ಇನ್ಫಿನಿಕ್ಸ್‌ ಕಂಪೆನಿಯಿಂದ ಹೊಸ ಫೋನ್‌ ಬಿಡುಗಡೆ! 33W ಚಾರ್ಜಿಂಗ್‌ ಸಾಮರ್ಥ್ಯ!

|

ಮೊಬೈಲ್‌ ಮಾರುಕಟ್ಟೆಯಲ್ಲಿ ಇನ್ಫಿನಿಕ್ಸ್‌ ಕಂಪೆನಿ ಬಜೆಟ್‌ ಬೆಲೆಯ ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ನೋಟ್‌ ಸರಣಿಯಲ್ಲಿ ಹೊಸ ಇನ್ಫಿನಿಕ್ಸ್‌ ನೋಟ್‌ 12i 2022 ಫೋನ್‌ ಬಿಡುಗಡೆ ಮಾಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ G85 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 33W ವೇಗದ ಚಾರ್ಜಿಂಗ್‌ ಬೆಂಬಲವನ್ನು ಪಡೆದಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಹೊಸ ಇನ್ಫಿನಿಕ್ಸ್‌ ನೋಟ್‌ 12i 2022 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ಟಿರಿಯೊ ಸ್ಪೀಕರ್ ಸೆಟಪ್ ಅನ್ನು ಒಳಗೊಂಡಿದೆ. ಇದು ಮೆಟಾವರ್ಸ್ ಬ್ಲೂ, ಫೋರ್ಸ್ ಬ್ಲ್ಯಾಕ್ ಮತ್ತು ಆಲ್ಪೈನ್ ವೈಟ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಇನ್ಫಿನಿಕ್ಸ್‌ ನೋಟ್‌ 12i 2022 ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 86.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ಫಿನಿಕ್ಸ್‌ ನೋಟ್‌ 12i 2022 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G85SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಇಂಟಿಗ್ರೇಟೆಡ್ ಮಾಲಿ G52 GPU ಸಪೋರ್ಟ್‌ ಪಡೆದಿದೆ. ಈ ಫೋನ್‌ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಹಾಗೂ 6GB ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಇನ್ಫಿನಿಕ್ಸ್‌ ನೋಟ್ 12i ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ AI ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ವೀಡಿಯೋ ಕರೆ ಮತ್ತು ಸೆಲ್ಫಿಗಳಿಗಾಗಿ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ಫಿನಿಕ್ಸ್‌ ನೋಟ್ 12i ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, 3.5 ಎಂಎಂ ಆಡಿಯೊ ಜಾಕ್ ಮತ್ತು DTS ಆಡಿಯೊದೊಂದಿಗೆ ಸ್ಟಿರಿಯೊ ಸ್ಪೀಕರ್ ಸೆಟಪ್, ಡ್ಯುಯಲ್-ಸಿಮ್, ವೈಫೈ, ಬ್ಲೂಟೂತ್ ಮತ್ತು GPS ಸೇರಿವೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ನೀಡುತ್ತದೆ. ಇದಲ್ಲದೆ ಆಕ್ಸಿಲೆರೋಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಗ್ರಾವಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ನೋಟ್ 12i 2022 ಸ್ಮಾರ್ಟ್‌ಫೋನ್‌ ಇಂಡೋನೇಷಿಯನ್ ರುಪಿಯಾ 2,299,000 (ಸುಮಾರು 12,300 ರೂ) ಬೆಲೆಯನ್ನು ಹೊಂದಿದೆ. ಈ ಫೋನ್‌ ಮೆಟಾವರ್ಸ್ ಬ್ಲೂ, ಫೋರ್ಸ್ ಬ್ಲ್ಯಾಕ್ ಮತ್ತು ಆಲ್ಪೈನ್ ವೈಟ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಭಾರತೀಯ ಮಾರುಕಟ್ಟೆಗೆ ಯಾವಾಗ ಎಂಟ್ರಿ ನೀಡಲಿದೆ ಎಂಬುದು ಇನ್ನು ಕೂಡ ಬಹಿರಂಗವಾಗಿಲ್ಲ.

Best Mobiles in India

English summary
Infinix Note 12i 2022 With AMOLED Display Launched

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X