Home
ಸುದ್ದಿಜಾಲ

ಇನ್ಫಿನಿಕ್ಸ್‌ ನೋಟ್‌ 40 5G ಫೋನ್‌ ಬಿಡುಗಡೆ; ಸಖತ್‌ ಸ್ಟೈಲಿಶ್‌ ಲುಕ್‌!

ಇನ್ಫಿನಿಕ್ಸ್‌ ಮೊಬೈಲ್‌ ಸಂಸ್ಥೆಯು ಅಗ್ಗದ ಹಾಗೂ ಬಜೆಟ್‌ ದರದ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಇದೀಗ ಇನ್ಫಿನಿಕ್ಸ್‌ ಸಂಸ್ಥೆಯು ಹೊಸದಾಗಿ ಇನ್ಫಿನಿಕ್ಸ್‌ ನೋಟ್‌ 40 5G (Infinix Note 40 5G) ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ.

ಹೌದು, ಇನ್ಫಿನಿಕ್ಸ್‌ ನೋಟ್‌ 40 5G ಸ್ಮಾರ್ಟ್‌ಫೋನ್‌ ಗ್ಲೋಬಲ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಇದರ ಜೊತೆಗೆ 33W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡಲಿದೆ. ಅಲ್ಲದೇ 108 ಮೆಗಾ ಪಿಕ್ಸಲ್‌ ಸೆನ್ಸಾರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ.

ಇನ್ಫಿನಿಕ್ಸ್‌ ನೋಟ್‌ 40 5G ಫೋನ್‌ ಬಿಡುಗಡೆ; ಸಖತ್‌ ಸ್ಟೈಲಿಶ್‌ ಲುಕ್‌!

ಇನ್ನು ಈ ಫೋನ್‌ 12GB RAM + 512GB ಸ್ಟೋರೇಜ್‌ ಆಯ್ಕೆ ಪಡೆದಿದ್ದು, ಅಲ್ಲದೇ 12GB ವಿಸ್ತರಿಸಬಹುದಾದ RAM ಸೌಲಭ್ಯವನ್ನು ಕೂಡಾ ಪಡೆದುಕೊಂಡಿದೆ. ಇನ್ನುಳಿದಂತೆ ಇನ್ಫಿನಿಕ್ಸ್‌ ನೋಟ್‌ 40 5G ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಇನ್ಫಿನಿಕ್ಸ್‌ ನೋಟ್‌ 40 5G ಫೀಚರ್ಸ್‌

ಇನ್ಫಿನಿಕ್ಸ್‌ ನೋಟ್‌ 40 5G ಮೊಬೈಲ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 2436×1080 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಒಳಗೊಂಡಿದೆ ಜೊತೆಗೆ 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದಿದೆ. 1300nits ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.

ಇನ್ಫಿನಿಕ್ಸ್‌ ನೋಟ್‌ 40 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದು ಆಂಡ್ರಾಯ್ಡ್ 14 ಆಧಾರಿತ XOS 14 ಸಪೋರ್ಟ್‌ ಕೂಡಾ ಪಡೆದುಕೊಂಡಿದೆ. ಹಾಗೆಯೇ 12GB RAM + 512 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಇನ್ಫಿನಿಕ್ಸ್‌ ನೋಟ್‌ 40 5G ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 2 ಮೆಗಾಪಿಕ್ಸಲ್‌ ಮೈಕ್ರೋ ಹಾಗೂ 2 ಮೆಗಾ ಪಿಕ್ಸಲ್‌ ಡೆಪ್ತ್ ಕ್ಯಾಮೆರಾ ಸೆನ್ಸಾರ್ ಪಡೆದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಇನ್ಫಿನಿಕ್ಸ್‌ ನೋಟ್‌ 40 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದೊಂದಿಗೆ 33 W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್, ಜೆಬಿಎಲ್‌ ಸ್ಟಿರಿಯೊ ಸ್ಪೀಕರ್ ಸೆಟ್‌ಅಪ್‌ ಸೌಲಭ್ಯಗಳನ್ನು ಕಾಣಬಹುದಾಗಿದೆ. ಅಲ್ಲದೇ 5G, 4G, Wi-Fi, ಬ್ಲೂಟೂತ್, GPS, NFC, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್ C ಪೋರ್ಟ್ ಇವೆ.

ಈ ಫೋನ್‌ ಟೈಟಾನ್‌ ಗೋಲ್ಡ್‌ ಹಾಗೂ ವಿಂಟೇಜ್‌ ಗ್ರೀನ್‌ ಕಲರ್‌ ಆಯ್ಕೆ ಅನ್ನು ಪಡೆದುಕೊಂಡಿದೆ. ಈ ಫೋನ್‌ IP53 ಧೂಳು ಹಾಗೂ ನೀರು ನಿರೋಧಕವಾಗಿದೆ. ಭಾರತದಲ್ಲಿ ಈ ಫೋನ್‌ ಬಿಡುಗಡೆಯ ಬಗ್ಗೆ ಸಂಸ್ಥೆಯು ಇನ್ನೂ ಖಚಿತಪಡಿಸಿಲ್ಲ.

Best Mobiles in India

English summary
Infinix Note 40 5G Launched. Check Price, Specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+