ಸೈಲೆಂಟ್ ಆಗಿ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 30i ಫೋನ್! ಡಿಸೈನ್‌ಗೆ ಫಿದಾ ಆಗೋದು ಗ್ಯಾರಂಟಿ?
ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್ ತಯಾರಕ ಇನ್ಫಿನಿಕ್ಸ್ ಹೊಸ ಇನ್ಫಿನಿಕ್ಸ್ ನೋಟ್ 30i ಸ್ಮಾರ್ಟ್‌ಫೋನ್ ಅನ್ನು ಸೈಲೆಂಟ್ ಆಗಿ ಅನಾವರಣಗೊಳಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮಿಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಎಂಟ್ರಿ ನೀಡಿದೆ.
ಹೌದು, ಇನ್ಫಿನಿಕ್ಸ್ ನೋಟ್ 30i ಸ್ಮಾರ್ಟ್‌ಫೋನ್ ಸದ್ದಿಲ್ಲದೆ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿಯನ್ನು ಹೊಂದಿರುವುದು ಮೇನ್ ಹೈಲೈಟ್ ಆಗಿದೆ. ಇನ್ನು ಸ್ಮಾರ್ಟ್‌ಫೋನ್ 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ ನೋಟ್ 30i ಡಿಸ್‌ಪ್ಲೇ ರಚನೆ
ಇನ್ಫಿನಿಕ್ಸ್ ನೋಟ್ 30i ಸ್ಮಾರ್ಟ್‌ಫೋನ್ 6.6 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು FHD+ ರೆಸಲ್ಯೂಶನ್, 180Hz ಟಚ್ ಸ್ಯಾಪ್ಲಿಂಗ್ ರೇಟ್ ಮತ್ತು 60Hz ರಿಫ್ರೆಶ್ ರೇಟ್ ಅನ್ನು ನೀಡಲಿದೆ. ಇನ್ನು ಡಿಸ್‌ಪ್ಲೇ 92% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ.
ಇನ್ಫಿನಿಕ್ಸ್ ನೋಟ್ 30i ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ನೋಟ್ 30i ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಇನ್ಫಿನಿಕ್ಸ್ ನೋಟ್ 30i ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನುಳಿದ ಎರಡು ಕ್ಯಾಮೆರಾಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದಲ್ಲದೆ ಈ ಫೋನ್ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಇನ್ಫಿನಿಕ್ಸ್ ನೋಟ್ 30i ಬ್ಯಾಟರಿ ಮತ್ತು ಇತರೆ ಫೀಚರ್ಸ್
ಇನ್ಫಿನಿಕ್ಸ್ ನೋಟ್ 30i ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದು ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ದೂಳು ಮತ್ತು ನೀರಿನಿಂದ ರಕ್ಷಣೆಗಾಗಿ IP53-ರೇಟೆಡ್ ಅನ್ನು ಹೊಂದಿದೆ.

ಇನ್ಫಿನಿಕ್ಸ್ ನೋಟ್ 30i ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ನೋಟ್ 30i ಸ್ಮಾರ್ಟ್‌ಫೋನ್ ಬೆಲೆಯನ್ನು ಇನ್ನೂ ದೃಢೀಕರಿಸಲಾಗಿಲ್ಲ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇನ್ನು ಕೂಡ ಬಹಿರಂಗವಾಗಿಲ್ಲ. ಸದ್ಯ ಈ ಸ್ಮಾರ್ಟ್‌ಫೋನ್ ಅಬ್ಸಿಡಿಯನ್ ಕಪ್ಪು, ವೇರಿಯಬಲ್ ಗೋಲ್ಡ್ ಮತ್ತು ಇಂಪ್ರೆಷನ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.
ಇದಲ್ಲದೆ ಇನ್ಫಿನಿಕ್ಸ್ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಹೊಸ ಇನ್ಫಿನಿಕ್ಸ್ ಸ್ಮಾರ್ಟ್ 7 HD ಬಿಡುಗಡೆ ಮಾಡಿದೆ. ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಯುನಿಸೋಕ್ SC9863A1 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 (ಗೋ ಎಡಿಷನ್) ಆಧಾರಿತ XOS 12 ನಲ್ಲಿ ಕಾರ್ಯನಿರ್ವಹಿಸಲಿದೆ.ಸ್ಮಾರ್ಟ್‌ಫೋನ್ AI-ಬೆಂಬಲಿತ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್ ಚಾರ್ಜ್‌ನಲ್ಲಿ 39 ಗಂಟೆಗಳ ಕಾಲಿಂಗ್ ಟೈಂ, 50 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ಟೈಂ ಮತ್ತು 30 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ ಎಂದು ಹೇಳಲಾಗಿದೆ.


Click it and Unblock the Notifications








