.

ಪ್ರೊಸೆಸರ್‌ ಬಲ ಯಾವುದು?

ಪ್ರೊಸೆಸರ್‌ ಬಲ ಯಾವುದು?

ಇನ್ಫಿನಿಕ್ಸ್‌ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ G99 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಬಲವನ್ನು ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ 2TB ವರೆಗೂ ಬಾಹ್ಯ ಮೆಮೊರಿಯನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ

ಕ್ಯಾಮೆರಾ ಸೆನ್ಸಾರ್ ವಿಶೇಷ

ಇನ್ಫಿನಿಕ್ಸ್‌ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಡೆಪ್ತ್ ಲೆನ್ಸ್ ಮತ್ತು ಹಿಂಭಾಗದಲ್ಲಿ AI ಲೆನ್ಸ್ ಕೂಡ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಇನ್ಫಿನಿಕ್ಸ್‌ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ 33W ವೇಗದ ಚಾರ್ಜಿಂಗ್ ಬೆಂಬಲಿಸುವ 5,000 mAh ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈ ಫೈ ಯನ್ನು ಬೆಂಬಲಿಸಲಿದೆ. ಇದಲ್ಲದೆ DTS ತಂತ್ರಜ್ಞಾನದಿಂದ ವರ್ಧಿತ ಡ್ಯುಯಲ್ ಸ್ಪೀಕರ್‌ಗಳನ್ನು ಹೊಂದಿದೆ. ಜೊತೆಗೆ ಗೇಮಿಂಗ್ ಅನುಭವಕ್ಕಾಗಿ 4D ಕಂಪನದೊಂದಿಗೆ ಲೀನಿಯರ್ ಮೋಟಾರ್ ಟ್ಯಾಕ್ಟೈಲ್ ಸಿಸ್ಟಮ್ ಸಹ ಇದೆ. ಹಾಗೆಯೇ ಈ ಫೋನ್ 164.39x76.52x7.8mm ಅಳತೆ ಹೊಂದಿದ್ದು, 192 ಗ್ರಾಂ ತೂಕವನ್ನು ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ 8GB RAM ಮತ್ತು 256GB ಸಾಮರ್ಥ್ಯದ ವೇರಿಯಂಟ್‌ ಬೆಲೆಯು 16,999 ರೂ. ಆಗಿದೆ. ಇನ್ನು ಇದೇ ಸೆಪ್ಟೆಂಬರ್ 1 ರಂದು ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಹಾಗೂ ಸಂಸ್ಥೆಯ ವೆಬ್‌ಸೈಟ್ ಮೂಲಕ ಫಸ್ಟ್ ಸೇಲ್ ಪ್ರಾರಂಭಿಸಲಿದೆ. ಹಾಗೆಯೇ ಬ್ಲೂ, ವೈಟ್‌ ಮತ್ತು ಗ್ರೇ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಆಫರ್‌ ಲಭ್ಯವಾಗಲಿದೆ. ಫಸ್ಟ್‌ ಸೇಲ್‌ನಲ್ಲಿ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೇಲೆ 1,500 ರೂ. ರಿಯಾಯಿತಿಯನ್ನು ಪಡೆಯಬಹುದು.

Best Mobiles in India

English summary
Infinix Note 12 Pro include a 5,000mAh battery, 33W fast charging support, and up to 13GB of RAM.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X