ಭಾರತದಲ್ಲಿ ಇನ್ಫಿನಿಕ್ಸ್ ನೋಟ್ 30 VIP ರೇಸಿಂಗ್ ಆವೃತ್ತಿ ಎಂಟ್ರಿಗೆ ತಯಾರಿ!
ಭಾರತದಲ್ಲಿ ಇನ್ಫಿನಿಕ್ಸ್ ಸ್ಮಾರ್ಟ್‌ಫೋನ್‌ಗಳಿಗೆ ಒಳ್ಳೆ ಮಾರುಕಟ್ಟೆಯಿದೆ. ಬಜೆಟ್ ಹಾಗೂ ಮಿಡ್‌ರೇಂಜ್ ಸ್ಮಾರ್ಟ್‌ಫೋನ್ ಪ್ರಿಯರಿಗೆ ಇನ್ಫಿನಿಕ್ಸ್ ಬೆಸ್ಟ್ ಆಯ್ಕೆಯಾಗಿದೆ. ಇದಕ್ಕೆ ತಕ್ಕಂತೆ ಇನ್ಫಿನಿಕ್ಸ್ ಕೂಡ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ಹೊಸ ಇನ್ಫಿನಿಕ್ಸ್ ನೋಟ್ 30 VIP ರೇಸಿಂಗ್ ಆವೃತ್ತಿ ಪರಿಚಯಿಸಲು ತಯಾರಿ ನಡೆಸಿದೆ.
ಹೌದು, ಇನ್ಫಿನಿಕ್ಸ್ ನೋಟ್ 30 VIP ರೇಸಿಂಗ್ ಆವೃತ್ತಿ ಸ್ಮಾರ್ಟ್‌ಫೋನ್ ಭಾರತಕ್ಕೆ ಶೀಘ್ರದಲ್ಲೇ ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್ ಎಂಟ್ರಿಗೆ ವೇದಿಕೆ ಸಿದ್ಧವಾಗಿದೆ ಎಂದು ಆನ್‌ಲೈನ್‌ನಲ್ಲಿ ವರದಿಯಾಗಿದೆ. ಇದಲ್ಲದೆ ಬಿಡುಗಡೆಗೂ ಮುನ್ನವೇ ಈ ಸ್ಮಾರ್ಟ್‌ಫೀನ್ ಫೀಚರ್ಸ್ ಕೂಡ ಬಹಿರಂಗಪಡಿಸಲಾಗಿದೆ. ಹಾಗಾದ್ರೆ ಇನ್ಫಿನಿಕ್ಸ್ ನೋಟ್ 30 VIP ರೇಸಿಂಗ್ ಆವೃತ್ತಿ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ 30 VIP ರೇಸಿಂಗ್ ಆವೃತ್ತಿ ಡಿಸ್‌ಪ್ಲೇ ಹೇಗಿದೆ?
ಇನ್ಫಿನಿಕ್ಸ್ 30 VIP ರೇಸಿಂಗ್ ಆವೃತ್ತಿ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದ್ದು, 900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ 1920Hz ನ PWM ಡಿಮ್ಮಿಂಗ್ ಅನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.
ಇನ್ಫಿನಿಕ್ಸ್ 30 VIP ರೇಸಿಂಗ್ ಆವೃತ್ತಿ ಪ್ರೊಸೆಸರ್ ನಿರೀಕ್ಷೆ?
ಇನ್ಫಿನಿಕ್ಸ್ 30 VIP ರೇಸಿಂಗ್ ಆವೃತ್ತಿ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8050 SoC ಪ್ರೊಸೆಸರ್ ವೇಗದೊಂದಿಗೆ ಬರಲಿದೆ. ಇದು ಆಂಡ್ರಾಯ್ಡ್ 13 ಆಧಾರಿತ XOS 13 ನೊಂದಿಗೆ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ARM G77 MC9 GPU ಸಪೊರ್ಟ್ ಪಡೆದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್‌ನೊಂದಿಗೆ ಬರಲಿದೆ. ಇದು ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಬರಲಿದೆಯಾ ಅನ್ನೊದರ ಬಗ್ಗೆ ಯಾವುದೇ ಮಾಹಿತಿಯಿಲ್ಲ.
ಇನ್ಫಿನಿಕ್ಸ್ 30 VIP ರೇಸಿಂಗ್ ಆವೃತ್ತಿ ಕ್ಯಾಮೆರಾ ಸೆಟ್‌ಅಪ್
ಇನ್ಫಿನಿಕ್ಸ್ 30 VIP ರೇಸಿಂಗ್ ಆವೃತ್ತಿ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ.
ಇನ್ಫಿನಿಕ್ಸ್ 30 VIP ರೇಸಿಂಗ್ ಆವೃತ್ತಿ ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ 30 VIP ರೇಸಿಂಗ್ ಆವೃತ್ತಿ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 68W ವೈರ್ಡ್ ಮತ್ತು 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್ 4G VoLTE, Wi-Fi 802.11 ac, ಬ್ಲೂಟೂತ್ 5.2, GPS/GLONASS, NFC ಮತ್ತು USB ಟೈಪ್-C ಸಂಪರ್ಕವನ್ನು ಬೆಂಬಲಿಸುವ ಸಾಧ್ಯತೆಯಿದೆ.
ಇನ್ಫಿನಿಕ್ಸ್ 30 VIP ರೇಸಿಂಗ್ ಆವೃತ್ತಿ ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ 30 VIP ರೇಸಿಂಗ್ ಆವೃತ್ತಿ ಸ್ಮಾರ್ಟ್‌ಫೋನ್ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಮಿಡ್‌ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿ ಬರುವ ನಿರೀಕ್ಷೆಯಿದೆ. ಇದರ ಬಿಡುಗಡೆ ದಿನಾಂಕದ ಬಗ್ಗೆ ಇನ್ನಷ್ಟು ಅಪ್ಡೇಟ್‌ಗಳು ಸಿಗಬೇಕಿದೆ.


Click it and Unblock the Notifications








