Home
ಸುದ್ದಿಜಾಲ

ಭಾರತಕ್ಕೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್‌ ನೋಟ್‌ 30 5G ಫೋನ್‌!..ಬೆಲೆ ಮತ್ತು ಲಭ್ಯತೆ!

ಭಾರತದ ಮಾರುಕಟ್ಟೆಯಲ್ಲಿ ಇನ್ಫಿನಿಕ್ಸ್‌ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಇದೀಗ ಭಾರತದಲ್ಲಿ ಹೊಸ ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಬೈಪಾಸ್ ಚಾರ್ಜಿಂಗ್ ಮೋಡ್ ಜೊತೆಗೆ 45W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತಕ್ಕೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್‌ ನೋಟ್‌ 30 5G ಫೋನ್‌!ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ನೋಟ್‌ 30 5G ಡಿಸ್‌ಪ್ಲೇ ವಿವರ: ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ 6.78-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ IPS ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 580 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.

ಇನ್ಫಿನಿಕ್ಸ್‌ ನೋಟ್‌ 30 5G ಪ್ರೊಸೆಸರ್‌ ಯಾವುದು: ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಆಕ್ಟಾ-ಕೋರ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13-ಆಧಾರಿತ XOS 13 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಭಾರತಕ್ಕೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್‌ ನೋಟ್‌ 30 5G ಫೋನ್‌!ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ನೋಟ್‌ 30 5G ಕ್ಯಾಮೆರಾ ಸೆಟ್‌ಅಪ್‌: ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನುಳಿದ ಎರಡು ಕ್ಯಾಮೆರಾ ವಿವರಗಳು ಬಹಿರಂಗವಾಗಿಲ್ಲ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಇನ್ಫಿನಿಕ್ಸ್‌ ನೋಟ್‌ 30 5G ಬ್ಯಾಟರಿ ಸಾಮರ್ಥ್ಯ: ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 45W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, Wi-Fi, ಬ್ಲೂಟೂತ್, GPS, NFC, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸುತ್ತದೆ. ಹ್ಯಾಂಡ್‌ಸೆಟ್‌ನಲ್ಲಿರುವ ಸಂವೇದಕಗಳು ಸುತ್ತುವರಿದ ಬೆಳಕಿನ ಸಂವೇದಕ, ಇ-ದಿಕ್ಸೂಚಿ, ಗೈರೊಸ್ಕೋಪ್, ಬೆಳಕಿನ ಸಂವೇದಕ ಮತ್ತು ಸಾಮೀಪ್ಯ ಸಂವೇದಕವನ್ನು ಒಳಗೊಂಡಿವೆ.

ಭಾರತಕ್ಕೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್‌ ನೋಟ್‌ 30 5G ಫೋನ್‌!ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ನೋಟ್‌ 30 5G ಬೆಲೆ ಮತ್ತು ಲಭ್ಯತೆ: ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB + 128GB RAM ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗೆ 14,999ರೂ. ಬೆಲೆಯನ್ನು ಹೊಂದಿದೆ. ಆದರೆ 8GB + 128GB ರೂಪಾಂತರದ 15,999ರೂ. ಬೆಲೆಯನ್ನು ಪಡೆದುಕೊಂಡಿದೆ. ಆಕ್ಸಿಸ್ ಬ್ಯಾಂಕ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ವಹಿವಾಟಿನ ಮೇಲೆ 1,000ರೂ. ರಿಯಾಯಿತಿಯನ್ನು ಒಳಗೊಂಡಿದೆ.

Best Mobiles in India

English summary
Infinix Note 30 5G With Bypass Charging Support Launched in India: Price and Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+