ಕೈಗೆಟಕುವ ಬೆಲೆಯಲ್ಲಿ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 12i! ಸ್ಟೈಲಿಶ್ ಲುಕ್!
ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಇನ್ಫಿನಿಕ್ಸ್ ನೋಟ್ 12i ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್ ಕೈ ಗೆಟಕುವ ಬೆಲೆಯನ್ನು ಹೊಂದಿದ್ದು, ಅತ್ಯಾಕರ್ಷಕವಾದ ಡಿಸೈನ್ ಅನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ಇನ್ಫಿನಿಕ್ಸ್ ಕಂಪೆನಿ ತನ್ನ ಹೊಸ ಇನ್ಫಿನಿಕ್ಸ್ ನೋಟ್ 12i ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇದು 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇ 180Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಟೈಲಿಶ್ ಲುಕ್! ಅಮೋಲೆಡ್ ಡಿಸ್‌ಪ್ಲೇ
ಈ ಸ್ಮಾರ್ಟ್‌ಫೋನ್ ಮೊದಲ ನೋಟದಲ್ಲೇ ತನ್ನ ಸ್ಟೈಲಿಶ್ ಲುಕ್‌ನಿಂದ ಗಮನಸೆಳೆಯಲಿದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಬೆಂಬಲಿಸಲಿದೆ. ಹಾಗೆಯೇ 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಹೊಂದಿದೆ.

ಅತ್ಯುತ್ತಮ ಕಾರ್ಯದಕ್ಷತೆ, ಪ್ರೊಸೆಸರ್ ವೇಗ ಏನಿದೆ?
ಇನ್ಫಿನಿಕ್ಸ್ ನೋಟ್ 12i ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.

ತ್ರಿವಳಿ ಕ್ಯಾಮೆರಾ..ಡ್ಯುಯಲ್ ಎಲ್‌ಇಡಿ ಫ್ಲ್ಯಾಷ್!
ಇನ್ನು ಈ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾಗಳನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.6 ಅಪರ್ಚರ್ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ QVGA ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್ ವಿವರ!
ಇನ್ಫಿನಿಕ್ಸ್ ಕಂಪೆನಿಯ ಈ ಹೊಸ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, ಬ್ಲೂಟೂತ್ 5.0, GPS ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದು ಆಂಬಿಯೆಂಟ್ ಲೈಟ್ ಸೆನ್ಸರ್, ಜಿ-ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ನೋಟ್ 12i ಸ್ಮಾರ್ಟ್‌ಫೋನ್ ಭಾರತದಲ್ಲಿ ಕೇವಲ 9,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದು ಫೋರ್ಸ್ ಬ್ಲಾಕ್ ಮತ್ತು ಮೆಟಾವರ್ಸ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಜನವರಿ 30 ರಂದು ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಲಾಂಚ್ ಆಫರ್ ಪ್ರಯುಕ್ತ ಗ್ರಾಹಕರು ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಮೂಲಕ ಖರೀದಿಸಿದರೆ 5% ಕ್ಯಾಶ್‌ಬ್ಯಾಕ್ ಆಫರ್ ಪಡೆದುಕೊಳ್ಳಬಹುದಾಗಿದೆ.


Click it and Unblock the Notifications








