Home
ಸುದ್ದಿಜಾಲ

ಇಂದು ಈ 108ಎಂಪಿ ಕ್ಯಾಮೆರಾ ಫೋನಿನ ಫಸ್ಟ್‌ ಸೇಲ್‌!..ಇದರ ಬೆಲೆ 14,999ರೂ!

ಇನ್ಫಿನಿಕ್ಸ್‌ ಮೊಬೈಲ್ ಸಂಸ್ಥೆ ಇತ್ತೀಚಿನ ಪರಿಚಯಿಸಿರುವ ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಭಾರೀ ಗಮನ ಸೆಳೆದಿದೆ. ಮಾರುಕಟ್ಟೆಯಲ್ಲಿ ಗಮನ ಸೆಳೆದಿರುವ ಈ ಫೋನಿನ ಮೊದಲ ಮಾರಾಟ ಇಂದು (ಜೂ. 22 ರಂದು) ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಆರಂಭ ಆಗಲಿದೆ. ಇನ್ನು ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆಯು 14,999 ರೂ. ಆಗಿದೆ.

ಹೌದು, ಇನ್ಫಿನಿಕ್ಸ್‌ ಕಂಪನಿಯ ಇನ್ಫಿನಿಕ್ಸ್‌ ನೋಟ್‌ 30 5G (Infinix Note 30 5G ) ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, 45W ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆ ಪಡೆದಿದೆ. ಇನ್ನು ಇದು 4GB + 128GB ಹಾಗೂ 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ.

ಇಂದು ಈ 108ಎಂಪಿ ಕ್ಯಾಮೆರಾ ಫೋನಿನ ಫಸ್ಟ್‌ ಸೇಲ್‌!..ಇದರ ಬೆಲೆ 14,999ರೂ!

ಹಾಗೆಯೇ ಇನ್ಫಿನಿಕ್ಸ್‌ ನೋಟ್‌ 30 5G ಫೋನಿನ ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ನಲ್ಲಿದ್ದು, ಪ್ರಮುಖ ಹೈಲೈಟ್ಸ್‌ಗಳಲ್ಲಿ ಒಂದಾಗಿದೆ. ಇನ್ನುಳಿದಂತೆ ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನಿನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಇನ್ಫಿನಿಕ್ಸ್‌ ನೋಟ್‌ 30 5G ಡಿಸ್‌ಪ್ಲೇ ವಿವರದ ಮಾಹಿತಿ : ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದ್ದು, ಇನ್ನು ಡಿಸ್‌ಪ್ಲೇ 240Hz ಟಚ್ ಸ್ಯಾಪ್ಲಿಂಗ್‌ ರೇಟ್‌ ಮತ್ತು 580 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ.

ಇನ್ಫಿನಿಕ್ಸ್‌ ನೋಟ್‌ 30 5G ಪ್ರೊಸೆಸರ್‌ ಬಲ ಯಾವುದು : ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ 4 GB ಮತ್ತು 128 GB ಹಾಗೂ 8 GB RAM ಮತ್ತು 256 GB ಇಂಟರ್‌ ಬಿಲ್ಟ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ

ಇನ್ಫಿನಿಕ್ಸ್‌ ನೋಟ್‌ 30 5G ಕ್ಯಾಮೆರಾ ಸೆನ್ಸಾರ್ ರಚನೆ : ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು ಅನಿರ್ದಿಷ್ಟ AI ಕ್ಯಾಮರಾ ಸೆನ್ಸಾರ್‌ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಒದಗಿಸಲಾಗಿದೆ.

ಇನ್ಫಿನಿಕ್ಸ್‌ ನೋಟ್‌ 30 5G ಬ್ಯಾಟರಿ ಮತ್ತು ಇತರೆ ಸೌಲಭ್ಯಗಳ ಮಾಹಿತಿ ಇಲ್ಲಿದೆ : ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ 45W ವೈರ್ಡ್ ಚಾರ್ಜಿಂಗ್‌ ಸಪೋರ್ಟ್‌ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಈ ಫೋನ್‌ ಜಸ್ಟ್‌ 30 ನಿಮಿಷಗಳಲ್ಲಿ 1% ಯಿಂದ 75% ಬ್ಯಾಟರಿ ಚಾರ್ಜ್ ಮಾಡುವುದು ಎನ್ನಲಾಗಿದೆ.

ಇನ್ನು ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಜೆಬಿಎಲ್‌ ಸ್ಟಿರಿಯೊ ಸ್ಪೀಕರ್‌ಗಳು, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, 3.55 ಎಂಎಂ ಆಡಿಯೊ ಜ್ಯಾಕ್ ಸಪೋಟ್‌ ಸಹ ಪಡೆದಿದೆ. ಇನ್ನು ಈ ಫೋನ್‌ 4 GB ಮತ್ತು 128 GB ಹಾಗೂ 8 GB RAM ಮತ್ತು 256 GB ವೇರಿಯಂಟ್‌ಗಳಲ್ಲಿ ಲಭ್ಯ ಇದ್ದು, ಜೊತೆಗೆ ಮ್ಯಾಜಿಕ್ ಬ್ಲ್ಯಾಕ್, ಇಂಟರ್‌ಸ್ಟೆಲ್ಲರ್ ಬ್ಲೂ ಮತ್ತು ಸನ್‌ಸೆಟ್ ಗೋಲ್ಡ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Infinix Note 30 5G with 108MP Camera goes on sale in India on Flipkart: Check Price, offers and specs.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+