ಸದ್ಯದಲ್ಲೇ ಎಂಟ್ರಿ ನೀಡಲಿದೆ ಇನ್ಫಿನಿಕ್ಸ್ ನೋಟ್ 30 VIP! ಯಾಕಿಷ್ಟು ನಿರೀಕ್ಷೆ?
ಇನ್ಫಿನಿಕ್ಸ್ ಕಂಪೆನಿ ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸುವ ಸುಳಿವು ನೀಡಿದೆ. ತನ್ನ ಹೊಸ ಇನ್ಫಿನಿಕ್ಸ್ ನೋಟ್ 30 VIP ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧತೆ ನಡೆಸಿದ್ದು, ತನ್ನ ಫೀಚರ್ಸ್ ಮೂಲಕ ಸಂಚಲನ ಮೂಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇನ್ಫಿನಿಕ್ಸ್ ನೋಟ್ 12 VIPಯ ಉತ್ತರಾಧಿಕಾರಿಯಾಗಿದೆ ಎನ್ನಲಾಗಿದೆ.
ಹೌದು, ಇನ್ಫಿನಿಕ್ಸ್ ಶೀಘ್ರದಲ್ಲೇ ಇನ್ಫಿನಿಕ್ಸ್ ನೋಟ್ 30VIP ಫೋನ್ ಪರಿಚಯಿಸಲಿದೆ. ಈ ಸ್ಮಾರ್ಟ್‌ಫೋನ್ ಬ್ಲೂಟೂತ್ 5.3 ಸಂಪರ್ಕವನ್ನು ಹೊಂದಿರುತ್ತದೆ ಎಂದು ವರದಿಯಾಗಿದೆ. ಜೊತೆಗೆ ಇದು 5,000mAh ಸಾಮರ್ಥ್ಯದ ಬ್ಯಾಟರಿ ಮತ್ತು 68W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ಫೀಚರ್ಸ್ ನಿರೀಕ್ಷಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ ನೋಟ್ 30 VIP ಫೀಚರ್ಸ್ ನಿರೀಕ್ಷೆ ಏನು?
ಇನ್ಫಿನಿಕ್ಸ್ ವೆಬ್‌ಸೈಟ್ ತನ್ನ "ಡಿಕ್ಲರೇಶನ್ ಆಫ್ ಕಾನ್ಫಾರ್ಮಿಟಿ" ಪೇಜ್‌ನಲ್ಲಿ ಈ ಸ್ಮಾರ್ಟ್‌ಫೋನ್ ವಿವರವನ್ನು ಲಿಸ್ಟ್ ಮಾಡಿದೆ. ಅದರಂತೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 68W ವೇಗದ ಚಾರ್ಜಿಂಗ್ ಬೆಂಬಲವನ್ನು ನೀಡಲಿದೆ ಎಂದು ವರದಿಯಾಗಿದೆ. ಅಲ್ಲದೆ ಈ ಹಿಂದಿನ ಇನ್ಫಿನಿಕ್ಸ್ ನೋಟ್ 12 VIP ಸ್ಮಾರ್ಟ್‌ಫೋನ್‌ಗಿಂತ ಭಿನ್ನವಾದ ಡಿಸೈನ್‌ನಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.
ಇನ್ಫಿನಿಕ್ಸ್ ನೋಟ್12 VIP ಫೀಚರ್ಸ್ ಹೇಗಿದೆ?
ಇನ್ಫಿನಿಕ್ಸ್ ನೋಟ್12 VIP ಸ್ಮಾರ್ಟ್‌ಫೋನ್ 6.7 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲವನ್ನು ಪಡೆದಿದ್ದು, 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಡಿಸ್‌ಪ್ಲೇ 93.1% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಇನ್ಫಿನಿಕ್ಸ್ ನೋಟ್12 VIP ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ನೋಟ್12 VIP ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G96 ಚಿಪ್‌ಸೆಟ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 OS ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಇನ್ಫಿನಿಕ್ಸ್ ನೋಟ್12 VIP ಕ್ಯಾಮೆರಾ ಸೆಟ್‌ಅಪ್ ಏನಿದೆ?
ಇನ್ಫಿನಿಕ್ಸ್ ನೋಟ್12 VIP ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಇನ್ಫಿನಿಕ್ಸ್ ನೋಟ್12 VIP ಬ್ಯಾಟರಿ ಬ್ಯಾಕ್‌ಅಪ್ ಏನಿದೆ?
ಇನ್ಫಿನಿಕ್ಸ್ ನೋಟ್12 VIP ಸ್ಮಾರ್ಟ್‌ಫೋನ್ 120W ಹೈಪರ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದ್ದು, 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಅನ್ನು ಒಳಗೊಂಡಿದೆ.
ಇದಲ್ಲದೆ ಇನ್ಫಿನಿಕ್ಸ್ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ತನ್ನ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಇನ್ಫಿನಿಕ್ಸ್ ಸ್ಮಾರ್ಟ್ 7 ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6.6-ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೊಕ್ SC9863A1 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಹ್ಯಾಂಡ್ಸೆಟ್ XOS 12ನಲ್ಲಿ ಕಾರ್ಯನಿರ್ವಹಿಸಲಿದೆ. ಇದಲ್ಲದೆ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡದಿದೆ. ಇದರ ಮುಖ್ಯ ಕ್ಯಾಮೆರಾ 13MP ಸೆನ್ಸಾರ್ ಮತ್ತು ಎರಡನೆ ಕ್ಯಾಮೆರಾ 2MP ಸೆನ್ಸಾರ್ ಹೊಂದಿದೆ. ಇನ್ನು ಹಿಂಬದಿಯಲ್ಲಿ ಡ್ಯುಯಲ್ LED ಫ್ಲ್ಯಾಷ್ ಸೆಟಪ್ ಅನ್ನು ಅಳವಡಿಸಲಾಗಿದೆ.


Click it and Unblock the Notifications








