Just In
Don't Miss
- Finance
2 ಕೋಟಿಗೂ ಕಡಿಮೆ FD ಹಣಕ್ಕೆ ಹೆಚ್ಚು ಬಡ್ಡಿ ನೀಡುವ 5 ಬ್ಯಾಂಕ್ ಯಾವವು, ಅವುಗಳ ಬಡ್ಡಿ ದರ ಬಗ್ಗೆ ತಿಳಿಯಿರಿ
- Movies
ಬಳ್ಳಾರಿ: ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ ಕಲ್ಲು
- Sports
ಭಾರತ ತಂಡವನ್ನು ನೋಡಿ ಕಲಿಯಿರಿ: ಪಾಕಿಸ್ತಾನ ತಂಡವನ್ನು ತರಾಟೆಗೆ ತೆಗೆದುಕೊಂಡ ಮಾಜಿ ಕ್ರಿಕೆಟಿಗ
- News
ರಾಜಕೀಯ ದ್ವೇಷಕ್ಕೆ 15 ವರ್ಷಗಳಿಂದ ಜಮೀನಿನ ದಾರಿ ಬಂದ್; ಡಿ.ಕೆ.ಶಿ ತವರಲ್ಲಿ ಬಡ ಕುಂಟುಂಬ ಕಣ್ಣೀರು
- Automobiles
ಬೆಲೆ ಇಳಿಸಿ, ಹೆಚ್ಚಿನ ಮೈಲೇಜ್ನೊಂದಿಗೆ ಟಾಟಾ ಬಿಡುಗಡೆಗೊಳಿಸಿದ ನೆಕ್ಸಾನ್ ಇವಿ ವಿಶೇಷತೆಗಳು
- Lifestyle
ವಾರ ಭವಿಷ್ಯ ಜ.22-ಜ.28: ಈ ವಾರ ಯಾವ ರಾಶಿಯವರಿಗೆ ಅದೃಷ್ಟ, ಯಾರು ಸ್ವಲ್ಪ ಜಾಗ್ರತೆವಹಿಸಬೇಕು ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಇನ್ಫಿನಿಕ್ಸ್ ನೋಟ್ 12i ಲಾಂಚ್ ಡೇಟ್ ಬಹಿರಂಗ! ಫೀಚರ್ಸ್ ಹೇಗಿದೆ?
ಭಾರತದಲ್ಲಿ ಅತ್ಯಾಕರ್ಷಕ ಡಿಸೈನ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳಿಗೆ ಇನ್ಫಿನಿಕ್ಸ್ ಕಂಪೆನಿ ಪ್ರಸಿದ್ಧಿ ಪಡೆದಿದೆ. ತನ್ನ ಸ್ಟೈಲಿಶ್ ಲುಕ್ ಹಾಗೂ ಜಬರ್ದಸ್ತ್ ಫೀಚರ್ಸ್‌ಗಳಿಂದ ಇನ್ಫಿನಿಕ್ಸ್ ಫೋನ್‌ಗಳು ಗಮನಸೆಳೆದಿವೆ. ಇದೀಗ ಇನ್ಫಿನಿಕ್ಸ್ ಕಂಪೆನಿ ತನ್ನ ಜನಪ್ರಿಯ ಇನ್ಫಿನಿಕ್ಸ್ ನೋಟ್ 12i ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ. ಈ ಸ್ಮಾರ್ಟ್‌ಫೋನ್ ಇದೇ ಜನವರಿ 25 ರಂದು ಭಾರತಕ್ಕೆ ಎಂಟ್ರಿ ನೀಡೋದು ಪಕ್ಕಾ ಆಗಿದೆ.

ಹೌದು, ಇನ್ಫಿನಿಕ್ಸ್ ನೋಟ್ 12i ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಬಹಿರಂಗವಾಗಿದೆ. ಈ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ನಿರೀಕ್ಷೆ ಇನ್ನಷ್ಟು ಹೆಚ್ಚಾಗುವಂತೆ ಮಾಡಿದೆ. ಇದು ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಡಿಸ್‌ಪ್ಲೇ ವಿನ್ಯಾಸ
ಇನ್ಫಿನಿಕ್ಸ್ ನೋಟ್ 12i ಸ್ಮಾರ್ಟ್‌ಫೋನ್ 6.82 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಟಿಎಫ್‌ಟಿ ಡಿಸ್‌ಪ್ಲೇ ಹೊಂದಿದೆ. ಇದು 720x1640 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 83.6% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 263 ಪಿಪಿಐ ಸಾಂದ್ರತೆಯನ್ನು ಬೆಂಬಲಿಸಲಿದೆ ಎನ್ನಲಾಗಿದೆ.

ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ನೋಟ್ 12i ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇದಲ್ಲದೆ RAM ಅನ್ನು 3GB ವರ್ಚುವಲ್ RAM ಜೊತೆಗೆ 7GB ವರೆಗೆ ವಿಸ್ತರಿಸಬಹುದಾಗಿದೆ.
ಕ್ಯಾಮೆರಾ ಸೆಟ್‌ಅಪ್ ಏನಿದೆ?
ಇನ್ಫಿನಿಕ್ಸ್ ನೋಟ್ 12i ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಲೆನ್ಸ್ ಡೆಪ್ತ್ ಸೆನ್ಸರ್ ಆಗಿದ್ದರೆ, ಮೂರನೇ ಕ್ಯಾಮೆರಾ AI ಲೆನ್ಸ್ ಹೊಂದಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ನೋಟ್ 12i ಸ್ಮಾರ್ಟ್‌ಫೋನ್ 33W ವೇಗದ ಚಾರ್ಜಿಂಗ್‌ಗೆ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.
ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ ಬೆಲೆ ವಿವರಗಳು ಇನ್ನು ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಇದೇ ಜನವರಿ 25 ರಂದು ಬಿಡುಗಡೆಯಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅನ್ನು ಫ್ಲಿಪ್‌ಕಾರ್ಟ್‌ನಲ್ಲಿ ಸೇಲ್ ಆಗಲಿದೆ.
ಇದಲ್ಲದೆ ಇನ್ಫಿನಿಕ್ಸ್ ಇತ್ತೀಚಿಗೆ ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.82 ಇಂಚಿನ ಹೆಚ್‌ಡಿ ಪ್ಲಸ್ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1640 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 120Hz ಟಚ್ ಸ್ಯಾಪ್ಲಿಂಗ್ ರೇಟ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ನ ಡಿಸ್‌ಪ್ಲೇ 82.8% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಪಡೆದುಕೊಂಡಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470