ಇನ್ಫಿನಿಕ್ಸ್ ನೋಟ್ 12 VIP ಮತ್ತು ನೋಟ್ 12 G96 ಫೋನ್ ಬಿಡುಗಡೆ! ಫೀಚರ್ಸ್ ಹೇಗಿದೆ?
ಟೆಕ್ ವಲಯದಲ್ಲಿ ಇನ್ಫಿನಿಕ್ಸ್ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಇನ್ಫಿನಿಕ್ಸ್ ನೋಟ್ 12 VIP ಮತ್ತು ಇನ್ಫಿನಿಕ್ಸ್ ನೋಟ್ 12 G96 ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಇನ್ಪಿನಿಕ್ಸ್ ನೋಟ್ 12 VIP ಸ್ಮಾರ್ಟ್‌ಫೋನ್ 120W ಹೈಪರ್ ಚಾರ್ಜ್ ಟೆಕ್ನಾಲಜಿಯನ್ನು ಹೊಂದಿದೆ. ಜೊತೆಗೆ 33W ಫ್ಲ್ಯಾಶ್ ಚಾರ್ಜ್ ಟೆಕ್ನಾಲಜಿಯನ್ನು ಒಳಗೊಂಡಿದೆ.

ಹೌದು, ಇನ್ಫಿನಿಕ್ಸ್ ಕಂಪೆನಿ ಇನ್ಫಿನಿಕ್ಸ್ ನೋಟ್ 12 VIP ಮತ್ತು ಇನ್ಫಿನಿಕ್ಸ್ ನೋಟ್ 12 G96 ಫೋನ್ ಲಾಂಚ್ ಮಾಡಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದಲ್ಲದೆ ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಈ ಎರಡೂ ಸ್ಮಾರ್ಟ್‌ಫೋನ್ ಹೊರಭಾಗಗಳನ್ನು ಏರೋಸ್ಪೇಸ್-ಗ್ರೇಡ್ ಅಲ್ಟ್ರಾ-ಥಿನ್ ಗ್ಲಾಸ್ ಫೈಬರ್‌ನಿಂದ ತಯಾರಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಇನ್ಫಿನಿಕ್ಸ್ ನೋಟ್ 12 VIP
ಇನ್ಫಿನಿಕ್ಸ್ ನೋಟ್ 12 VIP ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 93.1% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಸಹ ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12-ಆಧಾರಿತ X OS 10.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಹೊಂದಿದೆ. ಜೊತೆಗೆ 5GB ವಿಸ್ತೃತ RAM ಅನ್ನು ಕೂಡ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸಿನೆಮ್ಯಾಜಿಕ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಕೂಡ ಇದೆ. ಜೊತೆಗೆ ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ಹೈಪರ್ ಚಾರ್ಜ್ ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ.

ಇನ್ಫಿನಿಕ್ಸ್ ನೋಟ್ 12 G96
ಇನ್ಫಿನಿಕ್ಸ್ ನೋಟ್ 12 G96 ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ HD+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 92% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 5GB ವಿಸ್ತೃತ RAM ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 33W ಫ್ಲ್ಯಾಶ್ ಚಾರ್ಜ್ ತಂತ್ರಜ್ಞಾನವನ್ನು ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ನೋಟ್ 12 VIP ಸ್ಮರ್ಟ್‌ಫೋನ್ 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ $299 ಬೆಲೆ ಹೊಂದಿದೆ. ಇನ್ನು ಇನ್ಫಿನಿಕ್ಸ್ ನೋಟ್ 12 G96 ಸ್ಮಾರ್ಟ್‌ಫೋನ್ $199 ರಿಂದ ಪ್ರಾರಂಭವಾಗುತ್ತದೆ. ಈ ಫೋನ್ ಫೋರ್ಸ್ ಬ್ಲಾಕ್, ಸಫೈರ್ ಬ್ಲೂ ಮತ್ತು ಸ್ನೋಫಾಲ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications








