Home
ಸುದ್ದಿಜಾಲ

ನಾಳೆ ಈ ಜಬರ್ದಸ್ತ್‌ ಸ್ಮಾರ್ಟ್‌ಫೋನಿನ ಸೇಲ್‌ ಪ್ರಾರಂಭ; ಏನಾದ್ರೂ ಆಫರ್‌ ಇದೆಯಾ?

ಇನ್ಫಿನಿಕ್ಸ್‌ ಕಂಪನಿಯು ಇತ್ತೀಚಿಗೆ ಹೊಸದಾಗಿ ಭಾರತದಲ್ಲಿ ಬಿಡುಗಡೆ ಮಾಡಿರುವ ಇನ್ಫಿನಿಕ್ಸ್‌ ನೋಟ್‌ 40 5G (Infinix Note 40 5G) ಫೋನ್‌ ಈಗಾಗಲೇ ಬೆಲೆ ಹಾಗೂ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಈ ಮೊಬೈಲ್‌ ನಾಳೆ (ಜೂನ್‌ 26 ರಂದು) ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಅಂದಹಾಗೆ ಈ ಫೋನಿನ ಆರಂಭಿಕ ಕೊಡುಗೆಯ ಬೆಲೆ 19,999ರೂ. ಆಗಿದೆ. ಇನ್ನು ಈ ಫೋನ್‌ ತ್ರಿವಳಿ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಆಗಿದೆ.

ಹೌದು, ಮೊಟೊ ಸಂಸ್ಥೆಯ ಇತ್ತೀಚಿನ ಇನ್ಫಿನಿಕ್ಸ್‌ ನೋಟ್‌ 40 5G ಫೋನಿನ ಮಾರಾಟ ನಾಳೆ (ಜೂ 26) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ನಲ್ಲಿ ಪ್ರಾರಂಭ ಆಗಲಿದೆ. ಈ ಫೋನ್‌ 8 GB RAM ಮತ್ತು 256 GB ವೇರಿಯಂಟ್‌ ಆಯ್ಕೆ ಪಡೆದಿದ್ದು, ಇದರೊಂದಿಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದುಕೊಂಡಿದೆ.

ನಾಳೆ ಈ ಜಬರ್ದಸ್ತ್‌ ಸ್ಮಾರ್ಟ್‌ಫೋನಿನ ಸೇಲ್‌ ಪ್ರಾರಂಭ; ಏನಾದ್ರೂ ಆಫರ್‌ ಇದೆಯಾ?

ಇನ್ಫಿನಿಕ್ಸ್‌ ನೋಟ್‌ 40 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಇದು ಗೋಲ್ಡ್‌ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಇನ್ಫಿನಿಕ್ಸ್‌ ನೋಟ್‌ 40 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಇನ್ಫಿನಿಕ್ಸ್‌ ನೋಟ್‌ 40 5G - ಫೀಚರ್ಸ್‌

ಇನ್ಫಿನಿಕ್ಸ್‌ ನೋಟ್‌ 40 5G ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 2436×1080 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಒಳಗೊಂಡಿದೆ ಜೊತೆಗೆ 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದಿದೆ. 1300nits ಗರಿಷ್ಠ ಬ್ರೈಟ್‌ನೆಸ್ ಅನ್ನು ಪಡೆದಿದೆ.

ಇನ್ಫಿನಿಕ್ಸ್‌ ನೋಟ್‌ 40 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದು ಆಂಡ್ರಾಯ್ಡ್ 14 ಆಧಾರಿತ XOS 14 ಸಪೋರ್ಟ್‌ ಕೂಡಾ ಪಡೆದುಕೊಂಡಿದೆ. ಹಾಗೆಯೇ 12 GB RAM + 512 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಇನ್ಫಿನಿಕ್ಸ್‌ ನೋಟ್‌ 40 5G ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 2 ಮೆಗಾಪಿಕ್ಸಲ್‌ ಮೈಕ್ರೋ ಹಾಗೂ 2 ಮೆಗಾ ಪಿಕ್ಸಲ್‌ ಡೆಪ್ತ್ ಕ್ಯಾಮೆರಾ ಸೆನ್ಸಾರ್ ಪಡೆದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಇನ್ಫಿನಿಕ್ಸ್‌ ನೋಟ್‌ 40 5G ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದೊಂದಿಗೆ 33 W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್, ಜೆಬಿಎಲ್‌ ಸ್ಟಿರಿಯೊ ಸ್ಪೀಕರ್ ಸೆಟ್‌ಅಪ್‌ ಸೌಲಭ್ಯಗಳನ್ನು ಕಾಣಬಹುದಾಗಿದೆ.

ಅಲ್ಲದೇ 5G, 4G, Wi-Fi, ಬ್ಲೂಟೂತ್, GPS, NFC, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್ C ಪೋರ್ಟ್ ಇವೆ. ಈ ಫೋನ್‌ ಟೈಟಾನ್‌ ಗೋಲ್ಡ್‌ ಹಾಗೂ ವಿಂಟೇಜ್‌ ಗ್ರೀನ್‌ ಕಲರ್‌ ಆಯ್ಕೆ ಅನ್ನು ಪಡೆದುಕೊಂಡಿದೆ. ಈ ಫೋನ್‌ IP53 ಧೂಳು ಹಾಗೂ ನೀರು ನಿರೋಧಕವಾಗಿದೆ.

Best Mobiles in India

English summary
Infinix Note 40 5G goes on sale in India tomorrow: Know offer, Price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+