ಇಂದು ಇನ್ಫಿನಿಕ್ಸ್ ನೋಟ್ 40 5G ಫಸ್ಟ್ ಸೇಲ್; ಅಚ್ಚರಿಯ ಬೆಲೆ, ಬೊಂಬಾಟ್ ಫೀಚರ್ಸ್!
ಜನಪ್ರಿಯ ಇನ್ಫಿನಿಕ್ಸ್ ಸಂಸ್ಥೆಯು ಭಾರತದಲ್ಲಿ ನೂತನವಾಗಿ ಬಿಡುಗಡೆ ಮಾಡಿರುವ ಇನ್ಫಿನಿಕ್ಸ್ ನೋಟ್ 40 5G (Infinix Note 40 5G) ಮೊಬೈಲ್ ಬೆಲೆ ಹಾಗೂ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಮೊಬೈಲ್ ಇಂದು (ಜೂನ್ 26 ರಂದು) ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಸೇಲ್ ಮಾಡಲಿದೆ. ಅಂದಹಾಗೆ ಈ ಫೋನಿನ ಆರಂಭಿಕ ಕೊಡುಗೆಯ ಬೆಲೆ 19,999ರೂ. ಆಗಿದೆ. ಇನ್ನು ಈ ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಆಗಿದೆ.
ಹೌದು, ಇನ್ಫಿನಿಕ್ಸ್ ಸಂಸ್ಥೆಯ ಇತ್ತೀಚಿನ ಇನ್ಫಿನಿಕ್ಸ್ ನೋಟ್ 40 5G ಫೋನಿನ ಮೊದಲ ಮಾರಾಟ ಇಂದು (ಜೂ 26) ಮಧ್ಯಾಹ್ನ 2 ಗಂಟೆಗೆ ಫ್ಲಿಪ್‌ಕಾರ್ಟ್‌ನಲ್ಲಿ ಶುರು ಆಗಲಿದೆ. ಈ ಫೋನ್ 8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಹೊಂದಿದ್ದು, ಇದರ ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಒಳಗೊಂಡಿದೆ.

ಈ ಹೊಸ ಇನ್ಫಿನಿಕ್ಸ್ ನೋಟ್ 40 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಫೋನ್ ಗೋಲ್ಡ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಇನ್ಫಿನಿಕ್ಸ್ ನೋಟ್ 40 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಇನ್ಫಿನಿಕ್ಸ್ ನೋಟ್ 40 5G ಫೀಚರ್ಸ್ ಹೀಗಿವೆ
ಇನ್ಫಿನಿಕ್ಸ್ ನೋಟ್ 40 5G ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 2436×1080 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಒಳಗೊಂಡಿದೆ ಜೊತೆಗೆ 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದಿದೆ. ಅಲ್ಲದೇ 1300nits ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.
ಇನ್ಫಿನಿಕ್ಸ್ ನೋಟ್ 40 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದು ಆಂಡ್ರಾಯ್ಡ್ 14 ಆಧಾರಿತ XOS 14 ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಹಾಗೆಯೇ 12 GB RAM + 512 GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.
ಇನ್ಫಿನಿಕ್ಸ್ ನೋಟ್ 40 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 2 ಮೆಗಾಪಿಕ್ಸಲ್ ಮೈಕ್ರೋ ಹಾಗೂ 2 ಮೆಗಾ ಪಿಕ್ಸಲ್ ಡೆಪ್ತ್ ಕ್ಯಾಮೆರಾ ಸೆನ್ಸಾರ್ ಪಡೆದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
ಇನ್ಫಿನಿಕ್ಸ್ ನೋಟ್ 40 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದೊಂದಿಗೆ 33 W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್, ಜೆಬಿಎಲ್ ಸ್ಟಿರಿಯೊ ಸ್ಪೀಕರ್ ಸೆಟ್‌ಅಪ್ ಸೌಲಭ್ಯಗಳನ್ನು ಕಾಣಬಹುದಾಗಿದೆ.
ಹಾಗೆಯೇ ಇದು 5G, 4G, Wi-Fi, ಬ್ಲೂಟೂತ್, GPS, NFC, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್ C ಪೋರ್ಟ್ ಆಯ್ಕೆ ಪಡೆದಿದೆ. ಈ ಫೋನ್ ಟೈಟಾನ್ ಗೋಲ್ಡ್ ಹಾಗೂ ವಿಂಟೇಜ್ ಗ್ರೀನ್ ಕಲರ್ ಆಯ್ಕೆ ಅನ್ನು ಹೊಂದಿದ್ದು, ಈ ಫೋನ್ IP53 ಧೂಳು ಹಾಗೂ ನೀರು ನಿರೋಧಕವಾಗಿದೆ.


Click it and Unblock the Notifications








